ಸುಶಾಂತ್‌ ಆತ್ಮಹತ್ಯೆ ಪ್ರಕರಣಕ್ಕೆ ನಿರ್ಣಾಯಕ ಲಿಂಕ್; ನಟನ ಮೊಬೈಲ್‌ ವಶಕ್ಕೆ ಪತ್ರ ಬರೆಯಲಿರುವ ಸಿಬಿಐ

ಮುಂಬೈ ಪೊಲೀಸರು ಮತ್ತು ಸಿಬಿಐ ಜೊತೆಗೆ, ಸುಶಾಂತ್ ಸಿಂಗ್ ಸಾವಿನಲ್ಲಿ ಮನಿ ಲಾಂಡರಿಂಗ್ ಪಾತ್ರವಿದೆಯೇ ಎಂದು ಮತ್ತೊಂದೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದವರನ್ನು ಈಗಾಗಲೇ ತನಿಖೆಗೂ ಒಳಪಡಿಸಲಾಗಿದೆ.

ನಟ ಸುಶಾಂತ್‌ ಸಿಂಗ್ ರಜಪೂತ್‌.

ನಟ ಸುಶಾಂತ್‌ ಸಿಂಗ್ ರಜಪೂತ್‌.

  • Share this:
sushanth
ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರ ತನಿಖಾ ದಳ (ಸಿಬಿಐ) ನಟನ ಮೊಬೈಲ್ ಫೋನ್ ಅನ್ನು ತಮ್ಮ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರಿಗೆ ಪತ್ರ ಬರೆಯಲು ಸಜ್ಜಾಗಿದೆ ಎನ್ನಲಾಗುತ್ತಿದೆ.


Rhea Chakraborty wrote an emotional note on Sushant Singh
ಸುಶಾಂತ್ ಸಿಂಗ್ ಅವರ ತಂದೆ ಈ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಬಿಹಾರದಲ್ಲಿ ಕೇಸ್ ದಾಖಲಿಸಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ್ದ ಬಿಹಾರ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿತ್ತು.


Sushanth singh-sachin tiwari
ಬಿಹಾರದ ಮನವಿಗೆ ಒಪ್ಪಿಗೆ ಸೂಚಿಸಿರುವ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿದೆ. ಹೀಗಾಗಿ ಈಗಾಗಲೇ ತನಿಖೆ ಆರಂಭಿಸಿರುವ ಸಿಬಿಐ ಪೊಲೀಸರು ನಟ ಸುಶಾಂತ್ ಅವರ ಫೋನ್ ಸಂಬಂಧಿಸಿದ ವಿಷಯಗಳನ್ನು ವಿಶ್ಲೇಷಿಸಲು ಬಯಸಿದೆ ಎಂದು ಹೇಳಲಾಗುತ್ತಿದೆ.


The boy who learnt playing cricket from sushant singh rajput is now a player of Mumbai Indians in IPL
ಮೂಲಗಳ ಪ್ರಕಾರ ನಟನ ವಾಟ್ಸಾಪ್ ಸಂಭಾಷಣೆ ಮತ್ತು ಫೋನ್ನಲ್ಲಿ ನಡೆಸಲಾಗಿರುವ ಹಣಕಾಸು ಸಂಬಂಧಿಸಿದ ವಿಚಾರಗಳ ಕುರಿತ ವಿವರಗಳನ್ನು ಕಲೆಹಾಕಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಪ್ರಸ್ತುತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಗಾಗಲೇ ಈ ಕುರಿತ ತನಿಖೆಯನ್ನು ನಡೆಸುತ್ತಿದ್ದಾರೆ.


Sushanth Singh Rajput
ನಟನ ಪೋನ್‌ನಿಂದ ಸಿಗಬಹುದಾದ ಮಾಹಿತಿಗಳು ಈ ಪ್ರಕರಣಕ್ಕೆ ನಿರ್ಣಾಯಕವಾಗಲಿದೆ. ಅಲ್ಲದೆ, ಜೂನ್.14 ರಂದು ಸುಶಾಂತ್ ಸಿಂಗ್ ಆತ್ಮಹತ್ಯೆ ಸುತ್ತಲಿನ ಸನ್ನಿವೇಶಗಳ ಮೇಲೆ ಇದು ಬೆಳಕು ಚೆಲ್ಲಲಿದೆ ಎಂದು ಸಿಬಿಐ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.


How Sushant Singh Rajput used to live in his dream home here is the video
ಮುಂಬೈ ಪೊಲೀಸರು ಮತ್ತು ಸಿಬಿಐ ಜೊತೆಗೆ, ಸುಶಾಂತ್ ಸಿಂಗ್ ಸಾವಿನಲ್ಲಿ ಮನಿ ಲಾಂಡರಿಂಗ್ ಪಾತ್ರವಿದೆಯೇ ಎಂದು ಮತ್ತೊಂದೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದವರನ್ನು ಈಗಾಗಲೇ ತನಿಖೆಗೂ ಒಳಪಡಿಸಲಾಗಿದೆ.


Sushant Singh Rajputs Team Launches Website In His Memory
ಸುಶಾಂತ್‌ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು.


Sushant Singh Rajput fame of MS Dhoni movie committed suicide
ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.


Rhea Chakraborty wrote an emotional note on Sushant Singh
ಆದರೆ, ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದ ನಟಿ ರಿಯಾ ಚಕ್ರವರ್ತಿ ಕುಟುಂಬ, "ಬಿಹಾರದಲ್ಲಿ ಪೊಲೀಸರು ದಾಖಲಿಸಿರುವ ಮೊದಲ ಮಾಹಿತಿ ವರದಿ (ಎಫ್ಐಆರ್) ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ. ಆದರೆ, ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದರೆ ತನಗೆ ಯಾವುದೇ ಆಕ್ಷೇಪವಿಲ್ಲ" ಎಂದು ಸ್ಪಷ್ಟಪಡಿಸಿತ್ತು.
Published by:MAshok Kumar
First published: