ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ; ರಾತ್ರೋರಾತ್ರಿ ಬಿಡುಗಡೆಯಾಯ್ತು ಟಿಡಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ

ನಿನ್ನೆ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆಯಾಗಿರುವ ಟಿಡಿಪಿ ಮೊದಲ ಪಟ್ಟಿಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ಮಗ ಲೋಕೇಶ್​ ಅವರ ಹೆಸರಿದೆ.

Sushma Chakre | news18
Updated:April 3, 2019, 7:17 PM IST
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ; ರಾತ್ರೋರಾತ್ರಿ ಬಿಡುಗಡೆಯಾಯ್ತು ಟಿಡಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ
ಚಂದ್ರಬಾಬು ನಾಯ್ಡು
Sushma Chakre | news18
Updated: April 3, 2019, 7:17 PM IST
ಅಮರಾವತಿ (ಮಾ. 15): ಆಂಧ್ರಪ್ರದೇಶದ ಆಡಳಿತ ಪಕ್ಷವಾಗಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಏಪ್ರಿಲ್ 11ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಮಧ್ಯರಾತ್ರಿ ಬಿಡುಗಡೆಗೊಳಿಸಿದೆ.

ಟಿಡಿಪಿಯ 126 ಅಭ್ಯರ್ಥಿಗಳ ಪಟ್ಟಿಯನ್ನು ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥರಾಗಿರುವ ಚಂದ್ರಬಾಬು ನಾಯ್ಡು ನಿನ್ನೆ ರಾತ್ರಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ ಚಂದ್ರಬಾಬು ನಾಯ್ಡು, ಅವರ ಮಗ ನರಾ ಲೋಕೇಶ್​ ಹೆಸರೂ ಇದೆ. 175 ವಿಧಾನಸಭಾ ಕ್ಷೇತ್ರಗಳಿರುವ ಆಂಧ್ರಪ್ರದೇಶದಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ನಾಯ್ಡು ವ್ಯಕ್ತಪಡಿಸಿದ್ದಾರೆ.

ಇಂದು ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ:

ಆಂಧ್ರಪ್ರದೇಶದಲ್ಲಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಒಟ್ಟಾಗಿಯೇ ನಡೆಯಲಿದ್ದು, ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಟಿಡಿಪಿ ಇಂದು ಬಿಡುಗಡೆ ಮಾಡಲಿದೆ. ಚುನಾವಣಾ ಪ್ರಚಾರಕ್ಕಾಗಿ ಚಂದ್ರಬಾಬು ನಾಯ್ಡು ಆಡಿಯೋ ಸಾಂಗ್ ಬಿಡುಗಡೆ ಮಾಡಿದ್ದಾರೆ. ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ನಾಳೆಯಿಂದ ಶ್ರೀಕಾಕುಲಂ ಜಿಲ್ಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ನಾಯ್ಡು ನಿರ್ಧರಿಸಿದ್ದಾರೆ.

ನ್ಯೂಜಿಲೆಂಡ್​ ಮಸೀದಿಯಲ್ಲಿ ಶೂಟೌಟ್​; ಕೂದಲೆಳೆಯಲ್ಲಿ ಬಚಾವ್​ ಆಯ್ತು ಬಾಂಗ್ಲಾ ಕ್ರಿಕೆಟ್​ ತಂಡ!

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಟಿಡಿಪಿ ವಿಧಾನಸಭೆ ಸ್ಪೀಕರ್ ಕೊಡೆಲಾ ಶಿವಪ್ರಸಾದ ರಾವ್​ ಅವರನ್ನು ಮರು ನೇಮಕ ಮಾಡಿದೆ. ಇದೇ ಮೊದಲ ಬಾರಿಗೆ ನಾಯ್ಡು ಅವರ ಮಗ ಲೋಕೇಶ್​ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಮಂಗಳಗಿರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ತಮ್ಮ ತಂದೆಯಂತೆಯೇ ಲೋಕೇಶ್​ ಕೂಡ ಹಿಂದುಳಿದ ವರ್ಗದವರು ಹೆಚ್ಚಾಗಿರುವ ಕ್ಷೇತ್ರವನ್ನೇ ಸ್ಪರ್ಧೆಗೆ ಆಯ್ಕೆ ಮಾಡಿಕೊಂಡಿದ್ದಾರೆ.ಚಂದ್ರಬಾಬು ನಾಯ್ಡು 7ನೇ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಲಿದ್ದು, ಚಿತ್ತೂರು ಜಿಲ್ಲೆಯ ಕುಪ್ಪಂನಿಂದ ಕಣಕ್ಕಿಳಿಯಲಿದ್ದಾರೆ. ನಿನ್ನೆ ಮಧ್ಯರಾತ್ರಿ ಕಾಂಗ್ರೆಸ್​ ಪಕ್ಷದ ಕೇಂದ್ರದ ಮಾಜಿ ಸಚಿವೆ ಪನಬಕ ಲಕ್ಷ್ಮೀ ಮತ್ತು ಆಕೆಯ ಗಂಡ ಕೃಷ್ಣಯ್ಯ ಟಿಡಿಪಿಗೆ ಸೇರ್ಪಡೆಯಾಗಿದ್ದಾರೆ.

First published:March 15, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ