ಅಯೋಧ್ಯೆ ಪ್ರಕರಣ: ಸುಪ್ರೀಂ ಕೋರ್ಟ್​​ನಲ್ಲಿ ಎಲ್ಲಾ ಮರುಶೀಲನಾ ಅರ್ಜಿಗಳು ವಜಾ

ಹಿಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಸಂವಿಧಾನಿಕ ಸುಪ್ರೀಂ ನ್ಯಾಯಪೀಠವು ನವೆಂಬರ್ 9ರಂದು ಅಯೋಧ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿತ್ತು. ಈ 2.77 ಎಕರೆಯಷ್ಟಿರುವ ವಿವಾದಿತ ಜಾಗವು ರಾಮ ದೇವರಿಗೆ ಸೇರಿದ್ದು ಎಂದು ಆದೇಶ ಹೊರಡಿಸಿತು.

news18
Updated:December 12, 2019, 4:48 PM IST
ಅಯೋಧ್ಯೆ ಪ್ರಕರಣ: ಸುಪ್ರೀಂ ಕೋರ್ಟ್​​ನಲ್ಲಿ ಎಲ್ಲಾ ಮರುಶೀಲನಾ ಅರ್ಜಿಗಳು ವಜಾ
ಸುಪ್ರೀಂ ಕೋರ್ಟ್
  • News18
  • Last Updated: December 12, 2019, 4:48 PM IST
  • Share this:
ನವದೆಹಲಿ(ಡಿ. 12): ಅಯೋಧ್ಯೆ ಬಾಬರಿ ಮಸೀದಿ ಜಾಗ ವಿವಾದದಲ್ಲಿ ಸುಪ್ರೀಂ ಕೋರ್ಟ್​ನ ಸಂವಿಧಾನಿಕ ಪೀಠ ಇತ್ತೀಚೆಗೆ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸರ್ವೊಚ್ಚ ನ್ಯಾಯಾಲಯ ಗುರುವಾರ ವಜಾಗೊಳಿಸಿತು. ಒಟ್ಟು 18 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ಐವರು ಸದಸ್ಯರ ನ್ಯಾಯಪೀಠವು ಎಲ್ಲಾ ಅರ್ಜಿಗಳನ್ನು ಬದಿಗಿರಿಸಲು ನಿರ್ಧರಿಸಿತು. ನ್ಯಾ| ಡಿ.ವೈ. ಚಂದ್ರಚೂಡ್, ನ್ಯಾ| ಅಶೋಕ್ ಭೂಷಣ್, ನ್ಯಾ| ಎಸ್.ಎ. ನಜೀರ್ ಮತ್ತು ನ್ಯಾ| ಸಂಜೀವ್ ಖನ್ನಾ ಅವರು ಈ ನ್ಯಾಯಪೀಠದಲ್ಲಿದ್ದಾರೆ.

ಪರುಪರಿಶೀಲನೆ ಅರ್ಜಿ ಸಲ್ಲಿಸಿದ 18 ವ್ಯಕ್ತಿಗಳು ಮತ್ತು ಸಂಘಟನೆಗಳಲ್ಲಿ ಮೌಲಾನ ಸಯದ್ ಅಷಾದ್ ರಷೀದಿ, ಅಖಿಲ ಭಾರತ ಹಿಂದೂ ಮಹಾಸಭಾ ಮೊದಲಾದವರು ಸೇರಿದ್ದಾರೆ.

ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ; 2 ದಿನಗಳ ಭಾರತದ ಪ್ರವಾಸ ಮೊಟಕುಗೊಳಿಸಿದ ಬಾಂಗ್ಲಾ ವಿದೇಶಾಂಗ ಸಚಿವ

ಹಿಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಸಂವಿಧಾನಿಕ ಸುಪ್ರೀಂ ನ್ಯಾಯಪೀಠವು ನವೆಂಬರ್ 9ರಂದು ಅಯೋಧ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿತ್ತು. ಈ 2.77 ಎಕರೆಯಷ್ಟಿರುವ ವಿವಾದಿತ ಜಾಗವು ರಾಮ ದೇವರಿಗೆ ಸೇರಿದ್ದು ಎಂದು ಆದೇಶ ಹೊರಡಿಸಿತು. ಬಾಬರಿ ಮಸೀದಿಗಿಂತ ಮುಂಚೆ ಆ ಜಾಗದಲ್ಲಿ ಬೇರೊಂದು ಕಟ್ಟಡವಿತ್ತೆಂಬ ವಾದಕ್ಕೆ ಮನ್ನಣೆ ನೀಡಿದ ಕೋರ್ಟ್, ಈ ಪ್ರದೇಶವು ಹಿಂದೂಗಳಿಗೆ ಸೇರಿದ್ದೆಂದು ಅಭಿಪ್ರಾಯಪಟ್ಟಿತು. ಅಯೋಧ್ಯೆಯಲ್ಲಿ ಬೇರೆಲ್ಲಿಯಾದರೂ ಪರ್ಯಾಯ ಜಾಗದಲ್ಲಿ ಮುಸ್ಲಿಮರಿಗೆ ಮಸೀದಿ ಕಟ್ಟಿಕೊಳ್ಳಲು 5 ಎಕರೆ ಜಾಗ ಒದಗಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಅಯೋಧ್ಯೆ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಬಗ್ಗೆ ಹಲವು ಮುಸ್ಲಿಮ್ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಮೊದಲಾದ ಸಂಘಟನೆಗಳು ಮತ್ತು ವ್ಯಕ್ತಿಗಳು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದವು.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published:December 12, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ