ಜಮ್ಮು-ಕಾಶ್ಮೀರಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ಕಲ್ಪಿಸುವ ಕಲಂ 35 ಎ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

news18
Updated:August 6, 2018, 1:10 PM IST
ಜಮ್ಮು-ಕಾಶ್ಮೀರಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ಕಲ್ಪಿಸುವ ಕಲಂ 35 ಎ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
news18
Updated: August 6, 2018, 1:10 PM IST
ನ್ಯೂಸ್ 18 ಕನ್ನಡ

ಶ್ರೀನಗರ (ಆ.6) : ಜಮ್ಮು-ಕಾಶ್ಮೀರಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ ವಿಧಿ 35 ಎ ಸಿಂಧುತ್ವ ಪ್ರಶ್ನಿಸಿ, ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆ. 27ಕ್ಕೆ ಮುಂದೂಡಿದೆ.

ಕಲಂ 35 ಎ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ, ನಾಲ್ಕು ಅರ್ಜಿಗಳು ಸುಪ್ರೀಂಕೋರ್ಟ್​ಗೆ ಸಲ್ಲಿಕೆಯಾಗಿದ್ದವು. ಸೋಮವಾರ ಬೆಳಗ್ಗೆ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು ಗೈರಾಗಿದ್ದ ಕಾರಣ ಪ್ರಕರಣವನ್ನು ಆಗಸ್ಟ್ 27ಕ್ಕೆ ಮುಂದೂಡಲಾಯಿತು.

ಕಲಂ 35 ಎ ಪರವಾಗಿ ಜಮ್ಮು-ಕಾಶ್ಮೀರದಲ್ಲಿ ಭಾನುವಾರ ವ್ಯಾಪಾರಿಗಳು, ಸ್ಥಳೀಯ ನಿವಾಸಿಗಳು ಹಾಗೂ ವಕೀಲರ ಸಂಘಟನೆಗಳ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಿದವು.

ವಿಚಾರಣೆ, ತೀರ್ಪು ಮುಂದೂಡಲು ಮನವಿ ಮಾಡಿದ್ದ ರಾಜ್ಯಪಾಲ:

ವಿಧಿ 35 ಎ ವಿರುದ್ಧ ತೀರ್ಪು ಹೊರಬಿದ್ದರೆ ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೇಳಲಿದೆ. ಜೊತೆಗೆ ಪೊಲೀಸರು ದಂಗೆ ಏಳುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ರಾಜ್ಯಪಾಲ ಎನ್.ಎನ್. ವೋಹ್ರಾ ಅವರು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಾಗೂ ತೀರ್ಪು ಮುಂದೂಡುವಂತೆ ಮನವಿ ಮಾಡಿದ್ದರು. ಅಕ್ಟೋಬರ್​ನಲ್ಲಿ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳು ನಡೆಯಲಿವೆ. ಅಲ್ಲಿಯವರೆಗೂ ತೀರ್ಪು ಪ್ರಕಟಿಸದಂತೆ ಅವರು ಮನವಿ ಮಾಡಿದ್ದರು.
First published:August 6, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...