Ukraineನಿಂದ ಮರಳಿರುವ ಮೆಡಿಕಲ್ ವಿದ್ಯಾರ್ಥಿಗಳಿಗೆ ರಿಲೀಫ್: ಶಿಕ್ಷಣದ ವೆಚ್ಚವನ್ನು ಸರ್ಕಾರವೇ ನೀಡಲಿದೆ!

Ukraine Returned Medical Students: ತೆಲಂಗಾಣ ಸರ್ಕಾರ (Telangana Govt) ಉಕ್ರೇನ್​​ನಿಂದ ವಾಪಸ್​​​ ಆಗಿರುವ ಮೆಡಿಕಲ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ತೆರಳಿದ್ದ ತೆಲಂಗಾಣದ ವಿದ್ಯಾರ್ಥಿಗಳ ಅಧ್ಯಯನಕ್ಕೆ ಧನಸಹಾಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಘೋಷಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹೈದರಾಬಾದ್: ಉಕ್ರೇನ್​ (Ukraine) ಮೇಲೆ ರಷ್ಯಾ (Russia) ದಾಳಿ ಮಾಡುತ್ತಿದ್ದಂತೆ ಉಕ್ರೇನ್​​ನಲ್ಲಿದ್ದ ಭಾರತೀಯರನ್ನು ಕೇಂದ್ರ ಸರ್ಕಾರ (Central Government) ಆಪರೇಷನ್​ ಗಂಗಾ (Operation Ganga) ಅಡಿಯಲ್ಲಿ ಸ್ವದೇಶಕ್ಕೆ ಸುರಕ್ಷಿತವಾಗಿ ಕರೆತಂದಿದೆ. ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ವ್ಯಾಸಂಗ ಮಾಡಲು ಉಕ್ರೇನ್​​ಗೆ ತೆರಳುತ್ತಾರೆ. ಈಗ ಅವರೆಲ್ಲಾ ಸ್ವದೇಶಕ್ಕೆ ವಾಪಸ್​​ ಆಗಿದ್ದು, ಅವರ ಶೈಕ್ಷಣಿಕ ಭವಿಷ್ಯ ಡೋಲಾಯಮಾನವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಕದ ತೆಲಂಗಾಣ ಸರ್ಕಾರ (Telangana Govt) ಉಕ್ರೇನ್​​ನಿಂದ ವಾಪಸ್​​​ ಆಗಿರುವ ಮೆಡಿಕಲ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ತೆರಳಿದ್ದ ತೆಲಂಗಾಣದ ವಿದ್ಯಾರ್ಥಿಗಳ ಅಧ್ಯಯನಕ್ಕೆ ಧನಸಹಾಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಘೋಷಿಸಿದ್ದಾರೆ. ಇಂದು ತೆಲಂಗಾಣ ರಾಜ್ಯ ವಿಧಾನಸಭೆಯಲ್ಲಿ ಘೋಷಣೆ ಮಾಡಿ ಸಿಎಂ ಕೆಸಿಆರ್​​, ರಾಜ್ಯದ 740 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಈಗ ಯುದ್ಧ ಪೀಡಿತ ರಾಷ್ಟ್ರದಿಂದ ಮರಳಿದ್ದಾರೆ, ನಾವು ಅವರನ್ನು ಬೆಂಬಲಿಸುತ್ತೇವೆ. ಈ ಬಗ್ಗೆ ನಾವು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ ಎಂದು ಸಿಎಂ ತಮ್ಮ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ: Explained: ವಿದೇಶಗಳಲ್ಲಿ ಓದುವ 80% Doctors ಭಾರತದ ಲೈಸೆನ್ಸ್ ಪರೀಕ್ಷೆಯಲ್ಲಿ ವಿಫಲ: ಅಂಥವರು ಕೊನೆಗೇನು ಮಾಡ್ತಾರೆ?

MBBS ವ್ಯಾಸಂಗದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಇದಷ್ಟೇ ಅಲ್ಲದೇ ಸಿಎಂ ಕೆಸಿಆರ್ ವಿಧಾನಸಭೆಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕೆಲಸದಿಂದ ವಜಾಗೊಂಡಿರುವ ಕ್ಷೇತ್ರ ಸಹಾಯಕರನ್ನು ಮರು ನೇಮಕ ಮಾಡಿಕೊಳ್ಳಲಾಗುವುದು. ಆದರೆ, ಮತ್ತೆ ಮುಷ್ಕರ ಮಾಡುವ ತಪ್ಪು ಮಾಡಬೇಡಿ ಎಂದು ಕ್ಷೇತ್ರ ಸಹಾಯಕರಿಗೆ ಸಿಎಂ ಸೂಚಿಸಿದರು. ಮೆಪ್ಮಾ, ಐಕೆಪಿ, ಎಸ್ ಇಆರ್ ಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೂ ಸಿಇಒ ಶುಭ ಸುದ್ದಿ ನೀಡಿದರು. ಇವರಿಗೂ ಸರ್ಕಾರಿ ನೌಕರರಿಗೆ ನೀಡುವ ವೇತನವನ್ನೇ ನೀಡುವುದಾಗಿ ಘೋಷಿಸಿದರು. ಉಕ್ರೇನ್‌ನಿಂದ ರಾಜ್ಯಕ್ಕೆ ಮರಳುತ್ತಿರುವ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಸಿಎಂ ಕೆಸಿಆರ್ , ಅವರ ಎಂಬಿಬಿಎಸ್ ವ್ಯಾಸಂಗದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದರು.

ತೆಲಂಗಾಣ ವಿದ್ಯಾರ್ಥಿಗಳಿಗೆ ರಿಲೀಫ್

ಭಾರತದಿಂದ ಸುಮಾರು 18,000 ವಿದ್ಯಾರ್ಥಿಗಳು ಉಕ್ರೇನ್‌ನ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಯುದ್ಧ ಭೀತಿ ಹಿನ್ನೆಲೆ ಭಾರತೀಯ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರಲಾಗಿದೆ ಈ 18 ಸಾವಿರದಲ್ಲಿ ಸುಮಾರು ಏಳುನೂರು ತೆಲಂಗಾಣ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ಈಗ ಅವರ ಭವಿಷ್ಯ ಪ್ರಶ್ನಾರ್ಥವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೆಲಂಗಾಣ ಸರ್ಕಾರ ರಿಲೀಫ್​ ನೀಡಿದೆ. ಉಕ್ರೇನ್‌ನಿಂದ ಹಿಂದಿರುಗುವ ಇತರ ರಾಜ್ಯಗಳ ವಿದ್ಯಾರ್ಥಿಗಳ ಬಗ್ಗೆಯೂ ಕೇಂದ್ರ ಸರ್ಕಾರವು ಸೂಕ್ತ ಕ್ರಮ ಕೈಗೊಂಡು ಅವರಿಗೆ ಬೆಂಬಲ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಇದನ್ನೂ ಓದಿ: Ukraine Crisis: ಮೇ ತಿಂಗಳಲ್ಲಿ ಮುಗಿಯುತ್ತಾ ರಷ್ಯಾ-ಉಕ್ರೇನ್ ಯುದ್ಧ?

ಫೆಬ್ರವರಿಯಲ್ಲಿ ರಷ್ಯಾದ ಆಕ್ರಮಣವು ಉಕ್ರೇನ್​​ನಲ್ಲಿದ್ದ ವಿದ್ಯಾರ್ಥಿಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿತು.  ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿ ಆಹಾರ, ನೀರು ಮತ್ತು ಕೆಲವು ಸಂದರ್ಭಗಳಲ್ಲಿ ವಸತಿ ಸಿಗದೆ ಸಂಕಷ್ಟ ಎದುರಿಸಬೇಕಾಯಿತು. ಖಾರ್ಕಿವ್‌ನಲ್ಲಿ ರಷ್ಯಾದ ಶೆಲ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಶೇಖರಪ್ಪ ಸಾವನ್ನಪ್ಪಿದ್ದಾರೆ.

ವಿದೇಶಗಳಿಗೆ ಶಿಕ್ಷಣಕ್ಕಾಗಿ ಹೋಗುವ ಬಗ್ಗೆ ಚರ್ಚೆ

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಬೇಕೇ ಎಂಬ ಚರ್ಚೆ ಪ್ರಾರಂಭವಾಗಿದೆ.  ಭಾರತದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ವಿದೇಶಕ್ಕೆ ಹೋಗುತ್ತಾರೆ ಎಂದು ಕೆಲವರು ವಾದಿಸಿದರೆ, ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಭಾರತದಲ್ಲಿ ಸಾಕಷ್ಟು ವೈದ್ಯಕೀಯ ಸೀಟುಗಳಿಲ್ಲ ಎಂದು ಇತರರು ವಾದಿಸುತ್ತಿದ್ದಾರೆ. ಭಾರತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು "ಅರ್ಹತೆ ಗಳಿಸಲು ವಿಫಲರಾದ ನಂತರ" ವಿದೇಶದಲ್ಲಿ ಓದುತ್ತಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.
Published by:Kavya V
First published: