Bharati Ghosh: ಪಶ್ಚಿಮ ಬಂಗಾಳದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ ಕೋರ್ಟ್
2019ರ ಲೋಕಸಭಾ ಚುನಾವಣೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಹಾಗೂ ಬಂಧನದ ವಾರಂಟ್ ತಡೆಹಿಡಿಯಬೇಕು ಎಂದು ಕೋರಿ ಭಾರತಿ ಘೋಷ್ ಸೋಮವಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ನವ (ದೆಹಲಿ ಮಾರ್ಚ್ 09); ಪಶ್ಚಿಮ ಬಂಗಾಳ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ವಿರುದ್ಧ ಹೊರಡಿಸಲಾಗಿರುವ ಜಾಮೀನು ರಹಿತ ಬಂಧನದ ವಾರಂಟ್ ಅನ್ನು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ಸುಪ್ರೀಂಕೋರ್ಟ್ ಮಂಗಳವಾರ ನಿರ್ದೇಶಿಸಿದೆ. 2019ರ ಲೋಕಸಭಾ ಚುನಾವಣಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ಘೋಷ್ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಭಾರತಿ ಘೋಷ್, ಮಾಜಿ ಐಪಿಎಸ್ ಅಧಿಕಾರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಹುಮಾಯೂನ್ ಕಬೀರ್ ವಿರುದ್ಧ ಡರ್ಬಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಘೋಷ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಅಬ್ದುಲ್ ನಜೀರ್ ಮತ್ತು ಹೇಮಂತ್ ಗುಪ್ತಾ ಅವರ ನ್ಯಾಯಪೀಠ ಹೇಳಿದೆ. ಎರಡು ತಿಂಗಳ ನಂತರ ಹೆಚ್ಚಿನ ವಿಚಾರಣೆಗೆ ಈ ಪ್ರಕರಣವನ್ನು ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
2019ರ ಲೋಕಸಭಾ ಚುನಾವಣೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಹಾಗೂ ಬಂಧನದ ವಾರಂಟ್ ತಡೆಹಿಡಿಯಬೇಕು ಎಂದು ಕೋರಿ ಭಾರತಿ ಘೋಷ್ ಸೋಮವಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದ ಭಾರತಿ ಘೋಷ್ ವಿರುದ್ಧ ಪೊಲೀಸರು ಒಂದು ಡಜನ್ಗೂ ಹೆಚ್ಚು ಎಫ್ಐಆರ್ ದಾಖಲಿಸಿದ್ದಾರೆ. ಅದರಲ್ಲಿ ಸುಲಿಗೆ ಮತ್ತು ಚಿನ್ನಕ್ಕಾಗಿ ನಿಷೇಧಿತ ನೋಟುಗಳನ್ನು ಅಕ್ರಮವಾಗಿ ವಿನಿಮಯ ಮಾಡಿಕೊಂಡಿರುವ ಪ್ರಕರಣಗಳು ಇವೆ. ಈ ಎರಡು ಕೇಸುಗಳಲ್ಲಿ ವಾರೆಂಟ್ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದೆ.
ಭಾರತಿ ಪರ ಹಾಜರಾಗಿದ್ದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್, ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿಯನ್ನು ರಕ್ಷಿಸುತ್ತಿದೆ. ಆದರೆ, ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿಗೆ ರಾಜೀನಾಮೆ ನೀಡಿದ ನಂತರ ಆಕೆಯ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ