• Home
  • »
  • News
  • »
  • national-international
  • »
  • Bharat Jodo Yatra: ಭಾರತ್‌ ಜೋಡೋ ಯಾತ್ರಾದಲ್ಲಿ ಕೇಳಿ ಬಂತಾ ಪಾಕ್ ಪರ ಘೋಷಣೆ? ಬಿಜೆಪಿ ಗಂಭೀರ ಆರೋಪ

Bharat Jodo Yatra: ಭಾರತ್‌ ಜೋಡೋ ಯಾತ್ರಾದಲ್ಲಿ ಕೇಳಿ ಬಂತಾ ಪಾಕ್ ಪರ ಘೋಷಣೆ? ಬಿಜೆಪಿ ಗಂಭೀರ ಆರೋಪ

ಭಾರತ್ ಜೋಡೋ ಯಾತ್ರೆ

ಭಾರತ್ ಜೋಡೋ ಯಾತ್ರೆ

ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಮೊಳಗಿಸಲಾಗಿದೆ ಅಂತ ಬಿಜೆಪಿ ಗಂಭೀರ ಆರೋಪ ಮಾಡಿದೆ. ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳುವ ಮೂಲಕ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

  • News18 Kannada
  • Last Updated :
  • Madhya Pradesh, India
  • Share this:

ಮಧ್ಯಪ್ರದೇಶ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಮಧ್ಯಪ್ರದೇಶ(Madhya Pradesh) ತಲುಪಿದೆ. ಈ ವೇಳೆ ರಾಹುಲ್ ಗಾಂಧಿಗೆ ಸಹೋದರಿ ಪ್ರಿಯಾಂಕಾ ಗಾಂಧಿ (Priyanka Gandhi) ಸೇರಿದಂತೆ ಪ್ರಮುಖರು ಸಾಥ್ ನೀಡಿದ್ದಾರೆ. ಈ ವೇಳೆ ಪಾಕಿಸ್ತಾನದ (Pakistan) ಪರ ಘೋಷಣೆ ಮೊಳಗಿದೆ ಅಂತ ಬಿಜೆಪಿ ಆರೋಪಿಸಿದೆ. ಮಧ್ಯಪ್ರದೇಶದ ಖಾರ್ಗೊನ್ ಬಳಿ ಯಾತ್ರೆ ಸಂಚರಿಸುತ್ತಿರುವ ವೇಳೆ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಐಟಿ ಸೆಲ್ (BJP IT Cell) ಮುಖ್ಯಸ್ಥ ಅಮಿತ್ ಮಾಳವಿಯಾ ಈ ಕುರಿತು ವಿಡಿಯೋ ಪೋಸ್ಟ್ ಮಾಡಿದ್ದಾರೆ.  ವಿಡಿಯೋದ ಅಂತ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವುದನ್ನು ಗಮನಿಸಿ ಎಂದು ಬರೆದುಕೊಂಡಿದ್ದಾರೆ. ಆದರೆ ಬಿಜೆಪಿ ಆರೋಪವನ್ನು ಕಾಂಗ್ರೆಸ್ ಅಲ್ಲಗಳೆದಿದೆ. ಭಾರತ್ ಜೋಡೋ ಯಾತ್ರೆಯ ಅದ್ಭುತ ಯಶಸ್ಸಿನಿಂದಾಗಿ ಇಂತಹ ತಂತ್ರಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಅಂತ ಕಾಂಗ್ರೆಸ್ ತಿರುಗೇಟು ನೀಡಿದೆ.


ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ?


ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಮೊಳಗಿಸಲಾಗಿದೆ ಅಂತ ಬಿಜೆಪಿ ಗಂಭೀರ ಆರೋಪ ಮಾಡಿದೆ. ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳುವ ಮೂಲಕ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.



21 ಸೆಕೆಂಡ್‌ಗಳ ಕ್ಲಿಪ್ ಶೇರ್


ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಯಾತ್ರೆಯ 21 ಸೆಕೆಂಡ್‌ಗಳ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು ಮತ್ತು ಕೊನೆಯಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ಕೂಗುವ ಧ್ವನಿ ಕೇಳಿಬರುತ್ತಿದೆ.


ಇದನ್ನೂ ಓದಿ: Bharat Jodo: ರಾಹುಲ್ ಯಾತ್ರೆ ಉಲ್ಲೇಖಿಸಿ ಕಾಂಗ್ರೆಸ್​ಗೆ ಮರಳುವ ಸೂಚನೆ ನೀಡಿದ್ರಾ ಸಿಂಧಿಯಾ?


ಬಿಜೆಪಿ ಆರೋಪ ಅಲ್ಲಗಳೆದ ಕಾಂಗ್ರೆಸ್


ಇನ್ನು ಬಿಜೆಪಿ ಆರೋಪವನ್ನು ಕಾಂಗ್ರೆಸ್ ಅಲ್ಲಗಳೆದಿದೆ. ಇದೊಂದು ನಕಲಿ ವಿಡಿಯೋ ಅಂತ ಆರೋಪಿಸಿದೆ. ಇದು ಆಡಳಿತ ಪಕ್ಷದ "ಡರ್ಟಿ ಟ್ರಿಕ್ಸ್" ಅಂತ ಟೀಕಿಸಿದೆ. ಭಾರತ್ ಜೋಡೋ ಯಾತ್ರೆಯ ಅದ್ಭುತ ಯಶಸ್ಸಿನಿಂದಾಗಿ ಇಂತಹ ಬಿಜೆಪಿ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಇನ್ನು ಬಿಜೆಪಿ ಈ ವೀಡಿಯೊಗಳನ್ನು ಡಿಲೀಟ್ ಮಾಡಬೇಕು, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ಧರಾಗಿರಿ ಎಂದು ಎಚ್ಚರಿಸಿದೆ.


ಜೈರಾಮ್ ರಮೇಶ್ ಗರಂ


ಬಿಜೆಪಿ ಆರೋಪವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಳ್ಳಿ ಹಾಕಿದ್ದಾರೆ. ಸಾರ್ವಜನಿಕರ ಅಭೂತಪೂರ್ವ ಬೆಂಬಲ ನೋಡಿ ಬಿಜೆಪಿ ತಲೆಕೆಡಿಸಿಕೊಂಡಿದೆ. ಇದರಿಂದ ಆಘಾತಕ್ಕೊಳಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಸುಳ್ಳಿ ವಿಡಿಯೋಗಳನ್ನು ಹಾಕಿ ಭಾರತ್ ಜೋಡೋ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.


ಇದನ್ನೂ ಓದಿ: Savarkar: ಸಾವರ್ಕರ್‌ ಮೇಲೆ ಕಾಂಗ್ರೆಸ್ ಆರೋಪವೇನು? ಒಮ್ಮೆ ಹೊಗಳಿಕೆ, ಮತ್ತೊಮ್ಮೆ ತೆಗಳಿಕೆ ಏಕೆ?


ಸಹೋದರನಿಗೆ ಸಾಥ್ ಕೊಟ್ಟ ಪ್ರಿಯಾಂಕಾ


ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಮತ್ತು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿರುವ ನರ್ಮದಾ ಘಾಟ್‌ನಲ್ಲಿ 'ಆರತಿ' ಮಾಡಿದರು. ಕಮಲ್ ನಾಥ್, ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಮಗ ರೆಹಾನ್ ಅವರು ಮಧ್ಯಪ್ರದೇಶದ ಯಾತ್ರೆಯ ಮೂರನೇ ದಿನದಂದು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು.

Published by:Annappa Achari
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು