ಖಾನ್ಪುರ: ಉತ್ತರಪ್ರದೇಶದ ಹತ್ರಾಸ್ ಎಂಬಲ್ಲಿ ಮೇಲ್ಜಾತಿಯ ಯುವಕರು ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣ ಇನ್ನೂ ಮರೆಯಾಗಿಲ್ಲ. ಈ ಘಟನೆ ಇದೀಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಜನರ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಿಗೆ ಉತ್ತರಪ್ರದೇಶದಲ್ಲಿ ಮತ್ತಷ್ಟು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಪ್ರಾಂತೀಯ ನಾಗರಿಕ ಸೇವೆಗಳ (ಪಿಸಿಎಸ್) ಪ್ರಾಥಮಿಕ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಝಾನ್ಸಿ ಕಾಲೇಜು ಕ್ಯಾಂಪಸ್ ಅವರಣದಲ್ಲೇ 17 ವರ್ಷದ ಬಾಲಕಿಯ ಮೇಲೆ ಭಾನುವಾರ ಅತ್ಯಾಚಾರ ಎಸಗಲಾಗಿದೆ ಎಂದು ವರದಿಯಾಗಿದ್ದು, ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. 10ನೇ ತರಗತಿ ಓದುತ್ತಿದ್ದ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಇದೀಗ ಮತ್ತೆ ಉತ್ತರಪ್ರದೇಶದಲ್ಲಿ ದೊಡ್ಡ ಜನಾಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಅತ್ಯಾಚಾರಕ್ಕೆ ಒಳಗಾಗಿರುವ 10ನೇ ತರಗತಿ ವಿದ್ಯಾರ್ಥಿನಿ ತನ್ನ ದೂರಿನಲ್ಲಿ, ಕಾಲೇಜಿನ ಸುಮಾರು ಒಂದು ಡಜನ್ ವಿದ್ಯಾರ್ಥಿಗಳು ಬಲವಂತವಾಗಿ ತನ್ನನ್ನು ಕ್ಯಾಂಪಸ್ ಒಳಗೆ ಕರೆದೊಯ್ದ ಕೃತ್ಯ ಎಸಗಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿಕೊಂಡು ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ರೋಹಿತ್ ಸೈನಿ ಮತ್ತು ಭಾರತ್ ಕುಶ್ವಾಹ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಝಾನ್ಸಿ ಹಿರಿಯ ಪೊಲೀಸ್ ಅಧಿಕಾರಿ (ಎಸ್ಎಸ್ಪಿ) ದಿನೇಶ್ ಕುಮಾರ್.ಪಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಅಪರಾಧದಲ್ಲಿ ಬೇರೆ ಯಾವುದೇ ವಿದ್ಯಾರ್ಥಿಗಳ ಹೆಸರುಗಳು ಕಾಣಿಸಿಕೊಂಡರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ರೋಹಿತ್ ಸೈನಿ ಮತ್ತು ಭಾರತ್ ಕುಶ್ವಾಹ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಝಾನ್ಸಿ ಹಿರಿಯ ಪೊಲೀಸ್ (ಎಸ್ಎಸ್ಪಿ) ದಿನೇಶ್ ಕುಮಾರ್. ಪಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಅಪರಾಧದಲ್ಲಿ ಬೇರೆ ಯಾವುದೇ ವಿದ್ಯಾರ್ಥಿಗಳ ಹೆಸರುಗಳು ಕಾಣಿಸಿಕೊಂಡರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ಈ ನಡುವೆ ಪೊಲೀಸರು ವಿವಿಧ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರದ ಆರೋಪ) 395 (ಡಕಾಯಿತಿ), 386 (ಸುಲಿಗೆ), 323 (ನೋವನ್ನುಂಟುಮಾಡುವುದು) ಭಾರತೀಯ ದಂಡ ಸಂಹಿತೆಯ 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಐಟಿ ಸೆಕ್ಷನ್ 66 ಡಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಆಕ್ಟ್ ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 3/4 ಇದರಲ್ಲಿ ಆರೋಪಿ ರೋಹಿತ್ ಸೈನಿ ಮತ್ತು ಭಾರತ್ ಕುಶ್ವಾಹ ಹೆಸರನ್ನು ಸೇರಿಸಲಾಗಿದೆ. ಇನ್ನೂ ಉಳಿದ ಆರೋಪಿಗಳಾದ ಶೈಲೇಂದ್ರ ನಾಥ್ ಪಾಠಕ್, ಮಾಯಾಂಕ್ ಶಿವಾರೆ, ವಿಪಿನ್ ತಿವಾರಿ, ಮೋನು ಪರಿ, ಧರ್ಮೇಂದ್ರ ಸೇನ್ ಮತ್ತು ಸಂಜಯ್ ಕುಶ್ವಾಹ ಅವರನ್ನು ಪೊಲೀಸರು ಬಂಧಿಸಿದ್ದಾರೆ ”ಎಂದು ಎಸ್ಎಸ್ಪಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಕೇಂದ್ರ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ ರೈತ ಹೋರಾಟ; ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ದಾಳಿಗೆ ಯತ್ನ, ಕಾರು ಧ್ವಂಸ!
ಏತನ್ಮಧ್ಯೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲದೆ, ಝಾನ್ಸಿ ಜಿಲ್ಲಾಧಿಕಾರಿ ಆಂಧ್ರ ವಂಸಿ ಅವರು ಸಿಪ್ರಿ ಬಜಾರ್ ಪೊಲೀಸರಿಗೆ ಶೀಘ್ರದಲ್ಲಿ ಚಾರ್ಜ್ಶೀಟ್ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ ಮತ್ತು ಪ್ರಕರಣವನ್ನು ತ್ವರಿತಗತಿಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಈ ಆಘಾತದಿಂದ ಹೊರಬರಲು ಹುಡುಗಿಗೆ ಸಹಾಯ ಮಾಡಲು ಮಾನಸಿಕ ಸಹಾಯವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರ ವಿದ್ಯಾರ್ಥಿಗಳ ಗುರುತನ್ನು ಪತ್ತೆಹಚ್ಚಲು ಕಾಲೇಜು ಆಡಳಿತ ಮಂಡಳಿ ಪೊಲೀಸರೊಂದಿಗೆ ಸಹಕರಿಸಲಿದೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ