ಜಮ್ಮು ಕಾಶ್ಮೀರದ ಸೋಪೋರ್​ನಲ್ಲಿ ಇಂದು ಮುಂಜಾನೆ ಉಗ್ರರ ದಾಳಿ; ಓರ್ವ ಸಿಆರ್​ಪಿಎಫ್ ಯೋಧ, ನಾಗರಿಕ ಸಾವು

Jammu Kashmir Terrorists Attack: ಇಂದು ಮುಂಜಾನೆ ಜಮ್ಮು ಕಾಶ್ಮೀರ ಸೋಪೋರ್​ನಲ್ಲಿ ಸಿಆರ್​ಪಿಎಫ್ ಪಡೆಯ ಸಿಬ್ಬಂದಿ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಯೋಧ, ಓರ್ವ ಸ್ಥಳೀಯ ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಶ್ರೀನಗರ (ಜು. 1): ಇಂದು ಮುಂಜಾನೆಯಿಂದ ಜಮ್ಮು ಮತ್ತು ಕಾಶ್ಮೀರದ ಸೋಪೋರಾ ಪ್ರದೇಶದಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಇಂದು ಬೆಳಗ್ಗೆ ಕರ್ತವ್ಯ ನಿರತ ಸಿಆರ್​ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಯೋಧ ಮತ್ತು ಓರ್ವ ಸ್ಥಳೀಯ ಸಾವನ್ನಪ್ಪಿದ್ದಾರೆ.

ಭಾರತೀಯ ಸಿಆರ್​ಪಿಎಫ್ ಪಡೆಯ ಸಿಬ್ಬಂದಿ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಿಂದ ನಾಲ್ವರು ಯೋಧರು ಗಾಯಗೊಂಡಿದ್ದರು. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಸ್ಥಳೀಯ ಕೂಡ ಸಾವನ್ನಪ್ಪಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ.ಸೋಪೋರ್​ನಲ್ಲಿನ ಮಾಡೆಲ್ ಟೌನ್​ನಲ್ಲಿ ನಾಕಾ ಪಾರ್ಟಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿ ನಡೆದ ಸ್ಥಳದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಮ್ಮು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
First published: