Subhas Chandra Bose: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮಜಯಂತಿ

Netaji Birth Anniversary: ನನಗೆ ನಿಮ್ಮ ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ" ಸ್ವಾತಂತ್ರ್ಯ ಪೂರ್ವದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಈ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಸೇರಲು ಅನೇಕ ಭಾರತೀಯರ ಹೃದಯದಲ್ಲಿ ದೇಶಭಕ್ತಿಯನ್ನು ಹುಟ್ಟುಹಾಕಿತು

ಸುಭಾಷ್ ಚಂದ್ರ ಬೋಸ್

ಸುಭಾಷ್ ಚಂದ್ರ ಬೋಸ್

 • Share this:
  ಭಾರತ(India) ದೇಶ ಕಂಡ ಅಪ್ರತಿಮ ದೇಶಭಕ್ತ(Patriot), ವೀರ ಸೇನಾನಿ(brave soldier) ನೇತಾಜಿ ಸುಭಾಷ್ ಚಂದ್ರ ಬೋಸ್(Netaji Subhash Chandra Bose). ಈ ಮಹಾನ್ ರಾಷ್ಟ್ರ ನಾಯಕನ ಜೀವನದ ಘಟನೆಗಳ(Incident) ಮೆಲುಕೇ ಸ್ಪೂರ್ತಿಯುತವಾದುದು. ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭರತಮಾತೆಯ ಈ ಧೀರ ಕುವರನ ಜನುಮ ದಿನ(Birthday) ಇಂದು.. ಸದಾ ಕ್ರಿಯಾಶಿಲರಾಗಿದ್ದ ದೇಶಕ್ಕಾಗಿ ತಮ್ಮ ಬದುಕನ್ನೇ ಮುಡುಪಿಟ್ಟ ಆ ಮಹಾನ್ ಚೇತನವನ್ನು ನಾವೆಲ್ಲ ಒಂದಾಗಿ ಸ್ಮರಣೆ ಮಾಡಬೇಕಾದ ದಿವಸ ಇಂದು..

  ಸ್ವರಾಜ್ಯ ಹೋರಾಟದ ದನಿಗೆ ಕ್ರಾಂತಿಯ ತೀವ್ರತೆ ತುಂಬಿದ ನೇತಾಜಿ..

  ಒಡಿಶಾದ ಕಟಕ್ ನಲ್ಲಿ 1897 ರ ಜನವರಿ 23 ರಂದು ಜನಿಸಿದ ಸುಭಾಷ್ ಚಂದ್ರ ಬೋಸ್ ಅವರ ತಂದೆ ಜಾನಕೀನಾಥ್ ಬೋಸ್, ತಾಯಿ ಪ್ರಭಾವತಿ. ತತ್ವಶಾಸ್ತ್ರ ಪದವಿ(1919), ಇಂಗ್ಲೆಂಡ್ ನಿಂದ ಐಸಿಎಸ್ ಪದವಿ(1920) ಪಡೆದ ಬೋಸ್ 1921 ರಲ್ಲಿ ಭಾರತಕ್ಕೆ ಮರಳಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದ ಬೋಸ್ ಗೆ ಮಂದಗಾಮಿ ಚಿಂತನೆಯಲ್ಲಿ ನಂಬಿಕೆ ಇರಲಿಲ್ಲ. ಅವರದೇನಿದ್ದರೂ ಹೋರಾಟದ ಹಾದಿ. ಅದಕ್ಕೆಂದೇ ಇಂಡಿಯನ್ ನ್ಯಾಶನಲ್ ಆರ್ಮಿ ಸ್ಥಾಪಿಸಿ, ಆ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಬಲನೀಡಿದರು.

  ಇದನ್ನೂ ಓದಿ: Dehliಯ ರಾಜ್‍ಪಥ್‍ನಲ್ಲಿ ಈ ಬಾರಿ ಕರ್ನಾಟಕದ ಕರಕುಶಲ ವಸ್ತುಗಳ ತೊಟ್ಟಿಲು ಸ್ತಬ್ದಚಿತ್ರ ಪ್ರದರ್ಶನ

  ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬ ಸುಭಾಷ್‍ರ ದಿಟ್ಟನಿಲುವಿನ ಪ್ರತಿಧ್ವನಿಯಾಗಿತ್ತು ಆ ಮಾತು. ಕಾಂಗ್ರೆಸ್‍ನ ಬಲಹೀನ ನಾಯಕತ್ವ, ದುರ್ಬಲ ಒಪ್ಪಂದಗಳು, ಸ್ವಾಭಿಮಾನಶೂನ್ಯ ವರ್ತನೆಗೆ ಪ್ರತಿಯಾಗಿ ಆತ್ಮಾಭಿಮಾನದ ಸ್ವರಾಜ್ಯಹೋರಾಟಕ್ಕೆ ಬಲತುಂಬಿದವರು ನೇತಾಜಿ.

  ತಾನು ಕಷ್ಟಪಟ್ಟು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನಂತೆ ಸಂಚಾರ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ಕ್ರಾಂತಿಯ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ

  ಇಂದಿಗೂ ಬಗೆಹರಿಯದ ನೇತಾಜಿ ಸಾವಿನ ರಹಸ್ಯ

  1945ರ ಆಗಸ್ಟ್ 18ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್‍ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನರಾದರು ಎಂಬುದು ಒಂದು ನಿಗೂಢ ರಹಸ್ಯವಾಗಿ ಇಂದಿಗೂ ಚರ್ಚೆಯ ವಸ್ತುವಾಗಿದೆ. ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇವೆ. ಅನ್ವೇಷಣಾ ಸಮಿತಿಗಳನ್ನು ನೇಮಿಸಿದರೂ ಅವರ ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದರೆಂದೇ ತಿಳಿದಿದ್ದಾರೆ.

  ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರಬೋಸ್ ಪ್ರತಿಮೆ ಅನಾವರಣ

  ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ವಿಚಾರ ಘೋಷಿಸಿದ್ರು ನೇತಾಜಿ ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಷ್ಠಾಪಿಸಲಾಗುವುದು ಎಂದು ಪ್ರಕಟಿಸಿದರು.. ಇದರ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಉದ್ಘಾಟಿಸಿದ್ದಾರೆ.. ಅಲ್ಲದೆ ಈ ವಿಷಯವನ್ನು ಟ್ವೀಟ್ ಮೂಲಕ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ  ಇದನ್ನೂ ಓದಿ: ಗಣರಾಜ್ಯೋತ್ಸವದ ಕರ್ನಾಟಕದ ಸ್ತಬ್ಧಚಿತ್ರದಲ್ಲಿ ಕಮಲಾ ದೇವಿ ಚಟ್ಟೋಪಾಧ್ಯಾಯ ಚಿತ್ರ

  ಇನ್ನು ನನಗೆ ನಿಮ್ಮ ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ" ಸ್ವಾತಂತ್ರ್ಯ ಪೂರ್ವದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಈ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಸೇರಲು ಅನೇಕ ಭಾರತೀಯರ ಹೃದಯದಲ್ಲಿ ದೇಶಭಕ್ತಿಯನ್ನು ಹುಟ್ಟುಹಾಕಿತು. ಇಂದಿಗೂ ಅದೆಷ್ಟು ಜನ ಯುವಕರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಈ ಹೇಳಿಕೆಯನ್ನು  ತೆಗೆದುಕೊಂಡು ಹಲವಾರು ಹೋರಾಟಗಳಲ್ಲಿ ಭಾಗಿಯಾಗುತ್ತಿರುವುದು ನೇತಾಜಿ ಯುವಕರ ಮೇಲೆ ಅದೆಷ್ಟು ಪ್ರಭಾವ ಬೀರಿದ್ದರು ಎಂಬುದಕ್ಕೆ ಸಾಕ್ಷಿಯಾಗಿದೆ
  Published by:ranjumbkgowda1 ranjumbkgowda1
  First published: