West Bengal Assembly Election 2021: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಸ್ವಪನ್ ದಾಸ್ಗುಪ್ತಾ ರಾಜೀನಾಮೆ; ಬಂಗಾಳದಲ್ಲಿ ಬಿಜೆಪಿಯಿಂದ ಟಿಕೆಟ್!
ಸೋಮವಾರ, ತೃಣಮೂಲ ಕಾಂಗ್ರೆಸ್ ಸಂಸದ ಮಾಹುವಾ ಮೊಯಿತ್ರಾ ಅವರು ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ತಮ್ಮ ಪ್ರಮಾಣವಚನದಿಂದ ಆರು ತಿಂಗಳ ಅವಧಿಯ ನಂತರ ರಾಜಕೀಯ ಪಕ್ಷಕ್ಕೆ ಸೇರಿದರೆ ಅವರನ್ನು ಅನರ್ಹಗೊಳಿಸಬಹುದು ಎಂದು ಟ್ವೀಟ್ ಮಾಡಿದ್ದರು
ನವ ದೆಹಲಿ (ಮಾರ್ಚ್ 16); ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತಾರಕೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾಗಿರುವ ಅಂಕಣಕಾರ ಸ್ವಪನ್ ದಾಸ್ಗುಪ್ತಾ ಇಂದು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಅಸಲಿಗೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ವ್ಯಕ್ತಿ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾ ಗುವಂತಿಲ್ಲ. ಈ ಕುರಿತು ನಿನ್ನೆ ಟ್ವೀಟ್ ಮಾಡಿದ್ದ ಟಿಎಂಸಿ ಪಕ್ಷ "ಸ್ವಪನ್ ದಾಸ್ ಗುಪ್ತ ತಮ್ಮ ಸ್ಥಾನಕ್ಕ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರೆ ಅವರನ್ನು ಸಾಂವಿಧಾನಿಕ ನಿಯಮಗಳ ಅನ್ವಯ ಅನರ್ಹಗೊಳಿಸಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿತ್ತು. ಆದರೂ, ಸ್ವಪನ್ ದಾಸ್ಗುಪ್ತಾ ಇಂದು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಗೆ ಕಾರಣವಾಗಿದೆ.
I have resigned from the Rajya Sabha today to commit myself totally to the fight for a better Bengal. I hope to file my nomination as BJP candidate for the Tarakeshwar Assembly seat in the next few days.
ಈ ಕುರಿತು ಟ್ವೀಟ್ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸ್ವಪನ್ ದಾಸ್ಗುಪ್ತಾ, "ಉತ್ತಮ ಬಂಗಾಳದ ಹೋರಾಟಕ್ಕೆ ಸಂಪೂರ್ಣವಾಗಿ ಬದ್ಧರಾಗುವ ನಿಟ್ಟಿನಲ್ಲಿ ನಾನು ಇಂದು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ತಾರಕೇಶ್ವರ ವಿಧಾನಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಭರವಸೆ ಇದೆ. ಅಷ್ಟರೊಳಗೆ ಎಲ್ಲಾ ಕಾನೂನು ತೊಡಕುಗಳನ್ನು ಮುಗಿಸುವ ವಿಶ್ವಾಸವೂ ಇದೆ" ಎಂದು ತಿಳಿಸಿದ್ದಾರೆ. 65 ವರ್ಷದ ಸ್ವಪನ್ ದಾಸ್ಗುಪ್ತಾ ಅವರ ರಾಜ್ಯಸಭಾ ಅವಧಿ ಏಪ್ರಿಲ್ 2022 ರವರೆಗೆ ಇತ್ತು ಎಂಬುದು ಉಲ್ಲೇಖಾರ್ಹ.
ಸೋಮವಾರ, ತೃಣಮೂಲ ಕಾಂಗ್ರೆಸ್ ಸಂಸದ ಮಾಹುವಾ ಮೊಯಿತ್ರಾ ಅವರು ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ತಮ್ಮ ಪ್ರಮಾಣವಚನದಿಂದ ಆರು ತಿಂಗಳ ಅವಧಿಯ ನಂತರ ರಾಜಕೀಯ ಪಕ್ಷಕ್ಕೆ ಸೇರಿದರೆ ಅವರನ್ನು ಅನರ್ಹಗೊಳಿಸಬಹುದು ಎಂದು ಟ್ವೀಟ್ ಮಾಡಿದ್ದರು. ಸ್ವಪನ್ ದಾಸ್ಗುಪ್ತಾ ಅವರನ್ನು 2016 ರಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮೇಲ್ಮನೆಗೆ ನಾಮ ನಿರ್ದೇಶನ ಮಾಡಿದ್ದರು. ಆದರೆ, ಅಂದಿನಿಂದ ಯಾವುದೇ ಪಕ್ಷದ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳದ ಸ್ವಪನ್ ದಾಸ್ಗುಪ್ತಾ ಇದೀನಿ ಬಿಜೆಪಿ ಜೊತೆಗೆ ತಮ್ಮ ನಿಷ್ಠೆಯನ್ನು ವ್ಯಕ್ತಪಡಿಸಿದ್ದಾರೆ.
"ಸ್ವಪನ್ ದಾಸ್ಗುಪ್ತಾ ಇದೀಗ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ, ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳ ಅವಧಿ ಮುಗಿದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಂಡರೆ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸ ಲಾಗುವುದು ಎಂದು ಸಂವಿಧಾನದ 10 ನೇ ವೇಳಾಪಟ್ಟಿ ಹೇಳಿದೆ. ಹೀಗಾಗಿ ಅವರನ್ನು ಅನರ್ಹಗೊಳಿಸಬೇಕು ಎಂದು ಟಿಎಂಸಿ ಪಟ್ಟು ಹಿಡಿದಿದೆ.
ಅಂಕಣಕಾರ ಮತ್ತು ರಾಜಕೀಯ ವಿಶ್ಲೇಷಕರಾದ ಸ್ವಪನ್ ದಾಸ್ಗುಪ್ತಾ ಅವರನ್ನು ಕಳೆದ ವಾರ ಬಿಜೆಪಿ ಅಭ್ಯರ್ಥಿಯಾಗಿ ಹೆಸರಿಸಿದೆ. ಮಾರ್ಚ್ 27 ರಿಂದ ಪ್ರಾರಂಭವಾಗುವ ಚುನಾವಣೆಯಲ್ಲಿ ಲೋಕಸಭಾ ಸಂಸದರಾದ ಬಾಬುಲ್ ಸುಪ್ರಿಯೋ, ಲಾಕೆಟ್ ಚಟರ್ಜಿ ಅವರನ್ನು ಕಣಕ್ಕಿಳಿಸಲಾಗಿದೆ. ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ