Akhilesh Yadav: ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ ಅಖಿಲೇಶ್​; ಎಸ್​ಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು?

ರಾಷ್ಟ್ರೀಯ ಲೋಕ ದಳದೊಂದಿಗೆ ಸಮಾಜವಾದಿ ಪಕ್ಷ ಮೈತ್ರಿಯನ್ನು ಮಾಡಿಕೊಂಡಿದ್ದು, ಸೀಟು ಹಂಚಿಕೆ ಅಂತಿಮಗೊಳಿಸಬೇಕಿದೆ.

ಅಖಿಲೇಶ್ ಯಾದವ್​

ಅಖಿಲೇಶ್ ಯಾದವ್​

  • Share this:
    ಲಕ್ನೋ (ನ. 1): ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗೆ (Uttar Pradesh Election) ಈಗಾಗಲೇ ಸಿದ್ದತೆ ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್​, ಬಿಎಸ್​ಪಿ ಸೇರಿದಂತೆ ಅನೇಕ ಪ್ರಮುಖ ರಾಜಕೀಯ ಪಕ್ಷಗಳು ಸಿದ್ದತೆಯನ್ನು ಆರಂಭಿಸಿವೆ. ಈ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್​ (Samajwadi Party Leader Akhilesh Yadav) ​ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಮಂತ್ರಿ ಮುಖವಾಗಿರುವ ಅವರು ಚುನಾವಣೆಗೆ ಸ್ಪರ್ಧಿಸದಿರುವ ನಿರ್ಧಾರ ಕುತೂಹಲ ಕೂಡ ಮೂಡಿಸಿದೆ. ಈ ಕುರಿತು ಇಂದು ಮಾತನಾಡಿರುವ ಅವರು, ತಾವು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಹೆಚ್ಚು ಗಮನವನ್ನು ಹೊಂದಿದ್ದೇನೆ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಆರ್​ಎಲ್​ಡಿ ಜೊತೆ ಎಸ್​ಪಿ ಮೈತ್ರಿ
    ಅಜಾಂಗರ್​ನ ಸಂಸದರು ಆಗಿರುವ ಅಖಿಲೇಶ್​​​ ಯಾದವ್​ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ರಾಷ್ಟ್ರೀಯ ಲೋಕ ದಳದೊಂದಿಗೆ ಮೈತ್ರಿಯನ್ನು ಕೂಡ ಮಾಡಿಕೊಂಡಿದ್ದು, ಸೀಟು ಹಂಚಿಕೆ ಅಂತಿಮಗೊಳಿಸಬೇಕಿದೆ.
    ಮುಂದಿನ ವರ್ಷ ಅಂದರೆ 2022ರ ಫೆಬ್ರವರಿ ಅಥವಾ ಮಾರ್ಚ್​ನಲ್ಲಿ ರಾಜ್ಯದ 403 ವಿಧಾನ ಸ್ಥಾನಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

    ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಗುರಿ

    2022 ರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ತಮ್ಮ ಪಕ್ಷವಾದ ಸಮಾಜವಾದಿಯನ್ನು ಅಧಿಕಾರಕ್ಕೆ ತರಲು ಉತ್ತರ ಪ್ರದೇಶದ ಎಲ್ಲಾ ವರ್ಗದ ಜನರು ಮನಸ್ಸು ಮಾಡಿದ್ದಾರೆ. ಸಮಾಜವಾದಿ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಬಳಿಕ ಉತ್ತರ ಪ್ರದೇಶವು ಸಮೃದ್ಧಿಯ ಹಾದಿಗೆ ಮರಳುತ್ತದೆ ಎಂಬ ವಿಶ್ವಾಸವನ್ನು ಅಖಿಲೇಶ್​ ವ್ಯಕ್ತಪಡಿಸಿದ್ದಾರೆ

    ಇನ್ನು ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷದ ಲೋಹಿಯಾ (ಪಿಎಸ್‌ಪಿಎಲ್) ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ನನಗೆ ಇದರಿಂದ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಮತ್ತು ಅವರ ಜನರಿಗೆ ಸರಿಯಾದ ಗೌರವವನ್ನು ನೀಡಲಾಗುತ್ತದೆ ಎಂದಿದ್ದಾರೆ.

    ಇದನ್ನು ಓದಿ: ಭಾರತದ ಕೋವ್ಯಾಕ್ಸಿನ್ ಲಸಿಕೆಗೆ ಆಸ್ಟೇಲಿಯಾದ ಅನುಮತಿ: ವ್ಯಾಕ್ಸಿನ್ ಪಡೆದವರಿಗೆ ಆಸ್ಟ್ರೇಲಿಯಾದಲ್ಲಿ ನೋ ಕ್ವಾರಂಟೈನ್

    ರಾಜ್ಯದಲ್ಲಿ ಭರ್ಜರಿ ಪ್ರಚಾರ
    ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಭರ್ಜರಿ ಪ್ರಚಾರ ನಡೆಸಿರುವ ಅಖಿಲೇಶ್ ಯಾದವ್ ಆಡಳಿತಾರೂಢ ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ರಥಾಯಾತ್ರೆ ಆರಂಭಿಸಿದ್ದು,  ಬಿಜೆಪಿ ರಾಜ್ಯದ ಜನರನ್ನು ಮಾತ್ರ ಲೂಟಿ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಜನರು ಕಿತ್ತೊಗೆಯುತ್ತಾರೆ ಎಂದಿದ್ದಾರೆ

    ಇದನ್ನು ಓದಿ: ರೋಮ್ ಶೃಂಗಸಭೆಯಲ್ಲಿ ಅಮೆರಿಕಾ ಅಧ್ಯಕ್ಷರು, ಪೋಪ್ ಅವರನ್ನು ಭೇಟಿಯಾದ PM Modi

    ಕಳೆದ ವಾರ ಒಬ್ಬ ಬಿಜೆಪಿ ಶಾಸಕ ಮತ್ತು ಆರು ಬಿಎಸ್‌ಪಿ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಭಾಜಪಾ ಪರಿವಾರ ಭಾಗ್ತ ಪರಿವಾರ (ಓಡಿಹೋದ ಕುಟುಂಬ) ಆಗಲಿದೆ ಎಂದು ಟೀಕಿಸಿದರು.

    ಕಾಂಗ್ರೆಸ್​ನಿಂದ ಕೂಡ ಭರ್ಜರಿ ಪ್ರಚಾರ
    ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮೊದಲಿಗಿಂತ ಹೆಚ್ಚು ಸಕ್ರಿಯವಾಗಿದೆ. ಪಕ್ಷದ ಚುನಾವಣಾ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯದಲ್ಲಿ ಪ್ರವಾಸಗಳನ್ನು ಮಾಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಭಾನುವಾರ ಗೋರಖ್‌ಪುರದಲ್ಲಿ ನಡೆದ ಸಮಾವೇಶದಲ್ಲಿ ಅವರು ಬಿಜೆಪಿ ಸರ್ಕಾರವಲ್ಲದೆ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿ ಗೋಚರಿಸುತ್ತಿದೆ ಎಂದು ಹೇಳಿದರು. ಎಸ್ಪಿ ಅಧ್ಯಕ್ಷರು ರಸ್ತೆಯಲ್ಲಿ ಎಲ್ಲೂ ಕಾಣುತ್ತಿಲ್ಲ. ಕಾಂಗ್ರೆಸ್ ಜನಪರ ಹೋರಾಟ ನಡೆಸುತ್ತಿದೆ ಎಂದು ಟೀಕಿಸಿದರು.
    Published by:Seema R
    First published: