ಜಮ್ಮು ಮತ್ತು ಕಾಶ್ಮೀರದ (Jammu Kashmir) ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ (Terrorist) ದಾಳಿಯಲ್ಲಿ ಇಬ್ಬರು ಕಾಶ್ಮೀರಿ ಪಂಡಿತ್ ಸಹೋದರರಲ್ಲಿ (Brothers) ಒಬ್ಬರು ಮೃತಪಟ್ಟಿದ್ದಾರೆ. ಕಾಶ್ಮೀರಿ ಪಂಡಿತ್ ಸಹೋದರರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ರಾಜಕೀಯ (Politics) ವಾಗ್ವಾದ ನಡೆದಿದೆ. ಕಾಶ್ಮೀರಿ ಪಂಡಿತರ (Kashmir Pandit) ಮೇಲಿನ ಭಯೋತ್ಪಾದಕರ ದಾಳಿ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿದ್ದು, ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದರ ಜೊತೆಗೆ ಕಾಶ್ಮೀರದಿಂದ 370 ನೇ ವಿಧಿ ತೆಗೆದು ಹಾಕಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. 370 ನೇ ವಿಧಿಯ ರದ್ದತಿಯಿಂದ ಕಾಶ್ಮೀರಿ ಪಂಡಿತರಿಗೆ ಲಾಭವಾಗಲಿದೆ ಎಂದು ಮೋದಿ ಸರ್ಕಾರ ಭಾವಿಸಿದೆ.
ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾದ ಓವೈಸಿ
ಆದರೆ 370 ನೇ ವಿಧಿಯ ರದ್ದತಿಯಿಂದ ಕಾಶ್ಮೀರಿ ಪಂಡಿತರು ಹೆಚ್ಚು ಅಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರವಾಗಿ ಖಂಡಿಸಿದ್ದಾರೆ.
ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡುವಲ್ಲಿ ಮತ್ತು ಪುನರ್ವಸತಿ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರಥ್ಯದ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದು ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: ನದಿಗೆ ಉರುಳಿದ ಬಸ್; 6 ಐಟಿಬಿಟಿ ಯೋಧರು ಹುತಾತ್ಮ; ಹಲವರಿಗೆ ಗಂಭೀರ ಗಾಯ
ಜಮ್ಮು ಮತ್ತು ಕಾಶ್ಮೀರಕ್ಕೆ ಲೆಫ್ಟಿನೆಂಟ್ ಗವರ್ನರ್‌ಗಳನ್ನು ಬಿಜೆಪಿ ನೇಮಕ ಮಾಡಿದೆ. ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ. ಹೀಗಿದ್ದರೂ ಬಿಜೆಪಿ ಸರ್ಕಾರ, ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ.
ಇದು ಬಿಜೆಪಿ ಸರ್ಕಾರದ ವೈಫಲ್ಯ. 370 ನೇ ವಿಧಿಯ ರದ್ದತಿಯಿಂದ ಕಾಶ್ಮೀರಿ ಪಂಡಿತರು ಹೆಚ್ಚು ಅಸುರಕ್ಷಿತರಾಗಿದ್ದಾರೆ. ಕಾಶ್ಮೀರಿ ಪಂಡಿತರು ತೊರೆಯಲು ಬಯಸುತ್ತಾರೆ. ಇದು ಸರ್ಕಾರದ ವೈಫಲ್ಯ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು ಎಂದಿದ್ದಾರೆ.
ಕಾಂಗ್ರೆಸ್ ಮೋದಿ ಮತ್ತು ಶಾ ಅವರಿಂದ ಉತ್ತರ ಕೇಳಲು ಬಯಸುತ್ತಿದೆ
ಕಾಶ್ಮೀರಿ ಪಂಡಿತ್ ಸಹೋದರರ ಮೇಲಿನ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿ, ಮೋದಿ ಸರ್ಕಾರದಿಂದ ಉತ್ತರ ಕೇಳಿದೆ. ಪ್ರಧಾನಿ ಮತ್ತು ಗೃಹ ಸಚಿವರು ತಮ್ಮ ಕಾಶ್ಮೀರ ನೀತಿಯ ಬಗ್ಗೆ ದೇಶವನ್ನು ಉದ್ದೇಶಿಸಿ ಶ್ವೇತಪತ್ರ ಮಂಡಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಮೋದಿ ಸರ್ಕಾರ ತನ್ನ ಕಾಶ್ಮೀರ ನೀತಿ ಏಕೆ ವಿಫಲವಾಗಿದೆ ಎಂಬುದನ್ನು ವಿವರಿಸಬೇಕು ಎಂದಿದ್ದಾರೆ.
ಇನ್ನು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸೇಬಿನ ತೋಟದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ಕಾಶ್ಮೀರಿ ಪಂಡಿತ್ ಸಾವನ್ನಪ್ಪಿದ್ದು, ಅವರ ಸಹೋದರ ಗಾಯಗೊಂಡಿದ್ದಾರೆ. ಮೃತರನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಯಲ್ಲಿ ಪಿಂಟು ಕುಮಾರ್ ಗಾಯಗೊಂಡಿದ್ದರು.
ಪೊಲೀಸ್ ವಕ್ತಾರರು, ಶೋಪಿಯಾನ್ ಜಿಲ್ಲೆಯ ಚೋಟಿಪುರದಲ್ಲಿರುವ ಸೇಬಿನ ತೋಟದಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ದಾಳಿ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಜಗತ್ತಿನ ಶಾಂತಿ ಕಾಪಾಡಲು ಮೋದಿಯಿಂದಷ್ಟೇ ಸಾಧ್ಯ! ಭಾರತದ ಸಾರಥ್ಯಕ್ಕೆ ಮೆಕ್ಸಿಕೋ ಪ್ರಧಾನಿ ಮನವಿ
ಇಬ್ಬರೂ ಅಲ್ಪಸಂಖ್ಯಾತ ಸಮುದಾಯದವರು. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರದೇಶದ ಸುತ್ತ ಕಟ್ಟೆಚ್ಚರ ವಹಿಸಲಾಗಿದೆ. ವಿವರವಾದ ಮಾಹಿತಿ ಶೀಘ್ರದಲ್ಲೇ ನೀಡಲಾಗುವುದು. ಕಳೆದ ಒಂದು ವಾರದಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗಿದೆ. ಭಾನುವಾರ ನೌಹಟ್ಟಾದಲ್ಲಿ ಒಬ್ಬ ಪೊಲೀಸ್ ಮತ್ತು ಕಳೆದ ವಾರ ಬಂಡಿಪೋರಾದಲ್ಲಿ ವಲಸೆ ಕಾರ್ಮಿಕನನ್ನು ಹತ್ಯೆಗೈಯ್ಯಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ