• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • DK Shivakumar: ಸಿಎಂ ಸ್ಥಾನದ ಗುದ್ದಾಟದ ಮಧ್ಯೆಯೂ ಡಿಕೆ ಶಿವಕುಮಾರ್‌ಗೆ ರಿಲೀಫ್‌ ನೀಡಿದ ಸುಪ್ರೀಂ ಕೋರ್ಟ್‌!

DK Shivakumar: ಸಿಎಂ ಸ್ಥಾನದ ಗುದ್ದಾಟದ ಮಧ್ಯೆಯೂ ಡಿಕೆ ಶಿವಕುಮಾರ್‌ಗೆ ರಿಲೀಫ್‌ ನೀಡಿದ ಸುಪ್ರೀಂ ಕೋರ್ಟ್‌!

 ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಸಿಬಿಐ ಪ್ರಕರಣದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಈ ವೇಳೆ ತಡೆಯಾಜ್ಞೆ ತೆರವಿಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಮುಂದೆ ಓದಿ ...
  • Share this:

ನವದೆಹಲಿ: ಒಂದು ಕಡೆ ಸಿದ್ದರಾಮಯ್ಯ (Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಸಿಎಂ ಕುರ್ಚಿಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಗುದ್ದಾಟ ನಡೆಯುತ್ತಿದ್ದರೆ, ಮತ್ತೊಂದ್ಕಡೆ ಡಿಕೆ ಶಿವಕುಮಾರ್‌ಗೆ ((DK Shivakumar) ನಿಟ್ಟುಸಿರು ಬಿಡುವ ಸುದ್ದಿಯೊಂದು ಕಿವಿಗಪ್ಪಳಿಸಿದೆ.


ಹೌದು.. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಸಿಬಿಐ ಪ್ರಕರಣದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಈ ವೇಳೆ ತಡೆಯಾಜ್ಞೆ ತೆರವಿಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು  ಹೇಳಿದ ಸುಪ್ರೀಂಕೋರ್ಟ್, ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ನಿರಾಕರಣೆ ಮಾಡಿದೆ.


ನ್ಯಾಯಮೂರ್ತಿಗಳಾದ ಬಿಆರ್ ಗವಾಯ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ನ್ಯಾಯಪೀಠ ಬುಧವಾರ ಸಿಬಿಐ ಅರ್ಜಿಯನ್ನು ಕೈಗೆತ್ತಿಕೊಂಡಿತು. ಡಿಕೆ ಶಿವಕುಮಾರ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಪ್ರಕರಣವು ಮೇ 23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಮಾಹಿತಿ ನೀಡಿದರು.


ಇದನ್ನೂ ಓದಿ: Mallikarjun Kharge: ಪಿಎಫ್‌ಐ ಜೊತೆ ಭಜರಂಗದಳ ಹೋಲಿಕೆ, ಮಲ್ಲಿಕಾರ್ಜುನ ಖರ್ಗೆ ಕೋರ್ಟ್‌ನಿಂದ ಸಮನ್ಸ್!


ಜುಲೈಗೆ ಮುಂದೂಡಿಕೆಯಾದ ವಿಚಾರಣೆ


ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿರುವ ಸುಪ್ರೀಂ ಕೋರ್ಟ್, ತಡೆಯಾಜ್ಞೆ ತೆರವಿಗೆ ಹೈಕೋರ್ಟ್‌ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲೇಬೇಕು ಎಂದು ಡಿಕೆ ಶಿವಕುಮಾರ್ ಹೋರಾಟ ಮಾಡುತ್ತಿರುವ ಹೊತ್ತಿನಲ್ಲೇ ತನ್ನ ವಿರುದ್ಧದ ಪ್ರಕರಣದಲ್ಲಿ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.ಇದನ್ನೂ ಓದಿ: Karnataka CM: ಸ್ವಲ್ಪ ಸಮಯ ಕೊಡಿ: ರಾಹುಲ್ ಗಾಂಧಿ-ಡಿಕೆಶಿ ಸಂಧಾನ ವಿಫಲ


ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವು ಮಾಡುವಂತೆ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಉಚ್ಛ ನ್ಯಾಯಾಲಯ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆಗೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

First published: