370ನೇ ವಿಧಿ ರದ್ದು: ಕೇಂದ್ರದ ನಿರ್ಧಾರದ ವಿರುದ್ಧ ಸಲ್ಲಿಸಿದ ಮರುಪರಿಶೀಲನಾ ಅರ್ಜಿ ‘ಸುಪ್ರೀಂ‘ನಲ್ಲಿ ವಿಚಾರಣೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಸಾಕಷ್ಟು ಬದಲಾವಣೆಗಳಾಗಿತ್ತು. ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಾಗಿತ್ತು

Latha CG | news18-kannada
Updated:January 10, 2020, 9:08 AM IST
370ನೇ ವಿಧಿ ರದ್ದು: ಕೇಂದ್ರದ ನಿರ್ಧಾರದ ವಿರುದ್ಧ ಸಲ್ಲಿಸಿದ ಮರುಪರಿಶೀಲನಾ ಅರ್ಜಿ ‘ಸುಪ್ರೀಂ‘ನಲ್ಲಿ ವಿಚಾರಣೆ
ಸುಪ್ರೀಂ ಕೋರ್ಟ್​.
  • Share this:
ನವದೆಹಲಿ(ಜ.10): ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​​ನಲ್ಲಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್​ ಹಿರಿಯ ನಾಯಕ ಗುಲಾಂ ನಬಿ ಅಜಾದ್​ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅಜಾದ್​ ಜೊತೆಗೆ, ಕಾಶ್ಮೀರ ಟೈಮ್ಸ್​ ಪತ್ರಿಕೆಯ ಎಕ್ಸಿಕ್ಯೂಟಿವ್​​ ಎಡಿಟರ್​ ಅನುರಾಧ ಭಾಸಿನ್​ ಹಾಗೂ ಇನ್ನಿತರರು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಅಪೆಕ್ಸ್​ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಎನ್​.ವಿ.ರಮಣ, ಆರ್​ ಸುಭಾಷ್​ ರೆಡ್ಡಿ ಮತ್ತು ಬಿ.ಆರ್​. ಗವೈ ನೇತೃತ್ವದ ತ್ರಿಸದಸ್ಯ ಪೀಠವು ಕಳೆದ ವರ್ಷ ನವೆಂಬರ್​ 27ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ನವೆಂಬರ್​ 21ರಂದು ಕೇಂದ್ರ ಸರ್ಕಾರವು ಕಣಿವೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಸಮರ್ಥಿಸಿಕೊಂಡಿತ್ತು.

ಉಕ್ರೇನ್​ ವಿಮಾನ ಹೊಡೆದುರುಳಿಸಿದ್ದು ಇರಾನ್​?; ಅನುಮಾನ ವ್ಯಕ್ತಪಡಿಸಿದ ಡೊನಾಲ್ಡ್​ ಟ್ರಂಪ್​

 ಕಣಿವೆ ರಾಜ್ಯ ಎನ್ನಲಾಗುತ್ತಿದ್ದ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಸಾಕಷ್ಟು ಬದಲಾವಣೆಗಳಾಗಿತ್ತು. ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಾಗಿತ್ತು. ಅಂತೆಯೇ ಕಳೆದ ವರ್ಷ ಅಕ್ಟೋಬರ್​​​ 31ನೇ ತಾರೀಕು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಕೇಂದ್ರಾಡಳಿತ ಪ್ರದೇಶಗಳಿಗೆ ಮೊದಲ ಲೆಫ್ಟಿನೆಂಟ್ ಗವರ್ನರ್​ಗಳಾಗಿ ಗಿರೀಶ್ ಚಂದ್ರ ಮುರ್ಮು ಮತ್ತು ಆರ್​.ಕೆ. ಮಾಥೂರ್ ಅಧಿಕಾರ ಸ್ವೀಕರಿಸಿದ್ದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯಾದಂದೇ ಲೆ. ಗವರ್ನರ್​ಗಳು ಅಧಿಕಾರ ವಹಿಸಿಕೊಂಡಿದ್ದರು. ಜಮ್ಮು ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ರದ್ದುಗೊಳಿಸಬೇಕೆಂಬುದು ಸರ್ದಾರ್ ವಲ್ಲಭಭಾಯಿ ಪಟೇಲ್ ಕನಸಾಗಿತ್ತು. ಆ ಕನಸನ್ನು ಅವರ ಹುಟ್ಟುಹಬ್ಬದ ದಿನವೇ ಅಧಿಕೃತವಾಗಿ ಜಾರಿಗೆ ತರಲು ಮುಂದಾದೆವು ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿತ್ತು.

ಡಿಕೆಶಿಗೆ ಹೈಕಮಾಂಡ್​​ ಶಾಕ್​​​; ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ನೀಡುವ ಸಾಧ್ಯತೆಕಳೆದ ಆಗಸ್ಟ್​ 5ರಂದು ಕಾಶ್ಮೀರದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಟ್ಟುನಿಟ್ಟಿನ ಬಂದೋಬಸ್ತ್​ ಮಾಡಲಾಗಿತ್ತು. ಮಾಜಿ ಮುಖ್ಯಮಂತ್ರಿಗಳು ಸೇರಿ ಪ್ರಮುಖ ರಾಜಕೀಯ ಮುಖಂಡರನ್ನು ಗೃಹಬಂಧನದಲ್ಲಿ ಇಡಲಾಗಿತ್ತು. ಪ್ರಮುಖ ರಾಜಕೀಯ ನಾಯಕರನ್ನು ಪೊಲೀಸ್​ ಕಣ್ಗಾವಲಿನಲ್ಲಿಯೇ ಇರಿಸಲಾಗಿತ್ತು. ಇಂಟರ್​ನೆಟ್​, ಮೊಬೈಲ್​ ಸೇವೆಗಳೂ ಸ್ಥಗಿತಗೊಂಡಿದ್ದವು. ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ಈ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಈಗಾಗಲೇ ಕೇಂದ್ರ ಸರ್ಕಾರ ಕೆಲವು ರಾಜಕಾರಣಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಇನ್ನೂ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಒಮರ್​ ಅಬ್ದುಲ್ಲಾರನ್ನು ಬಿಡುಗಡೆ ಮಾಡಿಲ್ಲ. ಈ ಮಧ್ಯೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊಬೈಲ್​ ಎಸ್​ಎಂಎಸ್ ಸೇವೆ ಮತ್ತು ಇಂಟರ್​​ನೆಟ್​ ಸೇವೆಯೂ ಆರಂಭ ಮಾಡಲಾಗಿದೆ.
First published:January 10, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ