ನಟ ಸುಶಾಂತ್‌ ಸಿಂಗ್ ಕುಟುಂಬಕ್ಕೆ ನ್ಯಾಯ ಸಿಗುವ ನಂಬಿಕೆ ನಮಗಿದೆ; ಬಿಹಾರದ ಸಿಎಂ ನಿತೀಶ್‌ ಕುಮಾರ್‌ ವಿಶ್ವಾಸ

ಬಿಹಾರದಲ್ಲಿ ದಾಖಲಾದ ಎಫ್ಐಆರ್ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ನಿಲುವು ನ್ಯಾಯಾಲಯದಲ್ಲಿ ಸಮರ್ಥನೆಯಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಹಾರದ ಸಿಎಂ ನಿತೀಶ್‌ ಕುಮಾರ್‌.

ಬಿಹಾರದ ಸಿಎಂ ನಿತೀಶ್‌ ಕುಮಾರ್‌.

  • Share this:
ನವ ದೆಹಲಿ (ಆಗಸ್ಟ್‌ 19); ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಪಾಟ್ನಾದಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯ ತನಿಖೆ ನಡೆಸಲು ಸಿಬಿಐಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ಇದರ ಬೆನ್ನಿಗೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, "ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂಬ ಕುರಿತು ಬಿಹಾರ ಸರ್ಕಾರಕ್ಕೆ ಸಂಪೂರ್ಣ ನಂಬಿಕೆ ಇದೆ" ಎಂದು ತಿಳಿಸಿದ್ದಾರೆ. "ಸುಪ್ರೀಂಕೋರ್ಟ್ ಆದೇಶದ ಮೂಲಕ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ಬಿಹಾರದ ಸರ್ಕಾರದ ಯಾವುದೇ ರಾಜಕೀಯ ಹಕ್ತಕ್ಷೇಪ ಇಲ್ಲ ಎಂಬುದು ಸಾಬೀತಾಗಿದೆ” ಎಂದು ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ.ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ನಿಮಿಷಗಳಲ್ಲಿ ಈ ಕುರಿತು ಟ್ವಿಟರ್ ಮೂಲಕ ತನ್ನ ಅಭಿಪ್ರಾಯವನ್ನು ಹೊರಹಾಕಿರುವ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, “ಬಿಹಾರದಲ್ಲಿ ದಾಖಲಾದ ಎಫ್ಐಆರ್ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ನಿಲುವು ನ್ಯಾಯಾಲಯದಲ್ಲಿ ಸಮರ್ಥನೆಯಾಗಿದೆ" ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು.

ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ನಡುವೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸ್ವತಃ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಒತ್ತಾಯಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ದಾಖಲಾಗಿತ್ತು.

ಇದನ್ನೂ ಓದಿ : ಭಾರತೀಯ ಪ್ರಯಾಣಿಕರಲ್ಲಿ ಕೊರೋನಾ ಸೋಂಕು; ಆಗಸ್ಟ್‌ ಅಂತ್ಯದವರೆಗೆ ಏರ್‌ ಇಂಡಿಯಾ ವಿಮಾನಕ್ಕೆ ಹಾಂಕಾಂಗ್ ನಿಷೇಧ

ಹೀಗಾಗಿ ನಟಿ ರಿಯಾ ಚಕ್ರವರ್ತಿ ಮತ್ತು ಮಹಾರಾಷ್ಟ್ರ ಸರ್ಕಾರ ಈ ವಿಷಯದಲ್ಲಿ ಬಿಹಾರಕ್ಕೆ ಸಂಪೂರ್ಣ ನ್ಯಾಯವ್ಯಾಪ್ತಿ ಇಲ್ಲ. ಹೀಗಾಗಿ ನಟ ಸುಶಾಂತ್ ಸಿಂಗ್ ಅವರ ತಂದೆ ಪಾಟ್ನಾದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ನ್ಯಾಯಾಲಯದ ಎದುರು ವಾದಿಸಿದ್ದರು.

ಆದರೆ, ಪ್ರಕರಣಕ್ಕೆ ಸಂಬಂಧಿಒಸಿದಂತೆ ಇದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, “ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲು ಯಾವುದೇ ಅಡ್ಡಿಯಿಲ್ಲ ಮತ್ತು ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮುಂಬೈಗೆ ವರ್ಗಾಯಿಸಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ನಟಿ ರಿಯಾ ಚಕ್ರವರ್ತಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
Published by:MAshok Kumar
First published: