ಜಮ್ಮುವಿನ ಪುಲ್ವಾಮಾದಲ್ಲಿ ಎನ್​ಕೌಂಟರ್​​​​; ಓರ್ವ ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆ

ಇತ್ತೀಚೆಗೆ ಅಂದರೆ ಡಿಸೆಂಬರ್​​ 31 ಮತ್ತು ಜನವರಿ 1ರಂದು ನೌಶೇರಾ ವಲಯದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಭಾರತೀಯ ಯೋಧರು ಸಾವನ್ನಪ್ಪಿದ್ದರು.

news18-kannada
Updated:January 7, 2020, 2:53 PM IST
ಜಮ್ಮುವಿನ ಪುಲ್ವಾಮಾದಲ್ಲಿ ಎನ್​ಕೌಂಟರ್​​​​; ಓರ್ವ ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆ
ಇತ್ತೀಚೆಗೆ ಅಂದರೆ ಡಿಸೆಂಬರ್​​ 31 ಮತ್ತು ಜನವರಿ 1ರಂದು ನೌಶೇರಾ ವಲಯದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಭಾರತೀಯ ಯೋಧರು ಸಾವನ್ನಪ್ಪಿದ್ದರು.
  • Share this:
ಶ್ರೀನಗರ(ಜ.07): ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆ ನಡುವೆ ನಡೆದ ಎನ್​ಕೌಂಟರ್​​​ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆವಂತಿಪುರ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಇಂದು ಬೆಳಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ದಾಳಿ ಶುರುವಾಗಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಭಾರತ್ ಬಂದ್ ಯಾಕೆ? ಬುಧವಾರ ಏನಿರುತ್ತೆ ಏನಿರಲ್ಲ? ಸರ್ಕಾರಕ್ಕೆ ಎಷ್ಟು ನಷ್ಟ? ಶಾಲಾ ಕಾಲೇಜು ಬಂದ್ ಆಗುತ್ತಾ?

ಎನ್​ಕೌಂಟರ್​ ನಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಶ್ಮೀರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಉಗ್ರನನ್ನು ಶಾಹಿದ್​ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಅಂದರೆ ಡಿಸೆಂಬರ್​​ 31 ಮತ್ತು ಜನವರಿ 1ರಂದು ನೌಶೇರಾ ವಲಯದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಭಾರತೀಯ ಯೋಧರು ಸಾವನ್ನಪ್ಪಿದ್ದರು. ಹುತಾತ್ಮ ಯೋಧರನ್ನು ನೈಕ್​​ ಸಾವಂತ್​ ಸಂದೀಪ್​ ರಘುನಾಥ್​ ಮತ್ತು ರೈಫೆಲ್​ಮ್ಯಾನ್​ ಅರ್ಜುನ್​ ಥಪಾ ಮಗರ್​ ಎಂದು ಗುರುತಿಸಲಾಗಿತ್ತು.

 

ಪೆಟ್ರೋಲ್​​-ಡೀಸೆಲ್​​​ ಬೆಲೆಯಲ್ಲಿ ಮತ್ತೆ ಏರಿಕೆ; ಸದ್ಯದಲ್ಲೇ ಲೀಟರ್​​​ ದರ 80 ರೂ. ಗಡಿ ದಾಟಿದರೂ ಅಚ್ಚರಿಯಿಲ್ಲ 

 

 
First published:January 7, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading