ಐಎನ್ಎಕ್ಸ್ ಹಗರಣ: ಇಂದು ಸುಪ್ರೀಂಕೋರ್ಟ್​​ನಲ್ಲಿ ಪಿ ಚಿದಂಬರಂ ಜಾಮೀನು ಅರ್ಜಿ ವಿಚಾರಣೆ

ನವೆಂಬರ್ 15ರಂದು ಚಿದಂಬರಂ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಪ್ರಮುಖ ಪಾತ್ರವಹಿಸಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. 

Rajesh Duggumane | news18-kannada
Updated:November 20, 2019, 9:13 AM IST
ಐಎನ್ಎಕ್ಸ್ ಹಗರಣ: ಇಂದು ಸುಪ್ರೀಂಕೋರ್ಟ್​​ನಲ್ಲಿ ಪಿ ಚಿದಂಬರಂ ಜಾಮೀನು ಅರ್ಜಿ ವಿಚಾರಣೆ
ಪಿ ಚಿದಂಬರಂ
  • Share this:
ನವದೆಹಲಿ (ಆ.26): ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದು ನಡೆಸಲಿದೆ.

ಐಎನ್​ಎಕ್ಸ್​​ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಎಸ್​ಎಸ್​ ಬೋಬ್ಡೆ ಅವರನ್ನೊಳಗೊಂಡ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.

ನವೆಂಬರ್ 15ರಂದು ಚಿದಂಬರಂ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಪ್ರಮುಖ ಪಾತ್ರವಹಿಸಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಏನಿದು ಪ್ರಕರಣ?:

ಐಎನ್​ಎಕ್ಸ್ ಮೀಡಿಯಾಗೆ ಸಂಬಂಧಿಸಿದ ಎರಡು ಪ್ರಕರಣಗಳಿವೆ. ಭ್ರಷ್ಟಾಚಾರ ಮತ್ತು ಹಣ ಅವ್ಯವಹಾರ ಪ್ರಕರಣಗಳು ಪಿ. ಚಿದಂಬರಮ್ ಮತ್ತವರ ಪುತ್ರ ಕಾರ್ತಿ ಚಿದಂಬರಮ್ ಅವರ ಮೈ ಸುತ್ತಿವೆ. ಚಿದಂಬರಮ್ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್​ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ ಮೊತ್ತದಷ್ಟು ವಿದೇಶೀ ಬಂಡವಾಳ ಹೂಡಿಕೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕ ಮಂಡಳಿ(ಎಫ್​ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಮಗನ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರೆಂಬ ಆರೋಪ ಇದೆ.

2017ರಲ್ಲಿ ಐಎನ್​ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಮ್ ಮತ್ತಿತರರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿತ್ತು. 2018ರಲ್ಲಿ ಇಡಿಯವರೂ ಕೂಡ ಹಣ ಅವ್ಯವಹಾರದ ಪ್ರಕರಣ ದಾಖಲಿಸಿದ್ದರು.

First published:November 20, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ