news18-kannada Updated:August 14, 2020, 5:56 PM IST
ಎಸ್ ಪಿ ಬಾಲಸುಬ್ರಹ್ಮಣ್ಯಂ
ಚೆನ್ನೈ: ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಹಿನ್ನೆಲೆ ಗಾಯಕ 74 ವರ್ಷದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ತಜ್ಞ ವೈದ್ಯರ ತಂಡ ಎಸ್ಪಿಬಿ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ.

ಆಸ್ಪತ್ರೆಯವರು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್.
ಈ ಸಂಬಂಧ ಚೆನ್ನೈನ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಸ್.ಪಿ.ಬಾಲಸುಬ್ರಹ್ಮಣಂ ಅವರು ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾದರು. ಆಗಸ್ಟ್ 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: SP Balasubrahmanyam: ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂಗೆ ಕೊರೋನಾ; ಆಸ್ಪತ್ರೆಗೆ ದಾಖಲು
ಸ್ಯಾಂಡಲ್ವುಡ್, ಬಾಲಿವುಡ್ ಸೇರಿದಂತೆ ದೇಶದ ಹಲವು ಭಾಷೆಗಳ ಚಿತ್ರರಂಗದಲ್ಲಿ ಹಾಡುಗಳಿಗೆ ದನಿಯಾಗಿರುವ ಎಸ್ಪಿಬಿ ಇದುವರೆಗೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
Published by:
HR Ramesh
First published:
August 14, 2020, 5:36 PM IST