Mulayam Singh: ಹೊಟ್ಟೆ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್; ಆಸ್ಪತ್ರೆಗೆ ದಾಖಲು

Mulayam Singh Yadav Health Updates: ಮುಲಾಯಂ ಸಿಂಗ್ ಯಾದವ್ ಹೊಟ್ಟೆ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಈ ಹಿಂದೆ ಕೊಲೊನೋಸ್ಕೋಪಿಕ್ ಚಿಕಿತ್ಸೆಗೂ ಸಹ ಅವರು ಒಳಗಾಗಿದ್ದರು ಎನ್ನಲಾಗುತ್ತಿದೆ.

ಮುಲಾಯಂ ಸಿಂಗ್ ಯಾದವ್‌‌.

ಮುಲಾಯಂ ಸಿಂಗ್ ಯಾದವ್‌‌.

  • Share this:
ಲಕ್ನೋ (ಮೇ 11); ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಭಾನುವಾರ ರಾತ್ರಿ ನಗರದ ಮೆಡಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಬುಧವಾರವೂ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಶನಿವಾರ ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಕೇವಲ 5 ದಿನದ ಅಂತರದಲ್ಲಿ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಿಸುವಂತಾಗಿದೆ.

ಮುಲಾಯಂ ಸಿಂಗ್ ಯಾದವ್ ಹೊಟ್ಟೆ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಈ ಹಿಂದೆ ಕೊಲೊನೋಸ್ಕೋಪಿಕ್ ಚಿಕಿತ್ಸೆಗೂ ಸಹ ಅವರು ಒಳಗಾಗಿದ್ದರು ಎನ್ನಲಾಗುತ್ತಿದೆ.

"ಮುಲಾಯಂ ಸಿಂಗ್ ಅವರ ಕರುಳಿನಲ್ಲಿ ಊತ ಕಾಣಿಸಿಕೊಂಡಿದೆ. ಆದರೆ, ಅವರು ಸ್ಥಿರವಾಗಿದ್ದಾರೆ, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ. ಗ್ಯಾಸ್ಟ್ರೊ-ಸರ್ಜನ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ" ಎಂದು ಮೆಡಂತಾ ಆಸ್ಪತ್ರೆಯ ನಿರ್ದೇಶಕ ಡಾ.ರಾಕೇಶ್ ಕಪೂರ್ ಸುದ್ದಿ ಸಂಸ್ಥೆ ಐಎಎನ್ಎಸ್ಗೆ ತಿಳಿಸಿದ್ದಾರೆ.

ಮುಲಾಯಂ ಸಹೋದರ ಮತ್ತು ಪ್ರಗತಿಶೀಲ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಶಿವಪಾಲ್ ಸಿಂಗ್ ಯಾದವ್ ಮಾತನಾಡಿ, “ತಮ್ಮ ಸಹೋದರನ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಅವರಿಗಾಗಿ ಜನ ಪ್ರಾರ್ಥಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Manmohan Singh: ಮಾಜಿ ಪ್ರಧಾನಿ ಡಾ. ಮನಮೋಹನ್​​​ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು
First published: