HOME » NEWS » National-international » THE FIGHT WILL NOT STOP UNTIL LAKSHADWEEP GETS JUSTICE SAYS AISHA SULTAN MAK

Lakshadeep| ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ; ಆಯೆಷಾ ಸುಲ್ತಾನ್

ಯಾವುದೇ ಕೇಸ್‌ಗಳಿಗೂ ಹೆದರುವುದಿಲ್ಲ. ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಕೊಚ್ಚಿ ವಿಮಾನ ನಿಲ್ಧಾಣದಲ್ಲಿ ಆಯಿಷಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

news18-kannada
Updated:June 19, 2021, 11:44 PM IST
Lakshadeep| ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ; ಆಯೆಷಾ ಸುಲ್ತಾನ್
ನಿರ್ಮಾಪಕಿ ಆಯೆಷಾ ಸುಲ್ತಾನ್.
  • Share this:
ಕೊಚ್ಚಿ (ಜೂನ್ 19); ಲಕ್ಷದ್ವೀಪದ ಮೇಲೆ ಕೇಂದ್ರ ಸರ್ಕಾರ ಜೈವಿಕ ಬಾಂಬ್ ಪ್ರಯೋಗಿಸಿದೆ ಎಂದು ಕಿಡಿಕಾರುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿ ನಂತರ ಕೇರಳ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದ ಚಿತ್ರ ನಿರ್ಮಾಪಕಿ ಆಯೆಷಾ ಸುಲ್ತಾನ್ ಇದೀಗ  ಲಕ್ಷದ್ವೀಪಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಶನಿವಾರ ಆಯಿಷಾ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಯಾವುದೇ ಕೇಸ್‌ಗಳಿಗೂ ಹೆದರುವುದಿಲ್ಲ. ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಕೊಚ್ಚಿ ವಿಮಾನ ನಿಲ್ಧಾಣದಲ್ಲಿ ಆಯಿಷಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಭಾನುವಾರ ಕಮರತ್ತಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲು ಆಯಿಷಾ ಲಕ್ಷದ್ವೀಪಕ್ಕೆ ತೆರಳಿದ್ದಾರೆ. ಅಲ್ಲದೆ, ತಮ್ಮ ಜೊತೆ ವಕೀಲರನ್ನು ಸಹ ಕರೆದುಕೊಂಡು ಹೋಗುವುದಾಗಿ ಆಯಿಷಾ ತಿಳಿಸಿದ್ದಾರೆ.

ನ್ಯಾಯ ಸಿಗುವ ಭರವಸೆಯಿದೆ. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದೆ ಎಂದು ಆಯಿಷಾ ಸುಲ್ತಾನಾ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. "ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಒಂದು ಪದದಿಂದ ಇಷ್ಟೆಲ್ಲಾ ರಾದ್ಧಾಂತ ಸಂಭವಿಸಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಬೀತು ಪಡಿಸುವ ಜವಾಬ್ಧಾರಿಯಿದೆ. ನಾನು ಸಾಬೀತು ಪಡಿಸುತ್ತೇನೆ" ಎಂದು ಆಯಿಷಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸಾತಾನ್ ಕುಳಂ ಲಾಕಪ್​ ಡೆತ್​ಗೆ 1 ವರ್ಷ; ಇನ್ನೂ ಮುಗಿಯದ CBI ತನಿಖೆ, ನ್ಯಾಯದ ನಿರೀಕ್ಷೆಯಲ್ಲಿ ಕುಟುಂಬ

ಮಲಯಾಳಂ ಟಿವಿ ಡಿಬೇಟ್ ಒಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಆಯಿಷಾ ಲಕ್ಷದ್ವೀಪ ಲೆಫ್ಟೆನೆಂಟ್ ಗವರ್ನರ್ ವಿರುದ್ಧ ಆಕ್ಷೇಪಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಲಕ್ಷದ್ವೀಪದ ಕವರತ್ತಿ ಪೊಲೀಸರು ಆಯಿಷಾ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹಾಗೇ ಜೂನ್ 20 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದ್ದರು. ಆಯಿಷಾ ಆ ಕಾರಣದಿಂದ ವಿಚಾರಣೆ ಎದುರಿಸಲು ಲಕ್ಷದ್ವೀಪಕ್ಕೆ ತೆರಳಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: MAshok Kumar
First published: June 19, 2021, 11:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories