Teacher's Day: ದೇಶದ ಎಲ್ಲಾ ಶಿಕ್ಷಕರಿಗೆ ಡೂಡಲ್ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್

Teacher's Day Google doodle: ಕೊರೋನಾ ಸಮಯದಲ್ಲಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶ್ರಮಿಸುತ್ತಿರುವ ಕ್ಲಾಸ್​ರೂಮ್ ಹೀರೋಗಳಿಗೆ ಡೂಡಲ್ ಮೂಲಕ ಗೂಗಲ್ ಗೌರವ ಸಲ್ಲಿಸಿದೆ.

ಡೂಡಲ್ ಗೌರವ

ಡೂಡಲ್ ಗೌರವ

  • Share this:
    ನವದೆಹಲಿ(ಸೆ.05): ಇಂದು ಅಂದರೆ ಸೆಪ್ಟೆಂಬರ್ 5ರಂದು ಭಾರತದಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕೊರೋನಾ ವೈರಸ್​​ನಂತಹ ಮಾರಕ ರೋಗದ ಸಂದರ್ಭದಲ್ಲಿಯೂ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ವೃಂದಕ್ಕೆ ಗೂಗಲ್ ಡೂಡಲ್​ ಮೂಲಕ ಗೌರವ ಸಲ್ಲಿಸಿದೆ. ಪ್ರತೀ ವರ್ಷ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಮಾಹಾಮಾರಿ ಕೊರೋನಾ ಸೋಂಕಿನಿಂದ ಶಾಲಾ-ಕಾಲೇಜುಗಳು ಮುಚ್ಚಿವೆ. ಹೀಗಾಗಿ ಈ ಬಾರಿ ಶಿಕ್ಷಕರ ದಿನಾಚರಣೆಯ ಸಂಭ್ರಮ ತುಸು ಕಡಿಮೆ. ಆದರೂ ಸಹ ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಿಂಜರಿಯದೇ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ದೇಶದ ಎಲ್ಲಾ ಶಿಕ್ಷಕರಿಗೆ ಗೂಗಲ್ ವಿಶೇಷ ಕೃತಜ್ಞತೆ ಸಲ್ಲಿಸಿದೆ. 1962ರಿಂದಲೂ ಪ್ರತಿವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಉದ್ದೇಶವೇನು? ಎಂಬುದರ ಬಗ್ಗೆ ತಿಳಿದುಕೊಳ್ಳಲೇಬೇಕು.

    ಪ್ರಸ್ತುತ ಕೋವಿಡ್​-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಪ್ರತಿಯೊಬ್ಬ ಶಿಕ್ಷಕ ಕೂಡ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿರಿಕೊಂಡು, ಅವರ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಆನ್​ಲೈನ್ ತರಗತಿಗಳ ಮೂಲಕವೇ ಮಕ್ಕಳ ಶಿಕ್ಷಣ ಕುಂಠಿತವಾಗದಂತೆ ಶ್ರಮಿಸುತ್ತಿದ್ದಾರೆ. ಶಿಕ್ಷಕನ ಶ್ರಮಕ್ಕೆ ಗೂಗಲ್ ಇಂದು ಗೌರವ ಸಲ್ಲಿಸುವ ಕೆಲಸ ಮಾಡಿದೆ. ಕೊರೋನಾ ಸಮಯದಲ್ಲಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶ್ರಮಿಸುತ್ತಿರುವ ಕ್ಲಾಸ್​ರೂಮ್ ಹೀರೋಗಳಿಗೆ ಡೂಡಲ್ ಮೂಲಕ ಗೂಗಲ್ ಗೌರವ ಸಲ್ಲಿಸಿದೆ.

    ತುಮಕೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ; 4 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ ನಾಲ್ಕೇ ತಿಂಗಳಲ್ಲಿ ಮಾಯ

    ಶಿಕ್ಷಕರ ದಿನಾಚರಣೆಯನ್ನು ಆಚರಿಸಲು ಒಂದು ಉದ್ದೇಶವಿದೆ. ಒಮ್ಮೆ ವಿದ್ಯಾರ್ಥಿಗಳು ರಾಧಾಕೃಷ್ಣನ್ ಅವರ ಬಳಿ ಬಂದು ನಿಮ್ಮ ಹುಟ್ಟು ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಿದ್ದೇವೆ, ತಾವುಗಳು ದಯಮಾಡಿ ಬರಲೇಬೇಕು ಎಂದು ಆಹ್ವಾನ ನೀಡಿದ್ದರಂತೆ. ಆಗ ರಾಧಾಕೃಷ್ಣನ್​ ಅವರು, ಈ ದಿನವನ್ನು ನನ್ನ ಹುಟ್ಟುಹಬ್ಬವನ್ನಾಗಿ ಆಚರಿಸುವ ಬದಲು ಶಿಕ್ಷಕರ ದಿನ ಎಂದು ಏಕೆ ಆಚರಿಸಬಾರದು? ಇದರಿಂದ ನನಗೆ ತುಂಬಾ ಸಂತೋಷವಾಗುತ್ತದೆ ಎಂದರಂತೆ. ಇದನ್ನು ಒಪ್ಪಿದ ವಿದ್ಯಾರ್ಥಿಗಳು ಅವರ ಹುಟ್ಟುಹಬ್ಬದ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲು ಪ್ರಾರಂಭಿಸಿದರಂತೆ. ಅಂದಿನಿಂದ ಪ್ರತಿವರ್ಷ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನಾಚರಣೆಯನ್ನಾಗಿ ದೇಶಾದ್ಯಂತ ಆಚರಿಸಿಕೊಂಡು ಬರಲಾಗುತ್ತಿದೆ.

    ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1888ರ ಸೆಪ್ಟೆಂಬರ್​ 5ರಂದು ತಮಿಳುನಾಡಿನ ತಿರುತನಿಯಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ರಾಧಾಕೃಷ್ಣ ಅವರು ಉತ್ತಮ ವಿದ್ಯಾರ್ಥಿಯಾಗಿದ್ದು, ಬಾಲ್ಯದಲ್ಲೇ ಓದಿನಲ್ಲಿ ಮುಂದೆ ಇದ್ದರು. ಬಳಿಕ ಮದ್ರಾಸ್​ನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಫಿಲಾಸಪಿ(ತತ್ವಶಾಸ್ತ್ರ)ಯಲ್ಲಿ ಎಂ.ಎ ಮಾಡಿದರು.
    ರಾಧಾಕೃಷ್ಣ ಅವರು ಹಲವಾರು ಕಾಲೇಜುಗಳಲ್ಲಿ ಉಪನ್ಯಾಸ ಮಾಡಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಕೊಲ್ಕತ್ತಾ ಯೂನಿವರ್ಸಿಟಿವರೆಗೂ ಅಧ್ಯಾಪಕರಾಗಿದ್ದರು. ತಮ್ಮ ಶಿಕ್ಷಕ ವೃತ್ತಿಯ ಜೊತೆ-ಜೊತೆಗೆ ಭಾರತದ ತತ್ವಶಾಸ್ತ್ರವನ್ನು ವಿಶ್ವಾದ್ಯಂತ ಪರಿಚಯಿಸಿಕೊಡಲು ಅವಿರತವಾಗಿ ಶ್ರಮಿಸಿದರು.

    ಬಳಿಕ ಆಂಧ್ರ ವಿಶ್ವವಿದ್ಯಾಲಯ, ದೆಹಲಿ ಯೂನಿವರ್ಸಿಟಿ ಮತ್ತು ಬನಾರಸ್ ಹಿಂದೂ ಯೂನಿವರ್ಸಿಟಿಯ ಉಪಕುಲಪತಿಗಳಾಗಿ ನೇಮಕಗೊಂಡರು. ಅಷ್ಟೇ ಅಲ್ಲದೇ ಆಕ್ಸ್​​ಫರ್ಡ್​ ಯೂನಿವರ್ಸಿಟಿಯಲ್ಲಿ ಮೊದಲ ಬಾರಿಗೆ ಪ್ರೊಫೆಸರ್ ಆಗಿ ನೇಮಕಗೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ರಾಧಾಕೃಷ್ಣ ಅವರು ಪಾತ್ರರಾದರು. ಆಕ್ಸ್​​ಫರ್ಡ್​ ಯೂನಿವರ್ಸಿಟಿಯಲ್ಲಿ ಪೂರ್ವಾತ್ಯ ಸಮುದಾಯ ಮತ್ತು ತತ್ವಗಳು ಎಂಬ ವಿಷಯದ ಪ್ರೊಫೆಸರ್ ಆಗಿ 1936-1952ರವರೆಗೆ ಕಾರ್ಯನಿರ್ವಹಿಸಿದರು. 1930ರಲ್ಲಿ ಚಿಕಾಗೋ ಯೂನಿವರ್ಸಿಟಿಯಲ್ಲಿ ಹಸ್ಕೆಲ್ ಅಧ್ಯಾಪಕರಾಗಿ ನೇಮಕಗೊಂಡರು. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಯುನೆಸ್ಕೋದ ಎಕ್ಸಿಕ್ಯೂಟಿವ್​ ಬೋರ್ಡ್​​ನ ಮುಖ್ಯಸ್ಥರಾಗಿ 1948ರಲ್ಲಿ ಆಯ್ಕೆಯಾಗಿದ್ದರು.
    Published by:Latha CG
    First published: