Teacher’s Day: ಶಿಕ್ಷಕರ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳೋಣ ಬನ್ನಿ!

History Of Teacher's Day: ಪ್ರತಿ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ. ಶಿಕ್ಷಣ ಮೂಲಾರ್ಥವನ್ನು ತಿಳಿಸಿ ಪ್ರತಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ

ಶಿಕ್ಷಕರ ದಿನ

ಶಿಕ್ಷಕರ ದಿನ

  • Share this:

ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ.. ಇದು ಆದಿ ಶಂಕರರು ರಚಿಸಿದ ಶ್ಲೋಕ. ಗುರು ಬ್ರಹ್ಮ, ಗುರು ವಿಷ್ಣು, ಗುರು ಮಹೇಶ್ವರ, ಈ ಲೋಕದ ಸೃಷ್ಟಿಕರ್ತ ಗುರು. ಆ ಮಹಾನ್ ಗುರುವಿಗೆ ನಮನ ಎನ್ನುವುದರ ಮೂಲಕ ಇಡೀ ಲೋಕವೇ ಗುರುವಿಗೆ ತಲೆಬಾಗುತ್ತದೆ.


ಪ್ರತಿ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ. ಶಿಕ್ಷಣ ಮೂಲಾರ್ಥವನ್ನು ತಿಳಿಸಿ ಪ್ರತಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ. ಪ್ರತಿ ವ್ಯಕ್ತಿಯ ಬದುಕಿನ ದೀಪವಾಗಿರುವ ಶಿಕ್ಷಕರಿಗೂ ಸಹ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ಸೆಪ್ಟೆಂಬರ್ 5. ಈ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಇಡೀ ದೇಶವೇ ಆಚರಿಸುತ್ತದೆ. ಆ ದಿನ ಅವರ ಶಿಕ್ಷಕರ ನೆನೆದು ಸಣ್ಣದೊಂದು ಧನ್ಯವಾದ ಹೇಳುತ್ತಾರೆ.


ಶಿಕ್ಷಕರ ದಿನಾಚರಣೆಯನ್ನು ವಿವಿಧ ದೇಶಗಳಲ್ಲಿ ಬೇರೆ ಬೇರೆ ದಿನ, ದಿನಾಂಕದಂದು ಆಚರಿಸುತ್ತಾರೆ. ಭಾರತದಲ್ಲಿ, ಇದನ್ನು ಪ್ರತಿವರ್ಷ ಸೆಪ್ಟೆಂಬರ್ 5 ರಂದು ಪ್ರಸಿದ್ಧ ವಿದ್ವಾಂಸ, ಭಾರತ ರತ್ನ ಪುರಸ್ಕøತ, ಮೊದಲ ಉಪರಾಷ್ಟ್ರಪತಿ, ಮತ್ತು ಸ್ವತಂತ್ರ ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುತ್ತದೆ.


ಶಿಕ್ಷಕರ ದಿನದ ಇತಿಹಾಸ
ಶಿಕ್ಷಕರ ದಿನವನ್ನು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಆಚರಿಸಲಾಗುತ್ತದೆ. ಇವರು ಸೆಪ್ಟೆಂಬರ್ 5, 1888 ರಂದು ತಿರುತ್ತಾನಿ ಪಟ್ಟಣದಲ್ಲಿ ಒಂದು ತೆಲುಗು ಕುಟುಂಬದಲ್ಲಿ ಜನಿಸಿದರು. ಅವರು ಅತ್ಯುತ್ತಮ ಶಿಕ್ಷಕ, ತತ್ವಜ್ಞಾನಿ ಮತ್ತು ರಾಜ್ಯಪಾಲರೂ ಆಗಿದ್ದರು.


ಇದನ್ನೂ ಓದಿ: ನಾಳಿನ ಟೀಚರ್ಸ್​ ಡೇಗೆ ನಿಮ್ಮ ಶಿಕ್ಷಕರಿಗೆ ಈ ರೀತಿಯಾಗಿ ವಿಶ್ ಮಾಡಿ..! ನಿಮ್ಮ ಪ್ರೀತಿಗೆ ಅವರು ಫಿದಾ ಆಗೋದು ಗ್ಯಾರಂಟಿ

ಅವರು 1952 ರಿಂದ 1962 ರವರೆಗೆ ಭಾರತದ ಮೊದಲ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು ಮತ್ತು 1962 ರಲ್ಲಿ ಭಾರತದ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದರು. ಮೊದಲ ಶಿಕ್ಷಕರ ದಿನವನ್ನು 5 ಸೆಪ್ಟೆಂಬರ್ 1962 ರಂದು ಆಚರಿಸಲಾಯಿತು. ಅಂದಿನಿಂದ ಇಂದಿನವರೆಗೂ ಸೆಪ್ಟೆಂಬರ್ 5 ಅನ್ನು ಶಿಕ್ಷಕರಿಗಾಗಿ ಮೀಸಲಿಡಲಾಗಿದೆ.


ಶಿಕ್ಷಕರ ದಿನದ ಮಹತ್ವ
ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಅವರು ನಮ್ಮನ್ನು, ನಮ್ಮ ಆತ್ಮವಿಶ್ವಾಸ, ಬದುಕನ್ನು ಬಲಪಡಿಸುತ್ತಾರೆ. ಜೀವನದ ಪ್ರತಿಯೊಂದು ಅಂಶಗಳನ್ನು ತಿದ್ದಿ ತೀಡಿ ಮತ್ತು ಜವಾಬ್ದಾರಿ ಬಗ್ಗೆ ನಮಗೆ ಕಲಿಸುತ್ತಾರೆ. ವಿದ್ಯಾರ್ಥಿಗಳ ಬದುಕು ಯಾವಾಗಲೂ ಹಸನಾಗಿರಲಿ ಎಂದು ಹಾರೈಸುವ ಅವರ ಪ್ರಯತ್ನಗಳನ್ನು ಗುರುತಿಸುವುದು ಮತ್ತು ಆಚರಿಸುವುದು ಮುಖ್ಯವಾಗಿದೆ. ಹಾಗಾಗಿ ಈ ದಿನವನ್ನು ಆಚರಿಸಲು ಹಲವು ಕಾರ್ಯಕ್ರಮಗಳನ್ನು ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದೆ. ಈ ದಿನ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ವಿಶೇಷ ಉಡುಗೊರೆಗಳನ್ನು ಸಹ ನೀಡಿ ಶುಭಾಶಯ ತಿಳಿಸಿ ಖುಷಿ ಪಡುತ್ತಾರೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

 
Published by:Sandhya M
First published: