HOME » NEWS » National-international » SUPREME COURT DIRECT TO INSTRUCT SUBMIT REPORT ON RISING IN DELHI AIR POLLUTION DBDEL HK

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ : ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ದೆಹಲಿ ವಿಶ್ವ ವಿದ್ಯಾಲಯ ಪ್ರದೇಶದಲ್ಲಿ 397. ನೋಯ್ಡಾ ಸುತ್ತಾಮುತ್ತಾ 379. ಪೂಸಾ ಪ್ರದೇಶದ ವ್ಯಾಪ್ತಿಯಲ್ಲಿ 353. ದೆಹಲಿ ಐಐಟಿ ಪ್ರದೇಶಗಳಲ್ಲಿ 369. ಭಾನುವಾರ ದೆಹಲಿಯಲ್ಲಿ ಸರಾಸರಿ ಏರ್ ಕ್ವಾಲಿಟಿ ಇಂಡೆಕ್ಸ್ 344 ಆಗಿರುವುದರಿಂದ ರಾಷ್ಟ್ರ ರಾಜಧಾನಿಯ ಜನ ಆತಂಕಕ್ಕೆ ಈಡಾಗಿದ್ದಾರೆ

news18-kannada
Updated:December 14, 2020, 3:00 PM IST
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ : ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ಪ್ರಾತಿನಿಧಿಕ ಚಿತ್ರ
  • Share this:
ನವದೆಹಲಿ(ಡಿಸೆಂಬರ್​. 14): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ದೊಡ್ಡ ಮಟ್ಟದಲ್ಲಿ ಜಾಸ್ತಿಯಾಗುತ್ತದೆ. ಹಾಗೆ ದಿನ ಕಳೆದಂತೆ ಅದು  ಕಡಿಮೆ ಕೂಡ ಆಗುತ್ತದೆ. ಆದರೆ, ಈ ಬಾರಿ ದೀಪಾವಳಿ ಹಬ್ಬವಾಗಿ ತಿಂಗಳು ಕಳೆದರೂ ವಾಯು ಮಾಲಿನ್ಯ ಮಾತ್ರ ನಿಯಂತ್ರಣಕ್ಕೆ ಬಾರದೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಈ ಹಿನ್ನಲೆಯಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ದೆಹಲಿ ಸಮೀಪದ ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬೆಳೆ ತಾಜ್ಯಾಜ್ಯ (ಒಣಹುಲ್ಲು) ಸುಡುತ್ತಿರುವುದರ ಪರಿಣಾಮಗಳು‌ ಏನಾಗುತ್ತಿವೆ? ಮಾಲಿನ್ಯ ತಡೆಯಲೆಂದು ರಚಿಸಿರುವ ಪರಿಸರ ಸಮಿತಿ ಏನು ಮಾಡುತ್ತಿದೆ? ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ದಿನಗಳಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್ ಡಿಸೆಂಬರ್ 17ರಂದು ಮತ್ತೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಗಾಳಿಯ ಗುಣಮಟ್ಟವು 300 ಅಂಕದ ಮೇಲಿದ್ದರೆ ಅದನ್ನು 'ಅತ್ಯಂತ ಕಳಪೆ' ಎಂದು ವ್ಯಾಖ್ಯಾನಿಸಲಾಗುತ್ತದೆ. ಅಲ್ಲದೆ ಅಂತಹ ಗಾಳಿಯನ್ನು 'ಉಸಿರಾಡಲು ಅನರ್ಹ' ಎಂದು ಕೂಡ ಹೇಳಲಾಗುತ್ತದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ಮಾಹಿತಿ ಪ್ರಕಾರ ಸರಾಸರಿ 24 ಗಂಟೆಗಳ ವಾಯು ಗುಣಮಟ್ಟದ ಸೂಚ್ಯಂಕ ಭಾನುವಾರ ಬೆಳಿಗ್ಗೆ  ದೆಹಲಿಯ ವಿವಿಧ ಪ್ರದೇಶಗಳಲ್ಲಿ ಈ ರೀತಿ ಇದೆ.

ದೆಹಲಿ ವಿಶ್ವ ವಿದ್ಯಾಲಯ ಪ್ರದೇಶದಲ್ಲಿ 397. ನೋಯ್ಡಾ ಸುತ್ತಾಮುತ್ತಾ 379. ಪೂಸಾ ಪ್ರದೇಶದ ವ್ಯಾಪ್ತಿಯಲ್ಲಿ 353. ದೆಹಲಿ ಐಐಟಿ ಪ್ರದೇಶಗಳಲ್ಲಿ 369. ಭಾನುವಾರ ದೆಹಲಿಯಲ್ಲಿ ಸರಾಸರಿ ಏರ್ ಕ್ವಾಲಿಟಿ ಇಂಡೆಕ್ಸ್ 344 ಆಗಿರುವುದರಿಂದ ರಾಷ್ಟ್ರ ರಾಜಧಾನಿಯ ಜನ ಆತಂಕಕ್ಕೆ ಈಡಾಗಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೆಹಲಿಯ ಸುತ್ತ ಇರುವ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಗೋಧಿ ಬೆಳೆಯ ತ್ಯಾಜ್ಯವನ್ನು ಸುಡಲಾಗುತ್ತದೆ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ. ಅಲ್ಲಿ ತ್ಯಾಜ್ಯ ಸುಟ್ಟಾಗ ಹೊಮ್ಮುವ ಹೊಗೆ ದೆಹಲಿಯ ಕಡೆಗೆ ಬರಲಿದೆ.‌ ತ್ಯಾಜ್ಯ ಸುಡುವುದನ್ನು ತಪ್ಪಿಸಲು ಈವರೆಗೆ ಯಾವುದೇ ವೈಜ್ಞಾನಿಕ ಕ್ರಮ ಕೈಗೊಂಡಿಲ್ಲ. ರೈತರಿಗೆ ಪರ್ಯಾಯ ಮಾರ್ಗವನ್ನು ಹೇಳಿಕೊಟ್ಟಿಲ್ಲ.‌ ಪರಿಹಾರದ ವ್ಯವಸ್ಥೆಯನ್ನೂ ಮಾಡಿಕೊಟ್ಟಿಲ್ಲ.

ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಲಾಗುತ್ತದೆ. ಜೊತೆಗೆ ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಗಾಳಿಯ ವೇಗ ಕೂಡ ಕಡಿಮೆ ಇರುತ್ತದೆ. ಈ  ಎಲ್ಲಾ ಕಾರಣಗಳಿಂದ ದೆಹಲಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವುದು ಸರ್ವೇ ಸಾಮಾನ್ಯ.

ಇದನ್ನೂ ಓದಿ : ತಮಿಳುನಾಡಿನಲ್ಲಿ ಕಮಲ್ ಹಾಸನ್-ಒವೈಸಿ ಮೈತ್ರಿ ಸಾಧ್ಯತೆ; 25 ಕ್ಷೇತ್ರಗಳಲ್ಲಿ ಎಐಎಂಐಎಂ ಸ್ಪರ್ಧೆ?

ಆದರೆ ಈ ಬಾರಿ ದೆಹಲಿಯಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿತ್ತು. ಅದಕ್ಕೆ ಬದಲಾಗಿ ತಾಜ್ಯದ ಮೇಲೆ ಕೆಮಿಕಲ್ ಸಿಂಪಡಿಸಿ ಅಲ್ಲೇ ಕೊಳೆಯುವ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ದೀಪಾವಳಿ ಹಬ್ಬದ ಸಂದರಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿತ್ತು. ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡಿದ್ದರೂ ಮತ್ತು ದೀಪಾವಳಿ ಹಬ್ಬವಾಗಿ ತಿಂಗಳು ಉರುಳಿದ್ದರೂ ದೆಹಲಿಯ ವಾಯು ಮಾಲಿನ್ಯ ನಿಯಂತ್ರಣ ಬಾರದೇ ಇರುವುದು ಸಹಜವಾಗಿ ಜನರಲ್ಲಿ ಆತಂಕವನ್ನು ಉಂಟುಮಾಡಿದೆ.
Youtube Video

ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಹೊಸ ಕಾನೂನಿನ ಪ್ರಕಾರ ಗಾಳಿಯನ್ನು ಮಲಿನಗೊಳಿಸುವ ಯಾವುದೇ ಚಟುವಟಿಕೆಗಳನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಈ ಕಾನೂನನ್ನು ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇವೆಲ್ಲವೂ ಕಾಗದದ ಮೇಲೆ ಇವೆಯೇ ಹೊರತು ವಾಸ್ತವವಾಗಿ ಅನುಷ್ಠಾನಕ್ಕೆ ಬಂದಿಲ್ಲ ಎಂಬುದು ದೆಹಲಿಯ ವಾಯು ಮಾಲಿನ್ಯ ಹೆಚ್ಚುತ್ತಿರುವುದರಿಂದ ಸ್ಪಷ್ಟವಾಗುತ್ತದೆ.
Published by: G Hareeshkumar
First published: December 14, 2020, 2:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories