• Home
 • »
 • News
 • »
 • national-international
 • »
 • ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರ ಸಾವು, ನಾಲ್ಕು ಜನರ ಸ್ಥಿತಿ ಗಂಭೀರ

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರ ಸಾವು, ನಾಲ್ಕು ಜನರ ಸ್ಥಿತಿ ಗಂಭೀರ

ತಮಿಳುನಾಡು ಸ್ಫೋಟ

ತಮಿಳುನಾಡು ಸ್ಫೋಟ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಪರಿಸ್ಥಿತಿ ಚಿಂತಾ ಜನಕವಾಗಿದೆ. ಹೀಗಾಗಿ, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. 

 • Share this:

  ಚೆನ್ನೈ (ಸೆಪ್ಟೆಂಬರ್ 4): ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಐದು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ. ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್​ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್​ಡೌನ್​ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್​ ಸರ್ಕ್ಯೂಟ್​ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.


  ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.


  ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಹೇಳಿಕೆಗೂ ಮುನ್ನವೇ ಸಿಸಿಬಿ ಬಳಿ ಇತ್ತು 15 ಜನ ಸೆಲಬ್ರೆಟಿಗಳ ಲಿಸ್ಟ್!


  ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಪರಿಸ್ಥಿತಿ ಚಿಂತಾ ಜನಕವಾಗಿದೆ. ಹೀಗಾಗಿ, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

  Published by:Rajesh Duggumane
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು