COVID-19: ಕೋವಿಡ್​ನಿಂದ ಮೃತಪಟ್ಟವರಿಗೆ 50 ಸಾವಿರ ಪರಿಹಾರಕ್ಕೆ ಶಿಫಾರಸ್ಸು; ಸುಪ್ರೀಂಕೋರ್ಟ್​ಗೆ ಕೇಂದ್ರ ಮಾಹಿತಿ

ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 12ರ ಅಡಿ ಕೃಪಾನುದಾನ ಒದಗಿಸುವುದು ಸೇರಿದಂತೆ ಕನಿಷ್ಠ ಮಾನದಂಡಗಳ ಪರಿಹಾರಕ್ಕಾಗಿ ಮಾರ್ಗಸೂಚಿ ರೂಪಿಸುವುದು ಕಡ್ಡಾಯವಾಗಿದೆ ಮತ್ತು ಅದು ವಿವೇಚನಾಧಿಕಾರವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ನವದೆಹಲಿ: ಕೋವಿಡ್‌ ನಿಂದ (Coronavirus) ಮೃತಪಟ್ಟವರಿಗೆ ತಲಾ 50,000 ರೂಪಾಯಿ ಕೃಪಾನುದಾನ ಪರಿಹಾರ ನೀಡಲು ಶಿಫಾರಸ್ಸು ಮಾಡಿರುವುದಾಗಿ ಸುಪ್ರೀಂ ಕೋರ್ಟ್‌ಗೆ (Supreme Court) ಕೇಂದ್ರ ಸರ್ಕಾರವು (Central Government) ತಿಳಿಸಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎಸ್‌ಡಿಆರ್‌ಎಫ್‌) ರಾಜ್ಯ ಸರ್ಕಾರಗಳು ಕೃಪಾನುದಾನವನ್ನು ಪಾವತಿ ಮಾಡಲಿವೆ ಎಂದು ಕೇಂದ್ರ ಗೃಹ ಇಲಾಖೆಯು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ. ಅರ್ಹ ವ್ಯಕ್ತಿಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸ್ಸು ಮಾಡಿದ 50,000 ರೂಪಾಯಿ ಪರಿಹಾರ ನೀಡುವುದಲ್ಲದೇ ಪರಿಹಾರ ಕಾರ್ಯಾಚರಣೆ ಮತ್ತು ಸನ್ನದ್ಧತೆಯ ಚಟುವಟಿಕೆಗಳಲ್ಲಿ ತಮ್ಮ ಜೀವವನ್ನು ಕಳೆದುಕೊಂಡವರನ್ನೂ (ಮುಂಚೂಣಿ ಯೋಧರು) ಈ ಯೋಜನೆ ಒಳಗೊಂಡಿರುತ್ತದೆ. ಇದು ಕೋವಿಡ್‌ ಸಾವಿನ ಪ್ರಮಾಣೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ತಿಳಿಸಲಾಗಿದೆ.

  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾವನ್ನಪ್ಪಿದವರ ಸಂಬಂಧಿಗಳಿಗೆ ಪರಿಹಾರದ ಮೊತ್ತವನ್ನು ವಿತರಿಸಲಿದೆ. ಕೋವಿಡ್‌ ಸಾವಿನ ಪ್ರಮಾಣ ಪತ್ರದ ಬಗ್ಗೆ ಗೊಂದಲಗಳು ಸೃಷ್ಟಿಯಾದರೆ ಜಿಲ್ಲಾ ಮಟ್ಟದ ಸಮಿತಿಯು ಮರಣ ಪ್ರಮಾಣ ಪತ್ರ ತಿದ್ದುಪಡಿ ಮಾಡಿ ನೀಡುವಂತಹ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಎನ್‌ಡಿಎಂಎ ಹೇಳಿದೆ. ಕೋವಿಡ್‌ನಿಂದ ಮುಂದೆ ಸಂಭವಿಸಬಹುದಾದ ಸಾವುಗಳಿಗೂ ಕೃಪಾನುದಾನ ವಿತರಿಸಲಾಗುವುದು ಎಂದು ಎನ್‌ಡಿಎಂಎ ಶಿಫಾರಸ್ಸು ಮಾಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ 30 ದಿನಗಳ ಒಳಗಾಗಿ, ಆಧಾರ್‌ ಸಂಖ್ಯೆ ಲಿಂಕ್‌ ಮಾಡಲಾಗಿರುವ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಬೇಕು ಎಂದು ಹೇಳಲಾಗಿದೆ.

  ಜೂನ್‌ 30ರಂದು ಆರು ವಾರಗಳಲ್ಲಿ ಮಾರ್ಗಸೂಚಿ ರೂಪಿಸುವಂತೆ ಎನ್‌ಡಿಎಂಎಗೆ ಸುಪ್ರೀಂ ಕೋರ್ಟ್‌ ಆದೇಶ ಮಾಡಿತ್ತು. ಕೃಪಾನುದಾನ ನೀಡುವ ವಿಚಾರವನ್ನು ನ್ಯಾಯಾಲಯವು ಎನ್‌ಡಿಎಂಎ ವಿವೇಚನೆಗೆ ಬಿಟ್ಟಿತ್ತು. “ಕೋವಿಡ್‌ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಕೃಪಾನುದಾನ ವಿತರಿಸುವ ಸಂಬಂಧ ಕನಿಷ್ಠ ಪರಿಹಾರ ಕ್ರಮಗಳ ಅಡಿ ಮಾರ್ಗಸೂಚಿ ರೂಪಿಸಲು ಎನ್‌ಡಿಎಂಎ ನಿರ್ದೇಶಿಸುತ್ತಿದ್ದೇವೆ. ಪರಿಹಾರದ ಮೊತ್ತವನ್ನು ನಿರ್ಧರಿಸುವ ವಿವೇಚನೆಯನ್ನು ಪ್ರಾಧಿಕಾರಕ್ಕೆ ಬಿಡಲಾಗಿದೆ,” ಎಂದು ತೀರ್ಪಿನಲ್ಲಿ ನ್ಯಾಯಾಲಯ ಹೇಳಿತ್ತು.

  ಇದನ್ನು ಓದಿ: Kamal Hassan: ಕಮಲ್ ಹಾಸನ್​ರನ್ನು ಬೆಸ್ತು ಬೀಳಿಸಿದ ಇಳಯರಾಜ: ರೆಟ್ರೋ ಸಂಗೀತ ಸಂಯೋಜನೆ ಕತೆಯ ವಿಡಿಯೋ ವೈರಲ್!

  ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 12ರ ಅಡಿ ಕೃಪಾನುದಾನ ಒದಗಿಸುವುದು ಸೇರಿದಂತೆ ಕನಿಷ್ಠ ಮಾನದಂಡಗಳ ಪರಿಹಾರಕ್ಕಾಗಿ ಮಾರ್ಗಸೂಚಿ ರೂಪಿಸುವುದು ಕಡ್ಡಾಯವಾಗಿದೆ ಮತ್ತು ಅದು ವಿವೇಚನಾಧಿಕಾರವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅದನ್ನು ಮಾಡಲು ವಿಫಲವಾಗುವ ಮೂಲಕ ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ತನ್ನ ಕೆಲಸ ನಿರ್ವಹಿಸಲು ವಿಪತ್ತು ಪ್ರಾಧಿಕಾರ ವಿಫಲವಾಗಿದೆ ಎಂದು ಹಿಂದೆ ನ್ಯಾಯಾಲಯ ಹೇಳಿತ್ತು. ಅರ್ಹ ವ್ಯಕ್ತಿಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸ್ಸು ಮಾಡಿದ 50,000 ರೂಪಾಯಿ ಪರಿಹಾರ ನೀಡುವುದಲ್ಲದೇ ಪರಿಹಾರ ಕಾರ್ಯಾಚರಣೆ ಮತ್ತು ಸನ್ನದ್ಧತೆಯ ಚಟುವಟಿಕೆಗಳಲ್ಲಿ ತಮ್ಮ ಜೀವವನ್ನು ಕಳೆದುಕೊಂಡವರನ್ನೂ (ಮುಂಚೂಣಿ ಯೋಧರು) ಈ ಯೋಜನೆ ಒಳಗೊಂಡಿರುತ್ತದೆ. ಇದು ಕೋವಿಡ್‌ ಸಾವಿನ ಪ್ರಮಾಣೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಸರ್ಕಾರ  ತಿಳಿಸಲಾಗಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: