HOME » NEWS » National-international » SURGICAL STRIKE PAKISTAN ALLEGES IAF JETS CROSSED LOC RETREATED IN HASTE AFTER ISLAMABADS TIMELY RESPONSE

ಪುಲ್ವಾಮಾ ದಾಳಿಗೆ ಪ್ರತೀಕಾರ: ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ದಾಳಿ ನಡೆಸಿದ ಭಾರತೀಯ ಯುದ್ಧ ವಿಮಾನಗಳು

ಇತ್ತೀಚೆಗೆ ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಪಾಕಿಸ್ತಾನ ಉಗ್ರರು ನಡೆಸಿದ ದಾಳಿಗೆ 40 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೇ ವೇಳೆ, ಭಾರತದ ಯುದ್ಧ ವಿಮಾನಗಳು ಪಾಕ್​ ಪ್ರದೇಶದಲ್ಲಿ ಹಾರಾಟ ನಡೆಸಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

Rajesh Duggumane | news18
Updated:February 27, 2019, 12:05 PM IST
ಪುಲ್ವಾಮಾ ದಾಳಿಗೆ ಪ್ರತೀಕಾರ: ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ದಾಳಿ ನಡೆಸಿದ ಭಾರತೀಯ ಯುದ್ಧ ವಿಮಾನಗಳು
ಸಾಂದರ್ಭಿಕ ಚಿತ್ರ
  • News18
  • Last Updated: February 27, 2019, 12:05 PM IST
  • Share this:
ನವದೆಹಲಿ (ಫೆ.26): ಪುಲ್ವಾಮಾ ದಾಳಿಗೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಪಾಕ್​ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಯುದ್ಧ ವಿಮಾನಗಳು ಅಲ್ಲಿರುವ ಉಗ್ರರ ಅಡಗು ತಾಣಗಳನ್ನು ನಾಶ ಮಾಡಿವೆ ಎನ್ನಲಾಗಿದೆ. ಈ ಮೂಲಕ ಸರ್ಜಿಕಲ್​ ಸ್ಟ್ರೈಕ್​ 2 ನಡೆಸುವಲ್ಲಿ ಭಾರತ ಯಶಸ್ವಿಯಾಗಿದೆ.

ಇದೇ ಮೊದಲ ಬಾರಿಗೆ ಭಾರತೀಯ ವಾಯುಸೇನೆ ವಿಮಾನಗಳು ಪಾಕ್​ ಗಡಿ ದಾಟಿ ದಾಳಿ ನಡೆಸಿವೆ. ಮಂಗಳವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಾಲಕೋಟ್​ ಪ್ರದೇಶದಲ್ಲಿ ದಾಳಿ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಅಡಗಿರುವ ಉಗ್ರ ತಾಣಗಳ ಮೇಲೆ ದಾಳಿ ನಡೆದಿದೆ. 200-300 ಉಗ್ರರು ದಾಳಿಯಲ್ಲಿ ಸತ್ತಿದ್ದಾರೆ ಎನ್ನಲಾಗುತ್ತಿದೆ. 12 ಮಿರಾಜ್​ ಯುದ್ಧ ವಿಮಾನಗಳು ದಾಳಿಯಲ್ಲಿ ಪಾಲ್ಗೊಂಡಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಪಾಕಿಸ್ತಾನ ಉಗ್ರರು ನಡೆಸಿದ ದಾಳಿಗೆ 40 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದಾದ ಬೆನ್ನಲ್ಲೇ, ಭಾರತದ ಯುದ್ಧ ವಿಮಾನಗಳು ಪಾಕ್​ ಪ್ರದೇಶದಲ್ಲಿ ಹಾರಾಟ ನಡೆಸಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

ಈ ಘಟನೆ ಎರಡು ರಾಷ್ಟ್ರಗಳ ನಡುವೆ ಮೂಡಿರುವ ವೈಮನಸ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಮೇಜರ್​ ಜನರಲ್​ ಆಸಿಫ್​ ಗಫೂರ್​, “ಭಾರತದ ವಿಮಾನಗಳು ಮುಜಾಫರ್​ಬಾದ್​ ಸೆಕ್ಟರ್​ನಲ್ಲಿ ಹಾರಾಟ ನಡೆಸಿವೆ. ಪಾಕಿಸ್ತಾನ ವಾಯುಸೇನೆ ಇದಕ್ಕೆ ತಕ್ಕ ಉತ್ತರ ನೀಡಿದೆ. ಯಾವುದೇ ಜೀವಹಾನಿ ಉಂಟಾಗಿಲ್ಲ,” ಎಂದಿದ್ದಾರೆ.
ಇನ್ನು, ಭಾರತೀಯ ಯುದ್ಧ ವಿಮಾನಗಳು ಗಡಿ ಉಲ್ಲಂಘನೆ ಮಾಡಿದೆ ಎಂದು ಆಸಿಫ್ ಸ್ಪಷ್ಟಪಡಿಸಿದ್ದಾರೆ. "ಭಾರತ ಯುದ್ಧ ವಿಮಾನಗಳು ಗಡಿ ಉಲ್ಲಂಘನೆ ಮಾಡಿದ್ದು ನಿಜ. ನಾವು ದಾಳಿ ಮಾಡುತ್ತಿದ್ದಂತೆ ಭಾರತೀಯ ವಿಮಾನಾಗಳು ವಾಪಾಸಾಗಿವೆ. ಭಾರತದ ಯತ್ನ ವಿಫಲವಾಗಿದ್ದು, ಯಾರೂ ದಾಳಿಯಲ್ಲಿ ಗಾಯಾಳುವಾಗಿಲ್ಲ ಅಥವಾ ಮೃತಪಟ್ಟಿಲ್ಲ," ಎಂದಿದ್ದಾರೆ ಅವರು.

ದಾಳಿಯ ಎಕ್ಸ್​ಕ್ಲೂಸಿವ್​ ವಿಡಿಯೋಗಾಗಿ ಲಿಂಕ್​ ಕ್ಲಿಕ್​ ಮಾಡಿ:
First published: February 26, 2019, 8:38 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories