ಪುರುಷರ ದೌರ್ಜನ್ಯಕ್ಕೆ ಇಬ್ಬರು ಹೆಣ್ಣು ಮಕ್ಕಳು ಬಲಿ; ಇದಕ್ಕೆ ಕೊನೆ ಯಾವಾಗ..!

ನಿತ್ಯ ಪುರುಷರ ದೌರ್ಜನ್ಯದಿಂದಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸುತ್ತಿರುವ ಮಹಿಳೆಯರು- ಯುವತಿಯರು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದೆ. ಇಂತಹ ಕೃತ್ಯಗಳು ಅಂತ್ಯವಾಗುವುದಿರಲಿ, ಕಡಿಮೆಯಾಗುವುದಾದರೂ ಯಾವಾಗ ಎಂಬುದು ಪ್ರಶ್ನೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಮೂವರು ನೆರೆಹೊರೆಯವರ ಮಾನಸಿಕ ಕಿರುಕುಳ ತಾಳಲಾರದೆ 19 ವರ್ಷದ ಯುವತಿಯೊಬ್ಬಳು ಶೌಚಾಲಯ ಸ್ವಚ್ಛಗೊಳಿಸುವ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಮಗಳ ಸಾವಿನಿಂದ ನೊಂದ ತಂದೆಯು ನೆರೆಹೊರೆಯವರಾದ ಚಂದ್ರಬನ್, ಈತನ ಮಗ ಟೀಟು, ಮತ್ತೊಬ್ಬ ವಿಜಯ್ ಎಂಬ ವ್ಯಕ್ತಿಗಳ ಮೇಲೆ ದೂರು ದಾಖಲಿಸಿದ್ದಾರೆ. ಮಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದದ್ದು ಅಲ್ಲದೇ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮತ್ತು ಅಪಹರಿಸುವ ಬಗ್ಗೆ ಬೆದರಿಕೆಯೊಡ್ಡಿದ್ದರು. ಈ ಕುರಿತು ದೂರು ದಾಖಲಿಸಿರುವುದಾಗಿ ಹೇಳಿದರೂ ಅವರು ತಲೆಕೆಡಿಸಿಕೊಳ್ಳಲಿಲ್ಲ ಎಂದು ಹೇಳಿದ್ದಾರೆ.

ನಿರಂತರವಾಗಿ ಮಾನಸಿಕವಾಗಿ ಹಿಂಸಿಸುತ್ತಿದ್ದ ಕಾರಣದಿಂದ ಬೇಸತ್ತ ಆ ಯುವತಿ ಶೌಚಾಲಯ ಸ್ವಚ್ಛಗೊಳಿಸುವ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಗ್ರಾದ ಮಲ್ಪುರದಲ್ಲಿರುವ ತಮ್ಮ ಮನೆಯಲ್ಲೇ ಗುರುವಾರ ಸಂಜೆ ಸುಮಾರು 6 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಆ ಯುವತಿಯನ್ನು ಎಸ್‍ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಆಕೆ ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Kolar Grama Panchayat Secretory Dies By Suicide after her Sister and Father Died in Same Way.
ಸಾಂದರ್ಭಿಕ ಚಿತ್ರ.


ಮೃತ ಯುವತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಕುಮ್ಮಕ್ಕು) ಮತ್ತು 511 (ಜೀವಾವಧಿ ಶಿಕ್ಷೆ ಅಥವಾ ಇತರ ಜೈಲು ಶಿಕ್ಷೆ ವಿಧಿಸುವ ಅಪರಾಧಗಳಿಗೆ ಶಿಕ್ಷೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಟು ಎಂಬಾತ ತಲೆಮರೆಸಿಕೊಂಡಿದ್ದು, ವಿಜಯ್ ಮತ್ತು ಚಂದ್ರಬನ್ ಅವರನ್ನು ಬಂಧಿಸಲಾಗಿದೆ. ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: Happy Birthday Shwetha Srivatsav: ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ

ಉತ್ತರ ಪ್ರದೇಶದಲ್ಲಿ ಮಹಿಳೆ ಆತ್ಮಹತ್ಯೆ

25 ವರ್ಷದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. ಆಕೆಯ ಪತಿ ಮೂರು ಬಾರಿ ತಲಾಕ್ ಎಂದು ಹೇಳುವ ಮೂಲಕ ವಿಚ್ಛೇದನ ನೀಡಿದ್ದರು ಮತ್ತು ಆಕೆಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಇದರಿಂದ ನೊಂದ ಮಹಿಳೆಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ದ

ಇದನ್ನೂ ಓದಿ: Thalaivii Release: ದಿ ಜಯಲಲಿತಾರ ಸ್ಮಾರಕಕ್ಕೆ ಭೇಟಿ ಕೊಟ್ಟ ನಟಿ Kangana Ranaut

ಮಹಿಳೆಯು ಆಗಸ್ಟ್ 18 ರಂದು ತನ್ನ ಗಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆತ ನನಗೆ ತ್ರಿವಳಿ ತಲಾಖ್ ನೀಡಿದ್ದಾನೆ ಮತ್ತು ತನ್ನ ಮಗುವನ್ನು ತನ್ನಿಂದ ಬಲವಂತವಾಗಿ ಕಿತ್ತುಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಹಿಳೆಯ ಪತಿ ಆಕೆಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾನೆ. ಇದರಿಂದ ನೊಂದ ಮಹಿಳೆ ವಿಷ ಸೇವಿಸುವ ಮೂಲಕ ತನ್ನ ಜೀವ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗರ್ಲ್​ಫ್ರೆಂಡ್ಸ್​​ಗೆ ಸಹೋದರಿಯ ಬಟ್ಟೆಯನ್ನು ಉಡುಗೊರೆಯಾಗಿ ಕೊಡುತ್ತಿದ್ದ Ranbir Kapoor..!

ಹೀಗೆ ನಿತ್ಯ ಪುರುಷರ ದೌರ್ಜನ್ಯದಿಂದಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸುತ್ತಿರುವ ಮಹಿಳೆಯರು- ಯುವತಿಯರು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದೆ. ಇಂತಹ ಕೃತ್ಯಗಳು ಅಂತ್ಯವಾಗುವುದಿರಲಿ, ಕಡಿಮೆಯಾಗುವುದಾದರೂ ಯಾವಾಗ ಎಂಬುದು ಪ್ರಶ್ನೆಯಾಗಿದೆ. ಹೆಣ್ಣನ್ನು ಪೂಜನೀಯ ಭಾವದಲ್ಲಿ ನೋಡುವ ನಾಡಲ್ಲೇ ಇಂತಹ ಘಟನೆಗಳು ವರದಿಯಾಗುತ್ತಿರುವುದು ಮಾತ್ರ ದುರಾದೃಷ್ಟವೇ ಸರಿ.
Published by:Anitha E
First published: