Child Rape| ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ; ಆರೋಪಿ ಬಂಧನ

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

ಜಿಲ್ಲೆಯ ಜವಹಾರ್ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಆರೋಪಿಯು, ಅದೇ ಗ್ರಾಮದ ಬಾಲಕಿಯ ಮೇಲೆ ಸುಮಾರು ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಕಳೆದ ಒಂದೆರೆಡು ದಿನಗಳ ಹಿಂದೆ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.

  • Share this:

ಮುಂಬೈ (ಅಕ್ಟೋಬರ್​ 12); ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯಲ್ಲಿ 15 ವರ್ಷ ವಯಸ್ಸಿನ ಬಾಲಕಿಯ ಮೇಲೆ (Child Rape) ದುಷ್ಕರ್ಮಿಯೊಬ್ಬ ಹಲವು ಬಾರಿ ಅತ್ಯಾಚಾರವೆಸಗಿದ್ದು (Rape Case), ಇದರಿಂದ ಬಾಲಕಿ ಗರ್ಭಿಣಿಯಾಗಿ ದ್ದಾಳೆ. ಈ ವಿಚಾರ ತಿಳಿದ ನಂತರ ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 20 ವರ್ಷದ ಯುವಕನನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ ಎಂದು ಜವಾಹರ್ ಪೊಲೀಸ್ ಠಾಣೆಯ (Police Station) ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಜಿಲ್ಲೆಯ ಜವಹಾರ್ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಆರೋಪಿಯು, ಅದೇ ಗ್ರಾಮದ ಬಾಲಕಿಯ ಮೇಲೆ ಸುಮಾರು ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಕಳೆದ ಒಂದೆರೆಡು ದಿನಗಳ ಹಿಂದೆ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದರು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.


ಇದನ್ನೂ ಓದಿ: Child Marriage| ಬಾಲ್ಯ ವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಹೆಣ್ಣು ಮಕ್ಕಳ ಸಾವು; ವರ್ಷಕ್ಕೆ 22,000 ಬಾಲಕಿಯರ ಬದುಕು ಅಂತ್ಯ!


ಬಾಲಕಿ ಶನಿವಾರ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವಕನ ವಿರುದ್ದ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

top videos
    First published: