ಚೆನ್ನೈ: ತಮಿಳುನಾಡಿನ (Tamil Nadu) ಬಿಜೆಪಿ ಮುಖಂಡನೊಬ್ನನನ್ನು (BJP Leader Murder) ನಡುರಸ್ತೆಯಲ್ಲೇ ಅಪರಿಚಿತ ಗ್ಯಾಂಗ್ವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಂದಿದ್ದಾರೆ. ಈ ಘಟನೆ ಚೆನ್ನೈ (Chennai) ಹೊರವಲಯದ ಪೂನಮಲ್ಲೆ ಬಳಿಯ ನಸರತ್ಪೇಟೈ ಬಳಿ ನಡೆದಿದೆ. ಕೊಲೆಯಾದವರನ್ನು ಪಿಪಿಜಿ ಶಂಕರ್ (46) ಪೆರಂಬದೂರಿನ ವರಪುರಂನವರು. ಅವರು ವರಪುರಂ ಪಂಚಾಯತ್ ಕೌನ್ಸಿಲ್ ಅಧ್ಯಕ್ಷರಾಗಿ ಮತ್ತು ಬಿಜೆಪಿಯ ಎಸ್ಸಿ ಮತ್ತು ಎಸ್ಟಿ ವಿಭಾಗದ ರಾಜ್ಯ ಖಜಾಂಚಿಯಾಗಿ (Treasurer of the BJP’s SC/ST wing) ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಈತನ ಮೇಲೂ ಹಲವು ಕ್ರಿಮಿನಲ್ ಪ್ರಕರಣಗಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮದುವೆ ಮುಗಿಸಿ ಬರುವಾದ ಬಾಂಬ್ ದಾಳಿ
ಶಂಕರ್ ಬೆಂಗಳೂರು-ಚೆನ್ನೈ ಹೈವೇಯಲ್ಲಿನ ನಸರತ್ಪೇಟೈ ಎಂಬಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ನಡುರಸ್ತೆಯಲ್ಲಿ ದುರ್ಷಕರ್ಮಿಗಳ ತಂಡ ಕಾರನ್ನು ಅಡ್ಡಗಟ್ಟಿದ್ದಾರೆ. ಕಾರಿನ ಮೇಲೆ ಕಚ್ಚಾ ಬಾಂಬ್ಗಳಿಂದ ದಾಳಿ ನಡೆಸಿದ್ದಾರೆ. ಇದರಿಂದ ಗಾಬರಿಗೊಂಡ ಶಂಕರ್ ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ. ಆದರೆ ದುಷ್ಕರ್ಮಿಗಳ ತಂಡ ಆತನನ್ನು ಹಿಂಬಾಲಿಸಿಕೊಂಡು ಹೋಗಿ ಚಾಕುವಿನಿಂದ ಹಿರಿದು ಕೊಂದು ಹಾಕಿ, ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ: West Bengal: ತರಗತಿಗೆ ನುಗ್ಗಿದ ಗನ್ ಮ್ಯಾನ್! ಕಂಗಾಲಾದ ವಿದ್ಯಾರ್ಥಿಗಳು
ಆರೋಪಿಗಳ ಪತ್ತೆಗೆ ತಂಡ ರಚನೆ
ಘಟನೆಯ ಮಾಹಿತಿ ಪಡೆದ ನಸರತ್‌ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಈ ಕೃತ್ಯವನ್ನು ಹಿಂದಿನ ದ್ವೇಷದಿಂದ ನಡೆಸಲಾಗಿದೆಯೇ ಅಥವಾ ಹಣಕಾಸಿನ ವಿಚಾರವಾಗಿ ನಡೆಸಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಬಗ್ಗೆ ಅಣ್ಣಾಮಲೈ ಟೀಕೆ
ಶಂಕರ್ ಸಾವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವೀಟ್ ಮಾಡಿದ್ದು, ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ, " ಶಂಕರ್ ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಡಿಎಂಕೆ ನೇತೃತ್ವದ ಸರ್ಕಾರಕ್ಕೆ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಯಾವುದೇ ನಿಯಂತ್ರಣವಿಲ್ಲ ಎಂಬುದು ಈ ಘಟನೆಯಿಂದ ಸ್ಪಷ್ಟವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
வளர்புரம் ஊராட்சி மன்ற தலைவரும், @BJP4Tamilnadu பட்டியல் அணி மாநிலப் பொருளாளருமான பிபிஜி சங்கர் அவர்கள், சமூக விரோதிகளால் நாட்டு வெடிகுண்டு வீசி, வெட்டிப் படுகொலை செய்யப்பட்டுள்ள செய்தியறிந்து மிகுந்த அதிர்ச்சியடைந்தேன். (1/4) pic.twitter.com/NjzFCIj734
— K.Annamalai (@annamalai_k) April 28, 2023
ಅಣ್ಣಾಮಲೂ ರಾಜ್ಯ ಪೊಲೀಸ್ ಇಲಾಖೆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. " ಪೊಲೀಸರು ಆಡಳಿತ ಪಕ್ಷದ ಪ್ರಚಾರ ಘಟಕವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ಅವರು, ಸರಕಾರ ತಪ್ಪಿತಸ್ಥರನ್ನು ಬೇಗ ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಮುಂದುವರಿದರೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಸುದ್ದಿ ತಮಿಳುನಾಡು ಬಿಜೆಪಿಗೆ ದೊಡ್ಡ ಆಘಾತ ತಂದಿದೆ. ಘಟನೆ ಕುರಿತು ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜಕೀಯ ದ್ವೇಷದ ಕೃತ್ಯಗಳು ತಮಿಳುನಾಡಿನಲ್ಲಿ ಹೆಚ್ಚಾಗುತ್ತಿದೆ. ತಮಿಳುನಾಡು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ