ಸಿಡ್ನಿ: ಇಲ್ಲಿನ ಸೆಂಟ್ರಲ್ ಸಿಡ್ನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಚಾಕು ಹಿಡಿದು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡಿ, ಸಾರ್ವಜನಿಕರ ಮೇಲೆ ಸರಣಿ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಿಡ್ನಿಯ ಯಾರ್ಕ್ ರಸ್ತೆಯಲ್ಲಿ ಮಧ್ಯಾಹ್ನ ಹೋಟೆಲ್ ಒಳಗೆ ಇದ್ದ ಮಹಿಳೆ ಮೇಲೆ ಈತ ಏಕಾಏಕಿ ದಾಳಿ ನಡೆಸಿದ್ದಾನೆ. ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ಸೆಂಟ್ ವಿನ್ಸೆಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೈಯಲ್ಲಿ ಚಾಕು ಹಿಡಿದ ವ್ಯಕ್ತಿ ಮಧ್ಯಾಹ್ನ 2 ಗಂಟೆಯಲ್ಲಿ ಸಿಡ್ನಿಯ ಯಾರ್ಕ್ ರಸ್ತೆಯಲ್ಲಿ ಓಡಾಡಿದ್ದಾನೆ. ಅಲ್ಲದೇ, ಹಲವು ಸ್ಥಳಗಳಲ್ಲಿ ಇದೇ ವ್ಯಕ್ತಿ ಚಾಕುವಿನಿಂದ ಹಲವು ಜನರಿಗೆ ಇರಿದಿರುವ ಬಗ್ಗೆ ವರದಿಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಕು ಹಿಡಿದ ವ್ಯಕ್ತಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದಾಗ ಸಾರ್ವಜನಿಕರೇ ಹಿಡಿದಿದ್ದಾರೆ. ಆನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ