SP Balasubrahmanyam: ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿರ; ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್ ಅಳವಡಿಸಿ ನುರಿತ ತಜ್ಞರ ತಂಡ ಚಿಕಿತ್ಸೆ ನಡೆಯುತ್ತಿದೆ.
ಚೆನ್ನೈ(ಆಗಸ್ಟ್ .21): ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಂಬಂಧಪಟ್ಟ ಆಸ್ಪತ್ರೆ ಇಂದು ಎಸ್ಪಿಬಿ ಅವರ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.
ಎಸ್ಪಿಬಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಎಕ್ಮೋ ಮಷಿನ್, ವೆಂಟಿಲೇಟರ್ನಲ್ಲೇ ಇದ್ದಾರೆ, ಜೊತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್ ಅಳವಡಿಸಿ ನುರಿತ ತಜ್ಞರ ತಂಡ ಚಿಕಿತ್ಸೆ ನಡೆಯುತ್ತಿದೆ.
ಹೆಲ್ತ್ ಬುಲೆಟಿನ್.
ಇತ್ತೀಚೆಗೆ ಅಷ್ಟೆ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿತ್ತು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದರು. ಜೊತೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಥಮ್ಸ್ಅಪ್ ತೋರಿಸಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು, ಇದನ್ನು ನೋಡಿದ ಅಭಿಮಾನಿಗಳು ಕೊಂಚ ನಿರಾಳರಾಗಿದ್ದರು. ಆದರೆ, ಈಗ ಮತ್ತೆ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿರುವುದರಿಂದ ಅಭಿಮಾನಿಗಳು ಕಂಗಾಲಾಗಿದ್ದಾರೆ.
ಎಸ್ಪಿಬಿಯವರ ಆರೋಗ್ಯ ಗಂಭೀರವಾಗುತ್ತಿದಂತೆ ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶದ್ಯಾಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.
ಸ್ಯಾಂಡಲ್ವುಡ್, ಬಾಲಿವುಡ್ ಸೇರಿದಂತೆ ದೇಶದ ಹಲವು ಭಾಷೆಗಳ ಚಿತ್ರರಂಗದಲ್ಲಿ ಹಾಡುಗಳಿಗೆ ದನಿಯಾಗಿರುವ ಎಸ್ಪಿಬಿ ಇದುವರೆಗೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ