ಗುಜರಾತ್​ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯಾ ಹತ್ಯೆ ಪ್ರಕರಣ; 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್​

ಗುಜರಾತ್​ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಹರೇನ್ ಪಾಂಡ್ಯಾ ಗೃಹ ಸಚಿವರಾಗಿದ್ದರು. 2003ರಂದು ಅಹಮದಾಬಾದ್ ಬಳಿಯಿರುವ ಲಾ ಗಾರ್ಡನ್​ನಲ್ಲಿ ಬೆಳಗ್ಗೆ ಹರೇನ್ ಪಾಂಡ್ಯಾ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.

Sushma Chakre | news18
Updated:July 5, 2019, 1:56 PM IST
ಗುಜರಾತ್​ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯಾ ಹತ್ಯೆ ಪ್ರಕರಣ; 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್​
ಸಾಂದರ್ಭಿಕ ಚಿತ್ರ
  • News18
  • Last Updated: July 5, 2019, 1:56 PM IST
  • Share this:
ನವದೆಹಲಿ (ಜು. 5): 2003ರ ಮಾರ್ಚ್​ ತಿಂಗಳಲ್ಲಿ ಹತ್ಯೆಯಾಗಿದ್ದ ಗುಜರಾತ್​ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯಾ ಅವರ ಸಾವಿನ ಪ್ರಕರಣದ ತನಿಖೆ ನಡೆಸಿದ ಸುಪ್ರೀಂಕೋರ್ಟ್​ 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಗುಜರಾತ್ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯಾ ಕೊಲೆ ಪ್ರಕರಣದಲ್ಲಿ 12 ಆರೋಪಿಗಳನ್ನು ಶಿಕ್ಷೆಗೊಳಪಡಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದೇ ವೇಳೆ ಈ ಪ್ರಕರಣದ 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.

ಗುಜರಾತ್​ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಹರೇನ್ ಪಾಂಡ್ಯಾ ಗೃಹಸಚಿವರಾಗಿದ್ದರು. 2003ರ ಮಾರ್ಚ್ 26ರಂದು ಅಹಮದಾಬಾದ್ ಬಳಿಯಿರುವ ಲಾ ಗಾರ್ಡನ್​ನಲ್ಲಿ ಬೆಳಗ್ಗೆ ಹರೇನ್ ಪಾಂಡ್ಯಾ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. 2002ರಲ್ಲಿ ನಡೆದಿದ್ದ ಗೋಧ್ರಾ ಹತ್ಯಾಕಾಂಡಕ್ಕೆ ಸೇಡು ತೀರಿಸಿಕೊಳ್ಳಲು ಬಲಪಂಥೀಯ ನಾಯಕರ ವಿರುದ್ಧ ಈ ದಾಳಿ ನಡೆಸಲಾಗಿದೆ ಎಂದು ಸಿಬಿಐ ಅಭಿಪ್ರಾಯಪಟ್ಟಿತ್ತು.

ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ಇದೇ ತಿಂಗಳ 17ಕ್ಕೆ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಹೊರಬೀಳುವ ನಿರೀಕ್ಷೆ

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ. ಈ ಮುನ್ನ ಕೆಳ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಹರೇನ್ ಪಾಂಡ್ಯಾ ಹತ್ಯೆ ಬಗ್ಗೆ ಮತ್ತೆ ತನಿಖೆ ನಡೆಸಬೇಕೆಂದು ಕೋರಿ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಅಲ್ಲದೆ, ಈ ಪ್ರಕರಣದ ಬಗ್ಗೆ ಮತ್ತ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತೀಗಳು ತೀರ್ಪು ನೀಡಿದ್ದರು.

 

First published:July 5, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ