Farmers Protest: ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ತಮಿಳುನಾಡಿನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಡಿಎಂಕೆ ಪಕ್ಷ

ಕೇಂದ್ರ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಮನವೋಲಿಸಲು ಸರ್ಕಾರ ಈವರೆಗೆ ಸಾಕಷ್ಟು ಪ್ರಯತ್ನಪಟ್ಟಿದೆ. ಒಟ್ಟಾರೆಯಾಗಿ 6 ಸುತ್ತಿನ ಮಾತುಕತೆ ನಡೆದಿದೆ. ಆದರೆ, ಕನಿಷ್ಟ ಬೆಂಬಲ ಬೆಲೆ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡದ ಹೊರತಾಗಿ ತಾವು ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

ದೆಹಲಿ ರೈತ ಹೋರಾಟ ಬೆಂಬಲಿಸಿ ತಮಿಳುನಾಡಿನಲ್ಲಿ ಉಪವಾಸ ಸತ್ಯಾಗ್ರಹ,.

ದೆಹಲಿ ರೈತ ಹೋರಾಟ ಬೆಂಬಲಿಸಿ ತಮಿಳುನಾಡಿನಲ್ಲಿ ಉಪವಾಸ ಸತ್ಯಾಗ್ರಹ,.

  • Share this:
    ಚೆನ್ನೈ (ಡಿಸೆಂಬರ್​ 18); ಕೇಂದ್ರದ ಕೃಷಿ ಕಾಯ್ದೆ ವಿರುದ್ಧದ ರೈತರ ಪ್ರತಿಭಟನೆ ದಿನದಿಂದ ದಿನಕ್ಕೆ ಕಾವು ಪಡೆಯುತ್ತಲೇ ಇದೆ. ಹೋರಾಟ ನಿರತ ರೈತರ ಪೈಕಿ ಈವರೆಗೆ 24 ಜನ ಮೃತಪಟ್ಟಿದ್ದು, ರೈತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತಿದೆ. ಈ ನಡುವೆ ರಾಷ್ಟ್ರದಾದ್ಯಂತ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತವಾಗುತ್ತಿದೆ. ಅನೇಕ ರಾಜ್ಯ ಸರ್ಕಾರಗಳು ಹಾಗೂ ರಾಷ್ಟ್ರೀಯ ಪಕ್ಷಗಳೂ ಸಹ ಬೆಂಬಲ ಸೂಚಿಸುತ್ತಿರುವುದು ವಿಶೇಷ. ಈ ಹಿನ್ನೆಲೆಯಲ್ಲಿ ಇಂದು ರೈತ ಹೋರಾಟವನ್ನು ಬೆಂಬಲಿಸಿ ತಮಿಳುನಾಡಿನ ಡಿಎಂಕೆ ಪಕ್ಷ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಯೋಜಿಸಿದೆ. ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮತ್ತು ಸಹೋದರಿ ಕನಿಮೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಉಪವಾಸ ಸತ್ಯಾಗ್ರಹಕ್ಕೆ ಎಲ್ಲಾ ವಿರೋಧ ಪಕ್ಷಗಳೂ ಸಹ ಬೆಂಬಲ ವ್ಯಕ್ತಪಡಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿವೆ. 



    ಈ ಕುರಿತು ಟ್ವೀಟ್ ಮಾಡಿರುವ ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್, "ಕಳೆದ 23 ದಿನಗಳಿಂದ ರೈತರು ದೆಹಲಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತಿದ್ದಾರೆ. ಹೀಗಾಗಿ ನಮಗೆ ಜೀವಮಾನವಿಡೀ ಆಹಾರ ನೀಡುವ ರೈತರಿಗಾಗಿ ನಾವು ಒಂದು ದಿನ ಉಪವಾಸ ಸತ್ಯಾಗ್ರಹ ಕೈಗೊಂಡು ಬೆಂಬಲ ಸೂಚಿಸೋಣ" ಎಂದು ತಿಳಿಸಿದ್ದಾರೆ. ಮತ್ತೊಂದು ಟ್ವೀಟ್​ನಲ್ಲಿ, "ರೈತರ ಪರವಾದ ನಮ್ಮ ಹೋರಾಟಕ್ಕೆ ತಮಿಳುನಾಡಿನ ಇಡೀ ರೈತ ಸಮುದಾಯ ಬೆಂಬಲ ಸೂಚಿಸಿದೆ. ಅಲ್ಲದೆ, ಜನ ಸಾಗರೋಪಾದಿಯಲ್ಲಿ ಆಗಮಿಸಿ ನಮ್ಮ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ" ಎಂದು ತಿಳಿಸಿದ್ದಾರೆ.



    ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿರುವ ಕೆಲವು ಸ್ಥಳೀಯರು, "ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾನೂನಗಳು ಜನದ್ರೋಹಿ ಎಂಬುದನ್ನು ನಾನು ಹೇಳಿ ನೀವು ತಿಳಿದುಕೊಳ್ಳಬೇಕಾಗಿಲ್ಲ. ಇವು ಕಾರ್ಪೊರೇಟ್‌ಗಳ ಪರ ಎಂಬುದು ಎಲ್ಲರಿಗೂ ತಿಳಿದ ವಿಷಯ. ಇದನ್ನು ವಿರೊಧಿಸಿ ದೇಶದ ರೈತ ಬಾಂಧವರು ಕುಟುಂಬ ಸಮೇತರಾಗಿ ದೆಹಲಿಗೆ ಹೋಗಿ ಪ್ರತಿಭಟಿಸುತ್ತಿದ್ದಾರೆ. ಇದಕ್ಕೆ ನಮ್ಮ ಬೆಂಬಲವಿದೆ" ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ : Amit Shah: ಬಂಗಾಳದಲ್ಲಿ ರಂಗೇರಿದ ಚುನಾವಣಾ ಕಣ; ಕೇಂದ್ರ ಗೃಹ ಸಚಿವ ಅಮಿತ್​ ಶಾ ರಿಂದ ಭಾನುವಾರ ರೋಡ್​ ಶೋ

    ಕೇಂದ್ರ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಮನವೋಲಿಸಲು ಸರ್ಕಾರ ಈವರೆಗೆ ಸಾಕಷ್ಟು ಪ್ರಯತ್ನಪಟ್ಟಿದೆ. ಒಟ್ಟಾರೆಯಾಗಿ 6 ಸುತ್ತಿನ ಮಾತುಕತೆ ನಡೆದಿದೆ. ಆದರೆ, ಕನಿಷ್ಟ ಬೆಂಬಲ ಬೆಲೆ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡದ ಹೊರತಾಗಿ ತಾವು ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ದೆಹಲಿಯ ರೈತ ಹೋರಾಟ ಸದ್ಯಕ್ಕಂತು ಮುಗಿಯುವ ಯಾವುದೇ ಲಕ್ಷಣಗಳಿಲ್ಲ.

    ಈ ನಡುವೆ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುವುದು ಸಾಂವಿಧಾನಿಕ ಹಕ್ಕಾಗಿದ್ದು, ರೈತರಿಗೂ ಹೋರಾಟ ನಡೆಸುವ ಹಕ್ಕಿದೆ. ಹೀಗಾಗಿ ಅವರ ಹೋರಾಟ ಮುಂದುವರೆಯಲಿ, ಪೊಲೀಸರು ಬಲಪ್ರಯೋಗ ಮಾಡಿ ಹೋರಾಟವನ್ನು ಹತ್ತಿಕ್ಕುವಂತಿಲ್ಲ ಎಂದು ಸುಪ್ರೀಂ ಕೋರ್ಟ್​ ತೀರ್ಪು ನೀಡಿರುವುದು ರೈತ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.
    Published by:MAshok Kumar
    First published: