ಜೈಪುರ (ಆಗಸ್ಟ್ 09); ರಾಜಸ್ಥಾನ ವಿಧಾನಸಭಾ ಅಧಿವೇಶನ ಸಮೀಪಿಸುತ್ತಿದೆ. ಈ ಅಧಿವೇಶನದಲ್ಲಿ ಎಲ್ಲಾ ಶಾಸಕರು ಸತ್ಯದ ಪರ ನಿಲ್ಲಬೇಕು. ಅಲ್ಲದೆ, ಪ್ರಜಾಪ್ರಭುತ್ವವನ್ನು ಕಾಪಾಡಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಲ್ಲಾ 200 ಮಂದಿ ಶಾಸಕರಿಗೆ ಬಹಿರಂಗವಾಗಿ ಪತ್ರ ಬರೆದು ಒತ್ತಾಯಿಸಿದ್ದಾರೆ.
"ರಾಜಕೀಯದಲ್ಲಿ ಬೀಡುಬಿಟ್ಟಿರುವ ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು" ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಪತ್ರದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೆ, ಪ್ರಜಾಪ್ರಭುತ್ವವನ್ನು ರಕ್ಷಿಸುವಂತೆ ಎಲ್ಲರಿಗೂ ಮನವಿ ಮಾಡುತ್ತೇವೆ. ನಮ್ಮ ಮೇಲೆ ಜನರು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳಬೇಕು, ಮತ್ತು ಕೆಟ್ಟ ಸಂಪ್ರದಾಯವನ್ನು ದೂರವಿಡಬೇಕು. ಜನರ ಅಭಿಪ್ರಾಯ ಕೇಳಬೇಕು ಎಂದು ಸಲಹೆ ನೀಡಿದ್ದಾರೆ.
My appeal to all MLAs is that to save democracy, to maintain people’s confidence in us and to avoid wrong traditions, you should listen to the voice of the people. pic.twitter.com/WYwiSpkCcJ
— Ashok Gehlot (@ashokgehlot51) August 9, 2020
ಇದೇ ಸಂದರ್ಭದಲ್ಲಿ 2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜಸ್ಥಾನ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿರುವ ಗೆಹ್ಲೋಟ್, “ಕೊರೋನಾ ಸಂದರ್ಭದಲ್ಲಿ ಸರ್ಕಾರ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸುತ್ತಿದ್ದರೆ, ವಿರೋಧ ಪಕ್ಷವಾದ ಬಿಜೆಪಿ ನಮ್ಮ ಶಾಸಕರನ್ನೇ ಖರೀದಿಸಿ ಆಡಳಿತ ಸರ್ಕಾರವನ್ನು ಉರುಳಿಸಲು ಸತತವಾಗಿ ಪ್ರಯತ್ನಿಸಿದ್ದು ಕಂಡು ಬರುತ್ತದೆ.
ಆದರೂ, ಈ ಎಲ್ಲಾ ಸವಾಲುಗಳ ನಡುವೆಯೂ ರಾಜ್ಯದ ಆರ್ಥಿಕತೆಯನ್ನು ನಾವು ಸಬಲಗೊಳಿಸಿದ್ದೇವೆ. ಇಂತಹ ಪ್ರಕ್ಷುಬ್ಧ ಸಂದರ್ಭದಲ್ಲೂ ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ದುಷ್ಟ ಶಕ್ತಿಗಳನ್ನು ಕೆಡವಲು ಎಲ್ಲರೂ ಸಹಕರಿಸಬೇಕು” ಎಂದು ಅಶೋಕ್ ಗೆಹ್ಲೋಟ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ನೀವು ಭಾರತೀಯರಾ? ಹಿಂದಿ ಬಾರದು ಎಂದ ಡಿಎಂಕೆ ಸಂಸದೆ ಕನಿಮೊಳಿಗೆ ಏರ್ಪೋರ್ಟ್ ಅಧಿಕಾರಿ ಪ್ರಶ್ನೆ
ಸಚಿನ್ ಪೈಲಟ್ ಸೇರಿ 19 ಕಾಂಗ್ರೆಸ್ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ವಿಧಾನಸಭೆ ಅಧಿವೇಶನ ಆಗಸ್ಟ್ 14 ರಂದು ನಡೆಯಲಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಹಲವು ಶಾಸಕರನ್ನು ಗುಜರಾತ್ನ ರೆಸಾರ್ಟ್ಗೆ ರವಾನಿಸುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ