ಸುಶಾಂತ್‌ ಸಿಂಗ್ ಆತ್ಮಹತ್ಯೆ ಪ್ರಕರಣ; ನಟಿ ರಿಯಾ ಚಕ್ರವರ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಸುಶಾಂತ್‌ ಸಿಂಗ್ ಪ್ರಕರಣದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹಸ್ತಕ್ಷೇಪದ ನಂತರ  ಐಪಿಸಿ ಸೆಕ್ಷನ್ 341, 342, 380, 406, 420, 306ರ ಅಡಿಯಲ್ಲಿ ಸುಶಾಂತ್ ಅವರ ತಂದೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಪ್ರಕರಣವನ್ನು ಸಿಬಿಐ ಗೂ ವರ್ಗಾಯಿಸಲಾಗಿತ್ತು. ಇದೀಗ ಅಧಿಕಾರಿಗಳು ತ್ವರಿತ ವಿಚಾರಣೆಗೆ ಮುಂದಾಗಿದ್ದಾರೆ.

ಸುಶಾಂತ್‌ ಸಿಂಗ್, ರಿಯಾ ಚಕ್ರವರ್ತಿ.

ಸುಶಾಂತ್‌ ಸಿಂಗ್, ರಿಯಾ ಚಕ್ರವರ್ತಿ.

  • Share this:
ನವ ದೆಹಲಿ (ಆಗಸ್ಟ್‌ 07); ಬಾಟಿವುಡ್‌ ಖ್ಯಾತ ನಟ ಸುಶಾಂತ್‌ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡಿರುವ ಸಿಬಿಐ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಅವರ ತಂದೆ-ತಾಯಿಯ ವಿರುದ್ಧವೂ ಎಫ್‌ಐಆರ್‌ ದಾಖಲಿಸಿದ್ದಾರೆ.

ಸುಶಾಂತ್‌ ಸಿಂಗ್ ರಜಪೂತ್‌ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುತ್ತಿದ್ದಂತೆ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಅಧಿಕಾರಿಗಳು ನಟಿ ರಿಯಾ ಚಕ್ರವರ್ತಿ, ತಂದೆ ಇಂದ್ರಜೀತ್‌ ಚಕ್ರವರ್ತಿ, ತಾಯ ಸಂಧ್ಯಾ ಚಕ್ರವರ್ತಿ ಹಾಗೂ ಸಂಬಂಧಿಗಳಾದ ಶೋವಿಕ್ ಚಕ್ರವರ್ತಿ, ಸ್ಯಾಮ್ವೆಲ್ ಮಿರಾಂಡ, ಶೃತಿ ಮೋದಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.ಎಂ.ಎಸ್‌. ಧೋನಿ, ಪಿಕೆ ಸೇರಿದಂತೆ ಸೂಪರ್‌ ಹಿಟ್‌ ಚಿತ್ರಗಳಲ್ಲಿ ಅಭಿನಯಿಸಿ ಅಪಾರ ಸಂಖ್ಯೆ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಬಾಲಿವುಡ್‌ ನಟ ಸುಶಾಂತ್‌ ಸಿಂಗ್ ರಜಪೂತ್ (34) 2020 ರ ಜೂನ್ 14 ರಂದು ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣ ಇಡೀ ಬಾಲಿವುಡ್‌ ಉದ್ಯಮದಲ್ಲಿ ದೊಡ್ಡ ವಿವಾದದ ಅಲೆಯನ್ನು ಸೃಷ್ಟಿಸಿತ್ತು.

ಆದರೆ, ಸುಶಾಂತ್‌ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಈ ಪ್ರಕರಣದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹಸ್ತಕ್ಷೇಪದ ನಂತರ  ಐಪಿಸಿ ಸೆಕ್ಷನ್ 341, 342, 380, 406, 420, 306ರ ಅಡಿಯಲ್ಲಿ ಸುಶಾಂತ್ ಅವರ ತಂದೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಪ್ರಕರಣವನ್ನು ಸಿಬಿಐ ಗೂ ವರ್ಗಾಯಿಸಲಾಗಿತ್ತು. ಇದೀಗ ಅಧಿಕಾರಿಗಳು ತ್ವರಿತ ವಿಚಾರಣೆಗೆ ಮುಂದಾಗಿದ್ದಾರೆ.
Published by:MAshok Kumar
First published: