NDA ಪರೀಕ್ಷೆ ಬರೆಯಲು ಮಹಿಳೆಯರಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್​

ನೀತಿ ನಿರ್ಧಾರದ ಮೇಲೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಹೇಳುವ ಸೇನೆಯ ಕ್ರಮ ‘ಲಿಂಗ ತಾರತಮ್ಯ‘ವನ್ನು ತೋರಿಸುತ್ತದೆ ಎಂದು ಸುಪ್ರೀಂ ಕೋರ್ಟ್​​ ಆಕ್ಷೇಪ ವ್ಯಕ್ತಪಡಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ(ಆ.18): ರಾಷ್ಟ್ರೀಯ ರಕ್ಷಣಾ ಅಕಾಡೆಮಿ(National Defence Academy -NDA) ಪರೀಕ್ಷೆಯನ್ನು ಮಹಿಳಾ ಅಭ್ಯರ್ಥಿಗಳು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್​​ ಅನುಮತಿ ನೀಡಿದೆ. ಎನ್​ಡಿಎ ಪರೀಕ್ಷೆ ಇದೇ ಸೆಪ್ಟೆಂಬರ್ 5ರಂದು ನಿಗದಿಯಾಗಿದ್ದು, ಮಹಿಳೆಯರು ಪರೀಕ್ಷೆ ಬರೆಯಬಹುದಾಗಿದೆ. ನ್ಯಾಯಾಲಯದ ಅಂತಿಮ ಆದೇಶದ ಪ್ರಕಾರ ಪ್ರವೇಶಾತಿ ದೊರೆಯಲಿದೆ ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

  ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​, ಭಾರತೀಯ ಸೇನೆಯನ್ನು ತರಾಟೆಗೆ ತೆಗೆದುಕೊಂದು ಛೀಮಾರಿ ಹಾಕಿದೆ. ನೀತಿ ನಿರ್ಧಾರದ ಮೇಲೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಹೇಳುವ ಸೇನೆಯ ಕ್ರಮ ‘ಲಿಂಗ ತಾರತಮ್ಯ‘ವನ್ನು ತೋರಿಸುತ್ತದೆ ಎಂದು ಸುಪ್ರೀಂ ಕೋರ್ಟ್​​ ಆಕ್ಷೇಪ ವ್ಯಕ್ತಪಡಿಸಿದೆ.

  ಇದನ್ನೂ ಓದಿ:LPG Price Hike: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; LPG ಸಿಲಿಂಡರ್​ ಬೆಲೆಯಲ್ಲಿ ಏರಿಕೆ

  ನ್ಯಾಯಮೂರ್ತಿ ಸಂಜಯ್ ಕಿಶನ್ ಮತ್ತು ಹೃಷಿಕೇಶ್ ರಾಯ್ ವಿಭಾಗೀಯ​ ಪೀಠವು ಈ ಆದೇಶವನ್ನು ಹೊರಡಿಸಿದೆ. ನ್ಯಾಯಾಲಯದ ಅಂತಿಮ ಆದೇಶದ ಪ್ರಕಾರ ಮಹಿಳೆಯರಿಗೆ ಪ್ರವೇಶಾತಿ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.

  ಅರ್ಹ ಮಹಿಳಾ ಅಭ್ಯರ್ಥಿಗಳು ಎನ್​ಡಿಎ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಬೇಕೆಂದು ಕೋರಿ ವಕೀಲ ಕುಶ್​​ ಕಲ್ರಾ ಎಂಬುವರು ಸುಪ್ರೀಂ ಕೋರ್ಟ್​​ಗೆ ರಿಟ್​​ ಅರ್ಜಿಯನ್ನು ಸಲ್ಲಿಸಿದ್ದರು. ಕಲ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಭಾರತೀಯ ಸೇನೆಗೆ ಛೀಮಾರಿ ಹಾಕಿದೆ. ಇದರೊಂದಿಗೆ ಎನ್​ಡಿಎ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡಿದೆ.

  ಇದನ್ನೂ ಓದಿ:Karnataka 2nd PUC Exam: ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ಈ ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:Latha CG
  First published: