ದೆಹಲಿ ಹಿಂಸಾಚಾರ: ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ; ಸುಪ್ರೀಂಕೋರ್ಟ್​ ಆದೇಶ

ದೆಹಲಿ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್​ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಇಲ್ಲಿನ ಹಿಂಸಾಚಾರವೂ ದೆಹಲಿ ಹೈಕೋರ್ಟ್ ವ್ಯಾಪ್ತಿಗೆ ಬರಲಿದೆ. ಯಾರೇ ಆಗಲಿ ಅಲ್ಲಿಯೇ ಸರ್ಜಿ ಸಲ್ಲಿಸಬಹುದು. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ದ್ವಿಸದಸ್ಯ ಪೀಠವು ತಿಳಿಸಿದೆ.

ಸುಪ್ರೀಂ ಕೋರ್ಟ್​

ಸುಪ್ರೀಂ ಕೋರ್ಟ್​

 • Share this:
  ನವದೆಹಲಿ(ಫೆ.26): ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕದಡುವ ಹೇಳಿಕೆಗಳನ್ನು ಯಾರೇ ನೀಡಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ಖಡಕ್​ ಸೂಚನೆ ನೀಡಿದ್ದಾರೆ. ಸಿಎಎ ಮತ್ತು ಎನ್​​ಆರ್​​ಸಿ ಪರ ವಿರೋಧಿ ಗುಂಪುಗಳಿಂದ ಹೊತ್ತಿ ಉರಿಯುತ್ತಿರುವ ದೆಹಲಿ ಬಗ್ಗೆ ಅಸಮಾಧಾನ ಹೊರಹಾಕಿದ ನ್ಯಾಯಮೂರ್ತಿ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ಹೀಗೆ ಆದೇಶ ಹೊರಡಿಸಿದೆ.

  ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ದೆಹಲಿಯಲ್ಲಿ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.

  ದೆಹಲಿ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್​ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಇಲ್ಲಿನ ಹಿಂಸಾಚಾರವೂ ದೆಹಲಿ ಹೈಕೋರ್ಟ್ ವ್ಯಾಪ್ತಿಗೆ ಬರಲಿದೆ. ಯಾರೇ ಆಗಲಿ ಅಲ್ಲಿಯೇ ಸರ್ಜಿ ಸಲ್ಲಿಸಬಹುದು. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ದ್ವಿಸದಸ್ಯ ಪೀಠವು ತಿಳಿಸಿದೆ.

  ಇದನ್ನೂ ಓದಿ: ದೆಹಲಿ ಹಿಂಸಾಚಾರ: ‘ಶಾಂತಿ ಕಾಪಾಡಿ, ಯಾವುದೇ ಸಂದರ್ಭದಲ್ಲೂ ಭ್ರಾತೃತ್ವ ಮರೆಯದಿರಿ‘ - ಪ್ರಧಾನಿ ಮೋದಿ

  ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

  ಇಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಹಿಂಸಾಚಾರ ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗುತ್ತಿದೆ.

  ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟವೂ ಹಿಂಸಾರೂಪಕ್ಕೆ ತಿರುಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಸಾವನ್ನಪಿದವರ ಸಂಖ್ಯೆಯೂ ಏರುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 150ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಈ ಮಧ್ಯೆ ಪೊಲೀಸರು ಹೀಗೆ ಕಠಿಣ ಆದೇಶಿಸಿದ್ದಾರೆ.
  First published: