Terror Attack: ಭಾರತೀಯ ಸೇನೆಯ ಮೇಲೆ ಉಗ್ರರ ಆತ್ಮಾಹುತಿ ದಾಳಿ, ಮೂವರು ಸೈನಿಕರು ಹುತಾತ್ಮ

Indian Army: ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇಬ್ಬರೂ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಜಮ್ಮು ಮತ್ತು ಕಾಶ್ಮೀರದ (Jammu And Kashmir Terror Attack) ರಾಜೌರಿಯಲ್ಲಿರುವ  ಸೇನಾ ಶಿಬಿರದ ಮೇಲೆ ಇಂದು (ಆಗಸ್ಟ್ 11) ಬೆಳಗ್ಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಮೂವರು ಯೋಧರು (Indian Army Soldiers) ಹುತಾತ್ಮರಾಗಿದ್ದಾರೆ. ಸೇನಾ ಶಿಬಿರದೊಳಗೆ ನುಗ್ಗಿದ ಇಬ್ಬರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಆತ್ಮಾಹುತಿ ದಾಳಿಯಲ್ಲಿ (Attack On Army Camp)  ದುರದೃಷ್ಟವಷಾತ್  ಐವರು ಯೋಧರೂ ಗಾಯಗೊಂಡಿದ್ದಾರೆ. ಭಯೋತ್ಪಾದಕರು ರಾಜೌರಿ ಜಿಲ್ಲೆಯ ದರ್ಹಾಲ್ ಪ್ರದೇಶದ ಸೇನಾ ಶಿಬಿರಕ್ಕೆ ನುಗ್ಗಿದ ನಂತರ ಭಾರೀ ಗುಂಡಿನ ದಾಳಿ ನಡೆಸಲಾಗಿದೆ.  ಈ ಆತ್ಮಾಹುತಿ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪ್ರತಿದಾಳಿ ನಡೆಸಿತು.

  ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇಬ್ಬರೂ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.  ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಕೈವಾಡ
  ರಜೌರಿ ಜಿಲ್ಲೆ ಮತ್ತು ಜಮ್ಮು ಪ್ರದೇಶದ ಇತರ ಭಾಗಗಳು ಹೆಚ್ಚಾಗಿ ಭಯೋತ್ಪಾದನೆಯಿಂದ ಮುಕ್ತವಾಗಿವೆ. ಆದರೆ ಕಳೆದ ಆರು ತಿಂಗಳಿನಿಂದ ಜಮ್ಮುವಿನಲ್ಲಿ ಭಯೋತ್ಪಾದಕ ಸಂಬಂಧಿತ ಸರಣಿ ಘಟನೆಗಳು ನಡೆದಿದ್ದವು. ದಾಳಿಯ ಹಿಂದೆ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  ಭಿಕರ ಉಗ್ರ ದಾಳಿಗೆ ಖಂಡನೆ
  ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಭದ್ರತಾ ಪಡೆಗಳ ಮೇಲಿನ ಭೀಕರ ದಾಳಿಯನ್ನು ಖಂಡಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ, "ರಜೌರಿಯಲ್ಲಿ ಉಗ್ರರ ದಾಳಿಯ ನಂತರ ಮೂವರು ಯೋಧರು ಕರ್ತವ್ಯದ ಸಾಲಿನಲ್ಲಿ ಸಾವನ್ನಪ್ಪಿದ ಬಗ್ಗೆ ವಿಷಯ ತಿಳಿದು ತುಂಬಾ ವಿಷಾದ ಉಂಟಾಗಿದೆ" ಎಂದು ಅವರು ಹೇಳಿದ್ದಾರೆ.

  ಇದನ್ನೂ ಓದಿ: CJI U U Lalit: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಉದಯ್ ಉಮೇಶ್ ಲಲಿತ್ ನೇಮಕ

  ಹುತಾತ್ಮ ಸೈನಿಕರ ಕುಟುಂಬದ ಪರವಾಗಿ ಪ್ರಾರ್ಥನೆ

  "ದಾಳಿಯನ್ನು ಖಂಡಿಸುವ ಸಂದರ್ಭದಲ್ಲಿ ನಾನು ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ರಜೌರಿ ದಾಳಿಯಲ್ಲಿ ಗಾಯಗೊಂಡ ಅಧಿಕಾರಿಗಳು ಮತ್ತು ಯೋಧರು ಶೀಘ್ರವಾಗಿ ಚೇತರಿಸಿಕೊಳ್ಳಲು ನನ್ನ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.

  ಇದನ್ನೂ ಓದಿ: 8th Pay Commission: ಕೇಂದ್ರದಿಂದ ಮಹತ್ವದ ನಿರ್ಧಾರ, ಸರ್ಕಾರಿ ನೌಕರರಿಗೆ ಭಾರೀ ನಿರಾಸೆ!

  ಉಗ್ರ ದಾಳಿ ನಡೆಸಿದ ಸ್ಥಳಕ್ಕೆ ಹೆಚ್ಚುವರಿ ಪಡೆ

  ಭದ್ರತಾ ಅಧಿಕಾರಿಗಳು ಉಗ್ರರು ಆತ್ಮಾಹುತಿ ದಾಳಿ ನಡೆಸಿದ ಪ್ರದೇಶವನ್ನು ಸುತ್ತುವರೆದಿದ್ದಾರೆ.  ಹೆಚ್ಚುವರಿ ಪಡೆಗಳನ್ನು ಆ ಸ್ಥಳಕ್ಕೆ ಕಳುಹಿಸಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಕೆಲವು ದಿನಗಳ ಹಿಂದೆ ಈ ದಾಳಿ ನಡೆದಿದೆ. ಒಂದು ದಿನದ ಹಿಂದೆ, ಬುದ್ಗಾಮ್‌ನಲ್ಲಿ ಭದ್ರತಾ ಪಡೆಗಳು ಮೂವರು ಎಲ್‌ಇಟಿ ಭಯೋತ್ಪಾದಕರನ್ನು ಬಂಧಿಸಿದ್ದವು.
  Published by:guruganesh bhat
  First published: