• Home
 • »
 • News
 • »
 • national-international
 • »
 • Afghanistan Crisis: ಹುಡುಕಿದ ಪತ್ರಕರ್ತ ಸಿಕ್ಕಿಲ್ಲವೆಂದು ಆತನ ಸಂಬಂಧಿಗಳನ್ನು ಕೊಂದ ತಾಲಿಬಾನಿಗಳು!

Afghanistan Crisis: ಹುಡುಕಿದ ಪತ್ರಕರ್ತ ಸಿಕ್ಕಿಲ್ಲವೆಂದು ಆತನ ಸಂಬಂಧಿಗಳನ್ನು ಕೊಂದ ತಾಲಿಬಾನಿಗಳು!

ತಾಲಿಬಾನ್ ಉಗ್ರರು.

ತಾಲಿಬಾನ್ ಉಗ್ರರು.

Deutsche Welle ಮತ್ತು ಇತರ ಜರ್ಮನ್ ಮಾಧ್ಯಮ ಸಂಸ್ಥೆಗಳು ತಮ್ಮ ಅಫ್ಘಾನ್ ಸಿಬ್ಬಂದಿಗೆ ಸಹಾಯ ಮಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ಜರ್ಮನ್ ಸರ್ಕಾರಕ್ಕೆ ಮನವಿ ಮಾಡಿವೆ.

 • Share this:

  ಕಾಬೂಲ್ (ಆಗಸ್ಟ್​ 20); ಮಧ್ಯಪ್ರಾಚ್ಯ ಆಫ್ಘಾನಿಸ್ತಾನವನ್ನು ತಾಲಿಬಾನಿ ಉಗ್ರರು ಕಬಳಿಸಿ ಸರಿಯಾಗಿ ಇನ್ನೂ ನಾಲ್ಕು ದಿನಗಳೂ ಕಳೆದಿಲ್ಲ. ಅಷ್ಟರಲ್ಲೇ ತಾಲಿಬಾನಿ ಗಳ ಅಟ್ಟಹಾಸಕ್ಕೆ ಇಡೀ ಕಾಬೂಲ್ ಬೆಚ್ಚಿಬೆದ್ದಿದೆ. ನಿನ್ನೆ ಅಪ್ಘಾನಿಸ್ತಾನ ಸ್ವಾತಂತ್ರ್ಯ ಉತ್ಸವದ ರ‍್ಯಾಲಿಯಲ್ಲಿ ಗುಂಡಿನ ದಾಳಿ ಮಾಡುವ ಮೂಲಕ ಅನೇಕ ಜನರ ಸಾವಿಗೆ ಕಾರಣವಾಗಿದ್ದ ತಾಲಿಬಾನಿಗಳು ಇದೀಗ ಆಫ್ಘನ್ ಮೂಲದ ಪತ್ರಕರ್ತರ ಭೇಟೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಜರ್ಮನ್​ ನಲ್ಲಿ ಕೆಲಸ ಮಾಡುತ್ತಿರುವ ಆಫ್ಘಾನಿಸ್ತಾನ ಮೂಲದ ಪತ್ರಕರ್ತರನ್ನು ತಾಲಿಬಾನ್ ಉಗ್ರರು ಹುಡುಕಿದ್ದಾರೆ. ಆದರೆ, ಪತ್ರಕರ್ತರನ್ನು ಹುಡುಕುವಾಗ ಅವರು ಸಿಗದ ಕಾರಣಕ್ಕೆ ಅವರ ಸಂಬಂಧಿ ಯನ್ನು ತಾಲಿಬಾನಿಗಳು ಕೊಂದಿದ್ದಾರೆ ಎಂದು ವರದಿಯಾಗಿದೆ.


  ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಜರ್ಮನ್ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ಡಾಯ್ಚು ವೆಲ್ಲೆಯ (Deutsche Welle) ಪತ್ರಕರ್ತರನ್ನು ಹುಡುಕುವಾಗ ಅವರು ಸಿಗದ ಕಾರಣಕ್ಕೆ ಅವರ ಸಂಬಂಧಿಗಳಿಗೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಆ ಸುದ್ದಿವಾಹಿನಿ ತಿಳಿಸಿದೆ.


  ಈಗ ಜರ್ಮನಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗಾಗಿ ತಾಲಿಬಾನ್ ಉಗ್ರರು ಮನೆ-ಮನೆಗೆ ತೆರಳಿ ಶೋಧ ನಡೆಸುತ್ತಿದ್ದಾರೆ ಎಂದು ಡಿಡಬ್ಲ್ಯೂ ಗುರುವಾರ ಹೇಳಿದೆ. ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಎರಡನೇ ಸಂಬಂಧಿ ಗಂಭೀರವಾಗಿ ಗಾಯಗೊಂಡು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಆದರೆ, ಮೃತರ ವಿವರಗಳನ್ನು ನೀಡಿಲ್ಲ.


  ಡಿಡಬ್ಲ್ಯೂ ಡೈರೆಕ್ಟರ್ ಜನರಲ್ ಪೀಟರ್ ಲಿಂಬರ್ಗ್ ಈ ಹತ್ಯೆಯನ್ನು ಖಂಡಿಸಿದ್ದು, ಮಾಧ್ಯಮದ ಸಿಬ್ಬಂದಿ ಮತ್ತು ಅಫ್ಘಾನಿಸ್ತಾನದಲ್ಲಿರುವ ಅವರ ಕುಟುಂಬಗಳಿಗಿರುವ ಅಪಾಯವನ್ನು ಈ ಘಟನೆ ತೋರಿಸಿದೆ ಎಂದು ಹೇಳಿದ್ದಾರೆ.


  "ನಿನ್ನೆ ತಾಲಿಬಾನ್ ನಮ್ಮ ಸಂಪಾದಕರೊಬ್ಬರ ಹತ್ತಿರದ ಸಂಬಂಧಿಯನ್ನು ಹತ್ಯೆ ಮಾಡಿರುವುದು ದುರಂತ. ಇದು ಅಫ್ಘಾನಿಸ್ತಾನದಲ್ಲಿರುವ ನಮ್ಮ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬಗಳು ತೀವ್ರ ಅಪಾಯಕ್ಕೆ ಸಿಲುಕಿರುವುದಕ್ಕೆ ಇದು ಸಾಕ್ಷಿಯಾಗಿದೆ" ಎಂದು ಪೀಟರ್ ಲಿಂಬರ್ಗ್ ಹೇಳಿದ್ದಾರೆ.


  ತಾಲಿಬಾನ್ ಕನಿಷ್ಠ ಮೂರು ಇತರ ಡಿಡಬ್ಲ್ಯೂ ಪತ್ರಕರ್ತರ ಮನೆಗಳ ಮೇಲೆ ದಾಳಿ ಮಾಡಿದೆ ಎಂದು ಜರ್ಮನ್ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ತಿಳಿಸಿದೆ. "ತಾಲಿಬಾನ್ ಈಗಾಗಲೇ ಪತ್ರಕರ್ತರಿಗಾಗಿ ಕಾಬೂಲ್ ಮತ್ತು ಹೊರ ಭಾಗಗಳಲ್ಲಿ ಹುಡುಕಾಟಗಳನ್ನು ನಡೆಸುತ್ತಿದೆ ಎಂಬುದು ಸ್ಪಷ್ಟವಾಗಿದೆ" ಎಂದು ತಿಳಿಸಿದೆ.


  ಇದನ್ನೂ ಓದಿ: Opposition meet: ಇಂದು ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರ ಸಭೆ


  Deutsche Welle ಮತ್ತು ಇತರ ಜರ್ಮನ್ ಮಾಧ್ಯಮ ಸಂಸ್ಥೆಗಳು ತಮ್ಮ ಅಫ್ಘಾನ್ ಸಿಬ್ಬಂದಿಗೆ ಸಹಾಯ ಮಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ಜರ್ಮನ್ ಸರ್ಕಾರಕ್ಕೆ ಮನವಿ ಮಾಡಿವೆ.


  ಕಳೆದ ಸೋಮವಾರ ಕಾಬೂಲ್​ನಲ್ಲಿರುವ ಸಂಸತ್​ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ತಾಲಿಬಾನ್ ನಾಯಕರು, "ತಾವೂ ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವುದಲ್ಲ. ರೈತರು ಮತ್ತು ಸೈನಿಕರು ಸೇರಿದಂತೆ ಎಲ್ಲರನ್ನೂ ಕ್ಷಮಿಸಿದ್ದೇವೆ. ಮಹಿಳೆಯರಿಗೂ ಸಹ ಷರಿಯತ್ ಕಾನೂನಿನ ಅಡಿಯಲ್ಲಿ ಅವರ ಹಕ್ಕುಗಳನ್ನು ರಕ್ಷಿಸಲಾಗುವುದು. ಅಲ್ಲದೆ, ತಾವು ಆಫ್ಘಾನಿಸ್ತಾನದಲ್ಲಿ ಶಾಂತಿಯುತ ಆಡಳಿತ ನೀಡಲು ಭಯಸುತ್ತಿದ್ದೇವೆ" ಎಂದು ಭರವಸೆ ನೀಡಿದ್ದರು.


  ಇದನ್ನೂ ಓದಿ: ಪಿಚ್ ರೋಲರ್ ಕದ್ದ ಆರೋಪ: ಕೆರಳಿ ಕೆಂಡವಾದ ಟೀಮ್ ಇಂಡಿಯಾ ಕ್ರಿಕೆಟಿಗ ಪರ್ವೆಜ್ ರಸೂಲ್


  ಆದರೆ, ಭರವಸೆ ನೀಡಿ ಒಂದು ವಾರ ಕಳೆಯುವ ಮೊದಲೇ ತಾಲಿಬಾನಿಗಳು ಅಫ್ಘನ್​ನಲ್ಲಿ ಸಾಲು ಸಾಲು ಹೆಣಗಳನ್ನು ಉರುಳಿಸುತ್ತಿರುವುದು, ಮಹಿಳೆಯರ ಮೇಲೂ ಗುಂಡಿನ ದಾಳಿ ನಡೆಸುತ್ತಿರುವ ಘಟನೆಗಳು ವರದಿಯಾಗುತ್ತಿದ್ದು, ಕಳವಳಕ್ಕೆ ಕಾರಣವಾಗಿದೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published: