MK Stalin: ಇದು ಇಂಡಿಯಾ, ಹಿಂದಿಯಾ ಅಲ್ಲ; ಅಮಿತ್ ಶಾ ವಿರುದ್ಧ ಗುಡುಗಿದ ಸ್ಟಾಲಿನ್

ಕೇಂದ್ರ ಸರ್ಕಾರಕ್ಕೆ ರಾಜ್ಯಗಳ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂಬ ಇಚ್ಛೆಯಿದ್ದರೆ ಕೇವಲ ಹಿಂದಿ ಮತ್ತು ಸಂಸ್ಕೃತವನ್ನಷ್ಟೇ ದೇಶದಲ್ಲಿ ಪ್ರಚಾರ ಮಾಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಅಮಿತ್ ಶಾ ಮತ್ತು ಎಂ ಕೆ ಸ್ಟಾಲಿನ್

ಅಮಿತ್ ಶಾ ಮತ್ತು ಎಂ ಕೆ ಸ್ಟಾಲಿನ್

 • Share this:
  ಚೆನ್ನೈ: ಹಿಂದಿ ವಿರುದ್ಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮತ್ತೆ ಗುಡುಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ, ನಮ್ಮ ಸಂಸ್ಕೃತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಹಿಂದಿಯನ್ನು ಕಲಿಯಬೇಕು ಎಂದು ಹೇಳಿದ ಬೆನ್ನಲ್ಲೇ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ. ನಮ್ಮ ದೇಶದ ಹೆಸರು ಇಂಡಿಯಾ ಅದನ್ನು ಹಿಂದಿಯಾ ಆಗಿ ಬದಲಾಯಿಸಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆಗ್ರಹಿಸಿದ್ದಾರೆ. ಹಿಂದಿ ರಾಷ್ಟ್ರಭಾಷೆಯಲ್ಲ, ಜೊತೆಗೆ ಹಿಂದಿ ಒಂದೇ ದೇಶದ ಅಧಿಕೃತ ಭಾಷೆಯಲ್ಲ. ದೇಶದ ಸಂಸ್ಕೃಯನ್ನು ಅರಿತುಕೊಳ್ಳಲು ಹಿಂದಿಯನ್ನೇ ಕಲಿಯಬೇಕಿಲ್ಲ ಎಂದು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.

  ಕೇಂದ್ರ ಸರ್ಕಾರಕ್ಕೆ ರಾಜ್ಯಗಳ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂಬ ಇಚ್ಛೆಯಿದ್ದರೆ ಕೇವಲ ಹಿಂದಿ ಮತ್ತು ಸಂಸ್ಕೃತವನ್ನಷ್ಟೇ ದೇಶದಲ್ಲಿ ಪ್ರಚಾರ ಮಾಡಬಾರದು. ತಮಿಳು ಭಾಷೆಯನ್ನೂ ಸೇರಿಸಿ ದೇಶದ ಎಲ್ಲ ಪ್ರಾದೇಶಿಕ ಭಾಷೆಗಳನ್ನು ಪ್ರಚಾರ ಮಾಡಲು ಸಹಕರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

  ತಮಿಳಿಗೆ ಇನ್ನಷ್ಟು ಸ್ಥಾನಮಾನಕ್ಕೆ ಆಗ್ರಹಿಸಿದ್ದ ಸ್ಟಾಲಿನ್
  ದೇಶದಲ್ಲಿ ಹಿಂದಿ ಮತ್ತು ಪ್ರಾದೇಶಿಕ ಭಾಷಾ ವೈವಿಧ್ಯತೆಯ ಚರ್ಚೆಯ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್  ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು (PM Narendra Modi) ಉಪಸ್ಥಿತರಿದ್ದ ಸಮಾರಂಭದಲ್ಲಿಯೇ ಆಗ್ರಹಿಸಿದ್ದರು.

  ಇದನ್ನೂ ಓದಿ: Russia-India: ಭಾರತಕ್ಕೆ ಬಂಪರ್ ಗಿಫ್ಟ್ ನೀಡಲು ರಷ್ಯಾ ಯೋಚನೆ!

  ಚೆನ್ನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ಭಾಷಣ ಮಾಡುವಾಗ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಈ ಹೇಳಿಕೆ ನೀಡಿದ್ದರು. ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ಮೊದಲ ಸರ್ಕಾರಿ ಕಾರ್ಯಕ್ರಮ ಇದಾಗಿತ್ತು.

  ಪ್ರಧಾನಿ ನರೇಂದ್ರ ಮೋದಿ ರಾಜ್ಯಪಾಲ ಆರ್ ಎನ್ ರವಿ, ಕೇಂದ್ರ ಸಚಿವ ಎಲ್ ಮುರುಗನ್ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಸಮ್ಮುಖದಲ್ಲಿ 2,960 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 5 ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದ ಸಂದರ್ಭದಲ್ಲೇ ಎಂ. ಕೆ. ಸ್ಟಾಲಿನ್ ಈ ಆಗ್ರಹ ಮಾಡಿದ್ದರು.

  ಇದನ್ನೂ ಓದಿ: ಕರ್ನಾಟಕದ ವಿರುದ್ಧ ಮತ್ತೆ ತಮಿಳುನಾಡು ಕಿರಿಕ್! ಪ್ರಧಾನಿ Narendra Modiಗೆ ದೂರು ಕೊಟ್ಟ ಎಂ.ಕೆ. ಸ್ಟಾಲಿನ್

  ಕೃತಜ್ಞತೆ ವ್ಯಕ್ತಪಡಿಸಿದ್ದ ಎಂ.ಕೆ.ಸ್ಟಾಲಿನ್
  ನಾನು ಪ್ರಧಾನಿಯವರಿಗೆ ನನ್ನ ಸ್ವಾಗತ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ತಮಿಳು ಭಾಷೆಗೆ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಅಧಿಕೃತತೆಯ ಸ್ಥಾನಮಾನ ನೀಡುವಂತೆ ಆಗ್ರಹಿಸಿದ್ದರು.

  ಬಿಜೆಪಿ ಜೊತೆ ಹೊಂದಾಣಿಕೆಯೇ ಇಲ್ಲ
  ಬಿಜೆಪಿ ಜೊತೆ ಸಣ್ಣ ಹೊಂದಾಣಿಕೆಯನ್ನೂ ಮಾಡಿಕೊಳ್ಳುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಖಚಿತಪಡಿಸಿದ್ದಾರೆ. ಬಿಜೆಪಿ ಮತ್ತು ಡಿಎಂಕೆ, ಎರಡೂ ಪಕ್ಷಗಳ ನಡುವೆ ಯಾವುದೇ ಸಂಬಂಧವಿಲ್ಲದ ಕಾರಣ ಡಿಎಂಕೆಯು ಬಿಜೆಪಿಯೊಂದಿಗೆ ಚಿಕ್ಕ ಹೊಂದಾಣಿಕೆಯನ್ನೂ ಮಾಡಿಕೊಳ್ಳುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುವ ಮೊದಲು ತಿಳಿಸಿದ್ದಾರೆ. ತಮ್ಮ ನಿಗದಿತ ದೆಹಲಿ ಭೇಟಿಯ ಕುರಿತು ಮಾತನಾಡಿದ ಸಿಎಂ ಸ್ಟಾಲಿನ್, ಕೈ ಕಟ್ಟಿ ಸುಮ್ಮನೆ ಕೇಳಲು ಅಲ್ಲಿಗೆ ಹೋಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
  Published by:ಗುರುಗಣೇಶ ಡಬ್ಗುಳಿ
  First published: