HOME » NEWS » National-international » SUPREME COURT TO DELIVER CRUCIAL VERDICT ON AYODHYA LAND DISPUTE TOMORROW RMD

Ayodhya Verdict: ಸುಪ್ರೀಂಕೋರ್ಟ್​ನಿಂದ ಅಯೋಧ್ಯೆ ತೀರ್ಪು ಹಿನ್ನೆಲೆ; ದೇಶಾದ್ಯಂತ ಬಿಗಿ ಭದ್ರತೆ

ಅಯೋಧ್ಯೆ ತೀರ್ಪು ಪ್ರಕಟವಾದರೆ ಕೋಮು ಗಲಭೆ ಮತ್ತು ಅಹಿತಕರ ಘಟನೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Rajesh Duggumane | news18-kannada
Updated:November 9, 2019, 8:16 AM IST
Ayodhya Verdict: ಸುಪ್ರೀಂಕೋರ್ಟ್​ನಿಂದ ಅಯೋಧ್ಯೆ ತೀರ್ಪು ಹಿನ್ನೆಲೆ; ದೇಶಾದ್ಯಂತ ಬಿಗಿ ಭದ್ರತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ನ.8): ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣದ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್​ ಶನಿವಾರವೇ ಪ್ರಕಟ ಮಾಡಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 

ಇದೇ ತಿಂಗಳ 17ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ನವೆಂಬರ್​ 17ರಂದು ತೀರ್ಪು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ ಎನ್ನಲಾಗಿದೆ.

ಅಯೋಧ್ಯೆ ತೀರ್ಪು ಪ್ರಕಟವಾದರೆ ಕೋಮು ಗಲಭೆ ಮತ್ತು ಅಹಿತಕರ ಘಟನೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ತೀರ್ಪು ಪ್ರಕಟವಾದಾಗ ಪೊಲೀಸರ ಕೊರತೆ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸರ ವಾರದ ರಜೆಯನ್ನು ಕಡಿತಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ?:

ಅಯೋಧ್ಯೆಯ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. ಬಾಬ್ರಿ ಮಸೀದಿ ಕಟ್ಟುವ ಮುಂಚೆ ಈ ಜಾಗದಲ್ಲಿ ರಾಮನ ದೇವಸ್ಥಾನವಿತ್ತು ಎಂಬುದು ಹಿಂದೂಗಳ ವಾದವಾಗಿದೆ. ಬಾಬ್ರಿ ಮಸೀದಿ ಇಡೀ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದ. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳುತ್ತಿದೆ. 2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಪಕ್ಷಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸುತ್ತಿದೆ.

First published: November 8, 2019, 9:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories