ಅಯೋಧ್ಯೆ, ಉತ್ತರ ಪ್ರದೇಶ: ಕೋಟ್ಯಾಂತರ ಹಿಂದೂಗಳ (Hindus) ಶತ ಶತಮಾನಗಳ ಕನಸು (Dreams) ನನಸಾಗುವ ಕಾಲ ಹತ್ತಿರ ಬರುತ್ತಿದೆ. ಅಯೋಧ್ಯೆಯ ಶ್ರೀರಾಮ ದೇಗುಲದಲ್ಲಿ (Ayodhya Sri Rama Temple) ರಾಮಲಲ್ಲಾ (Ram Lalla) ವಿರಾಜಮಾನನಾಗುವ ಶುಭ ದಿನಕ್ಕೆ ಕಾಲ ಕೂಡಿ ಬಂದಿದೆ. ಮಕರ ಸಂಕ್ರಾಂತಿಯ (Makara Sankranti) ಶುಭ ದಿನದಂದು ಅಯೋಧ್ಯೆಯ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದೆ. ಹೌದು, ಮಕರ ಸಂಕ್ರಾಂತಿ ಹಬ್ಬದಂದೇ (Festival) ಶ್ರೀರಾಮನ ಮೂರ್ತಿ (Sri Rama Idol) ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಗೊಳ್ಳಲಿದೆ. ಆದರೆ, ಅದು 2023ರ ಸಂಕ್ರಾಂತಿ ಹಬ್ಬ ಅಲ್ಲ, 2024ರ ಸಂಕ್ರಾಂತಿ ಹಬ್ಬ. ಸತತ ಹೋರಾಟದ ಮೂಲಕ ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಶಿಲಾನ್ಯಾಸ ನೆರವೇರಿಸಿದ ಬಳಿಕ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇನ್ನು ಜನವರಿ 14, 2024ರಲ್ಲಿ ನೂತನ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆ ಮಾಡಲಿದ್ದೇವೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Ram Janmabhoomi Teertha Kshetra Trust) ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.
2023ರ ಡಿಸೆಂಬರ್ ಒಳಗೆ ಮಂದಿರ ನಿರ್ಮಾಣ ಪೂರ್ಣ
ಅಯೋಧ್ಯೆಯಲ್ಲಿ ಶ್ರೀರಾಮ ದೇಗುಲ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ ಶೇಕಡಾ 40ರಷ್ಟು ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್‌ನ ಎರಡು ದಿನಗಳ ಸಭೆ ಇಂದು ನಡೆಯಲಿದೆ. ಸಭೆಗೂ ಮುನ್ನ ಮಂದಿರ ನಿರ್ಮಾಣದ ಕುರಿತು ಮಾಹಿತಿ ನೀಡುವ ವಿಡಿಯೋವನ್ನು ಟ್ರಸ್ಟ್‌ನಿಂದ ಬಿಡುಗಡೆ ಮಾಡಲಾಗಿದೆ. ದೇವಾಲಯದ ನಿರ್ಮಾಣ ಕಾರ್ಯವು ಡಿಸೆಂಬರ್ 2023 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಅಂತ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಮಂದಿರ ನಿರ್ಮಾಣಕ್ಕೆ 1800 ಕೋಟಿ ರೂಪಾಯಿ ವೆಚ್ಚ
ಈಗಾಗಲೇ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ತಜ್ಞರು ಸಲ್ಲಿಸಿದ ವರದಿಯ ಆಧಾರದ ಮೇಲೆ, ರಾಮ ಮಂದಿರ ನಿರ್ಮಾಣಕ್ಕೆ ಮಾತ್ರ 1,800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಟ್ರಸ್ಟ್ ಅಂದಾಜಿಸಿತ್ತು. ಆದರೆ ಜಿಎಸ್ಟಿ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ರೂಪಾಯಿ ತಗುಲಬಹುದೆಂದು ಅಂದಾಜು ಮಾಡಲಾಗಿದೆ. ಮಂದಿರಕ್ಕಾಗಿ ದೇಶಾದ್ಯಂತ ಭಕ್ತರಿಂದ ಪ್ರತಿ ತಿಂಗಳು 50 ಲಕ್ಷಕ್ಕೂ ಅಧಿಕ ದೇಣಿಗೆ ಸಂಗ್ರಹವಾಗಿದೆ. ಈವರೆಗೆ ಅಂದಾಜು 300 ಕೋಟಿ ರೂಪಾಯಿ ಖರ್ಚು ಆಗಿದೆ. ಸಾರ್ವಜನಿಕ ದೇಣಿಗೆಯಿಂದಲೇ ಖರ್ಚು ಭರಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: Explained: ಅಯೋಧ್ಯೆಯಷ್ಟೇ ಮಹತ್ವದ್ದೇಕೆ ಜ್ಞಾನವಾಪಿ ಭೂಮಿ? ಅಷ್ಟಕ್ಕೂ ವಿವಾದಕ್ಕೆ ಒಳಗಾಗಿದ್ದೇಕೆ ಮಸೀದಿ?
ಕೃಷ್ಣ ವರ್ಣದ ರಾಮಲಲ್ಲಾನ ಪ್ರತಿಷ್ಠಾಪನೆ
ಇನ್ನು ಅಯೋಧ್ಯೆ ಮಂದಿರದಲ್ಲಿ ಕೃಷ್ಣ ವರ್ಣದ ಬಾಲ ರಾಮ ಅಥವಾ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ. ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಾಣ ಮಾಡಲಾಗುವುದು ಎಂದು ಟ್ರಸ್ಟ್ ಪ್ರಮುಖರ ಮಹತ್ವದ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪನೆಗೆ ತೀರ್ಮಾನ ಮಾಡಲಾಗಿದೆ.
2019ರಲ್ಲಿ ರಾಮ ಜನ್ಮಭೂಮಿ ವಿವಾದದ ತೀರ್ಪು
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಪಂಚ ನ್ಯಾಯಾಧೀಶರ ಸಂವಿಧಾನ ಪೀಠವು ನವೆಂಬರ್ 9, 2019 ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇದ್ದ ಭೂಮಿ ರಾಮ ಲಲ್ಲಾಗೆ ಸೇರಿದ್ದು ಎಂದು ಸರ್ವಾನುಮತದಿಂದ ತೀರ್ಪು ನೀಡಿತ್ತು.
ಇದನ್ನೂ ಓದಿ: Gyanvapi Masjid Case Timeline: ಜ್ಞಾನವಾಪಿ ಪ್ರಕರಣ, 1991 ರಿಂದ ಈವರೆಗೆ ಏನಾಯ್ತು? ಇಲ್ಲಿದೆ ಟೈಂಲೈನ್
ಭರದಿಂದ ಸಾಗಿದ ಮಂದಿರ ನಿರ್ಮಾಣ ಕಾರ್ಯ
ರಾಮಮಂದಿರದ 'ಗರ್ಭ ಗೃಹ' ಅಥವಾ ದೇವಾಲಯದ ಗರ್ಭಗುಡಿಯ ನಿರ್ಮಾಣಕ್ಕೆ ಈ ವರ್ಷದ ಜೂನ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಡಿಪಾಯ ಹಾಕಿದ್ದರು. ಆಗಸ್ಟ್ 5, 2020 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು ಮತ್ತು ಅಂದಿನಿಂದ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ