ನವದೆಹಲಿ: ಕಂಬಳ (Kambala) ಮತ್ತು ಜಲ್ಲಿಕಟ್ಟು (Jallikattu) ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಆ ಮೂಲಕ ಎರಡು ರಾಜ್ಯಗಳ ಸಾಂಪ್ರದಾಯಿಕ ಕ್ರೀಡೆಗೆ ಕಾನೂನಿನ ಅಂಗಳದಲ್ಲಿ ಗೆಲುವು ಸಿಕ್ಕಂತಾಗಿದೆ.
ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ನಡೆಯುವ ಜಲ್ಲಿಕಟ್ಟು, ಎತ್ತಿನ ಗಾಡಿ ಓಟ ಮತ್ತು ಕರ್ನಾಟಕದಲ್ಲಿ ನಡೆಯುವ ಕಂಬಳ ಕ್ರೀಡೆಗೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅಲ್ಲದೇ, ನಮ್ಮ ನಿರ್ಧಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಡೆಯುವ ಕಂಬಳ ಮತ್ತು ಗೂಳಿ ಓಟಕ್ಕೂ ಅನ್ವಯಿಸುತ್ತದೆ. ಈ ಕಾನೂನನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಹೇಳಿ ಅರ್ಜಿಯನ್ನು ಪೀಠ ವಜಾಗೊಳಿಸಿದೆ.
ಇದನ್ನೂ ಓದಿ: India-Russia: ಭಾರತೀಯ ಬ್ಯಾಂಕ್‌ಗಳಲ್ಲಿದೆ ರಷ್ಯಾದ ಕೋಟ್ಯಂತರ ಹಣ; ಆದರೆ ಮುಟ್ಟಂಗೂ ಇಲ್ಲ, ಬಿಡಂಗೂ ಇಲ್ಲ!
ನ್ಯಾ ಕೆಎಂ ಜೋಸೆಫ್, ನ್ಯಾ ಅಜಯ್ ರಸ್ತೋಗಿ, ನ್ಯಾ ಅನಿರುದ್ಧ ಬೋಸ್, ನ್ಯಾ ಹೃಷಿಕೇಶ್ ರಾಯ್ ಮತ್ತು ನ್ಯಾ ಸಿಟಿ ರವಿಕುಮಾರ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನಿಕ ಪೀಠ ಈ ತೀರ್ಪು ಪ್ರಕಟ ಮಾಡಿದ್ದು, ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಪರಂಪರೆಯ ಭಾಗವೆಂದು ಶಾಸಕಾಂಗವು ಘೋಷಿಸಿದಾಗ, ನ್ಯಾಯಾಂಗವು ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಪೊಂಗಲ್ ಸುಗ್ಗಿಯ ಹಬ್ಬದಲ್ಲಿ ಸಾಂಪ್ರದಾಯಿಕವಾಗಿ ಆಡಲಾಗುತ್ತದೆ, ಜಲ್ಲಿಕಟ್ಟು ಒಂದು ಗೂಳಿಯನ್ನು ಪಳಗಿಸುವ ಕ್ರೀಡೆಯಾಗಿದೆ ಎಂದು ನ್ಯಾಯಾಲಯ ಹೇಳಿತು.
ಇದನ್ನೂ ಓದಿ: Lahari Pathivada: ಕೆಲಸಕ್ಕೆ ಹೋಗಿದ್ದಾಕೆ ಅಮೆರಿಕಾದಲ್ಲಿ ಶವವಾಗಿ ಪತ್ತೆ! ಏನಾಯ್ತು ಈ ಸುಂದರ ಯುವತಿಗೆ?
ನಿಷೇಧಕ್ಕೆ ಕೂಗು ಕೇಳಿಬಂದಿತ್ತು
ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ಜಲ್ಲಿಕಟ್ಟನ್ನು ಆಯೋಜನೆ ಮಾಡಲಾಗುತ್ತದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಜಲ್ಲಿಕಟ್ಟು ಕ್ರೀಡೆಯಲ್ಲಿ ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತದೆ ಎಂದು ಆರೋಪಿಸಿ ಅನೇಕ ಕಡೆಯಿಂದ ವಿರೋಧ ಕೇಳಿಬಂದಿದ್ದವು. ಅಲ್ಲದೇ, ಜಲ್ಲಿಕಟ್ಟು ವೇಳೆ ಪ್ರಾಣಾಪಾಯ ಕೂಡ ಸಂಭವಿಸಿರೋದ್ರಿಂದ ಇದನ್ನು ನಿಷೇಧಿಸುವಂತೆಯೂ ಕೂಗು ಕೇಳಿ ಬಂದಿತ್ತು.
ಪ್ರಾಣಿಗಳ ಮೇಲಿನ ಹಿಂಸೆ ತಡೆ ಕಾಯ್ದೆ 2017ರ ಪ್ರಕಾರ ಕ್ರೀಡೆಗಳಲ್ಲಿನ ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ಗಣನೀಯವಾಗಿ ತಗ್ಗಿಸಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ