HOME » NEWS » National-international » TERRORIST DIED IN INDIAN ARMY ENCOUNTER WITH JAMMU KASHMIR POLICE IN PULWAMA AWANTIPORA SCT

ಕಾಶ್ಮೀರದ ಪುಲ್ವಾಮ ಬಳಿ ಎನ್​ಕೌಂಟರ್; ಭಾರತೀಯ ಸೇನೆಯಿಂದ ಓರ್ವ ಉಗ್ರನ ಹತ್ಯೆ

Encounter In Pulwama: ಆವಂತಿಪುರದಲ್ಲಿ ಭಾರತೀಯ ಸೇನಾ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ.

Sushma Chakre | news18-kannada
Updated:May 6, 2020, 9:55 AM IST
ಕಾಶ್ಮೀರದ ಪುಲ್ವಾಮ ಬಳಿ ಎನ್​ಕೌಂಟರ್; ಭಾರತೀಯ ಸೇನೆಯಿಂದ ಓರ್ವ ಉಗ್ರನ ಹತ್ಯೆ
ಸಾಂದರ್ಭಿಕ ಚಿತ್ರ
  • Share this:
ಶ್ರೀನಗರ (ಮೇ 6): ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಎನ್​ಕೌಂಟರ್​ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆವಂತಿಪುರದಲ್ಲಿ ಭಾರತೀಯ ಸೇನಾ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ. ಇಲ್ಲಿನ ಶರ್ಸಾಲಿ ಎಂಬ ಗ್ರಾಮದಲ್ಲಿ ಇನ್ನಷ್ಟು ಉಗ್ರರು ಅಡಗಿರುವ ಮಾಹಿತಿ ಸಿಕ್ಕಿರುವುದರಿಂದ ಎನ್​ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ಸುತ್ತಮುತ್ತಲಿನ 12ರಿಂದ 15 ಮನೆಗಳ ಜನರನ್ನು ಬೇರೆ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ. ಉಗ್ರನನ್ನು ಸದೆಬಡಿದ ಸ್ಥಳದಲ್ಲಿ ಒಂದು ಎಕೆ-56 ರೈಫಲ್​ ಅನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಕೋವಿಡ್​​-19: ದೇಶಾದ್ಯಂತ 67 ಬಿಎಸ್‌ಎಫ್ ಯೋಧರಿಗೆ ಸೋಂಕುಇಂದು ಮುಂಜಾನೆ ವೇಳೆಗೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾಪಡೆ ಕೂಡ ಫೈರಿಂಗ್ ನಡೆಸಿದೆ. ಈ ವೇಳೆ ಉಗ್ರನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. 2 ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ನಡೆಸಿದ್ದ ದಾಳಿಯಿಂದ ಮೂವರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದರು. ಇಲ್ಲಿನ 14 ವರ್ಷದ ನಾಗರಿಕನನ್ನು ಕೂಡ ಉಗ್ರರು ಹತ್ಯೆ ಮಾಡಿದ್ದರು. ಭಾನುವಾರ ಹಂದ್ವಾರದಲ್ಲಿ ಭದ್ರತಾ ಪಡೆಯ ಐವರು ಸಿಬ್ಬಂದಿಯನ್ನು ಉಗ್ರರು ಹತ್ಯೆ ಮಾಡಿದ್ದರು.
First published: May 6, 2020, 9:39 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories