ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ಯುವಕ ಕೋಮು ಭಾಷಣಕ್ಕಾಗಿ ಮತ್ತೆ ಅರೆಸ್ಟ್

ಕಳೆದ ವರ್ಷ ಸಿಎಎ ವಿರೋಧಿ ಹೋರಾಟದಲ್ಲಿ ನಿರತರಾಗಿದ್ದ ಹೋರಾಟಗಾರರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದ ವ್ಯಕ್ತಿಯೇ ಇದೀಗ ಪಟೌಡಿಯಲ್ಲಿ ಕೋಮು ಭಾಷಣ ಮಾಡಿದ್ದು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿ.

ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿ.

  • News18
  • Last Updated :
  • Share this:
    ಗುರಗಾಂವ್; ಕಳೆದ ವರ್ಷ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವ ಮೂಲಕ ಸುದ್ದಿಯಾಗಿದ್ದ 19 ವರ್ಷದ ಯುವಕ ವರುಣ್ ಸಿಂಗ್ಲಾ ಎಂಬ ವ್ಯಕ್ತಿಯನ್ನು ಪಟೌಡಿಯ ಮಹಾ ಪಂಚಾಯತ್ ನಲ್ಲಿ ಕೋಮು ಭಾಷಣ ಮಾಡಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಸೋಮವಾರ ಮತ್ತೆ ಬಂಧಿಸಿದ್ದಾರೆ. ಯುವಕನ ಬಂಧನ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಮನೇಸರ್ ಉಪ ಪೊಲೀಸ್ ಆಯುಕ್ತ ವರುಣ್ ಸಿಂಗ್ಲಾ, "ಇತ್ತೀಚೆಗೆ ಪಟೌಡಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕೋಮು ಭಾಷಣ ಮಾಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ" ಎಂದು ತಿಳಿದ್ದಾರೆ.

    ಕಳೆದ ವರ್ಷ ಸಿಎಎ ವಿರೋಧಿ ಹೋರಾಟದಲ್ಲಿ ನಿರತರಾಗಿದ್ದ ಹೋರಾಟಗಾರರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದ ವ್ಯಕ್ತಿಯೇ ಇದೀಗ ಪಟೌಡಿಯಲ್ಲಿ ಕೋಮು ಭಾಷಣ ಮಾಡಿದ್ದು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಪೊಲೀಸರಿಗೆ ಬಂದ ದೂರಿನ ಆಧಾರದ ಮೇಲೆ ಈ ಬಂಧನ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪಟೌಡಿ ಮಹಾಪಂಚಾಯತ್‌ನಲ್ಲಿ ಹರಿಯಾಣ ಬಿಜೆಪಿ ವಕ್ತಾರ ಮತ್ತು ಕರ್ಣಿ ಸೇನಾ ಅಧ್ಯಕ್ಷ ಸೂರಜ್ ಪಾಲ್ ಅಮು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

    ಬಂಧಿತ ಆರೋಪಿ ವರುಣ್ ಸಿಂಗ್ಲಾ ವಿರುದ್ಧ ಇದೀಗ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

    ಇದನ್ನೂ ಓದಿ: Petrol Price Today| ಡೀಸೆಲ್ ಬೆಲೆ ಸ್ಥಿರ, ಪೆಟ್ರೋಲ್ ಬೆಲೆ ಮತ್ತೆ 29 ಪೈಸೆ ಏರಿಕೆ!

    ಸಿಎಎ ವಿರೋಧ ಹೋರಾಟಗಾರರ ಮೇಲೆ ನಡೆದಿತ್ತು ಗುಂಡಿನ ದಾಳಿ:

    ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ಮತ್ತು ಎನ್ಆರ್​ಸಿ ಕಾಯ್ದೆಯ ವಿರುದ್ಧ ಕಳೆದ ವರ್ಷ ನಿರಂತರವಾಗಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇದ್ದವು. ಕಳೆದ ಜನವರಿಯಲ್ಲಿ ಸಹ ದೆಹಲಿಯ ಜಾಮಿಯ ನಗರ್ ಬಳಿ ಸಿಎಎ ವಿರೋಧಿ ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ, ಈ ಪ್ರತಿಭಟನೆ ವೇಳೆ ಅರುಣ್ ಸಿಂಗ್ಲಾ ಎಂಬ 19 ವರ್ಷದ  ವ್ಯಕ್ತಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಆತಂಕ ಸೃಷ್ಟಿಸಿದ್ದ.

    ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದ ಬಂದೂಕುಧಾರಿ ವ್ಯಕ್ತಿ ನೋಡ ನೋಡುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ಓರ್ವ ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯವಾಗಿತ್ತು.

    ಇದನ್ನೂ ಓದಿ: Rain Update| ಕರ್ನಾಟಕದಲ್ಲಿ ಜುಲೈ 16ರ ವರೆಗೆ ಆರೆಂಜ್ ಅಲರ್ಟ್​; ದೇಶದ ನಾನಾ ಭಾಗಗಳಲ್ಲೂ ನಡೆಯಲಿದೆ ವರುಣನ ಆರ್ಭಟ

    ಘಟನೆ ನಡೆಯುತ್ತಿದ್ದಂತೆ ವಿದ್ಯಾರ್ಥಿಗಳ ಮೇಲೆ ಫೈರ್ ಮಾಡಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಆದರೆ, ಕೆಲ ದಿನಗಳಲ್ಲೇ ಆತನಿಗೆ ಬೇಲ್ ನೀಡಿ ಮನೆಗೆ ಕಳುಹಿಸಲಾಗಿತ್ತು. ಇದೀಗ ಆತ ಮತ್ತೆ ಕೋಮು ಪ್ರಚೋಧನೆ ಭಾಷಣ ಮಾಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಆದರೆ, ಈಗಲಾದರೂ ಈತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆಯೇ? ಎಂಬುದನ್ನು ಕಾದುನೋಡಬೇಕಿದೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: