ನವ ದೆಹಲಿ (ಮಾರ್ಚ್ 18); ಮಧ್ಯಪ್ರದೇಶದ ಅತೃಪ್ತ ಕಾಂಗ್ರೆಸ್ ಶಾಸಕರ ರಾಜೀನಾಮೆ ಅರ್ಜಿಯನ್ನು ಸ್ಪೀಕರ್ ಅಂಗೀಕರಿಸಬೇಕು ಮತ್ತು ಕೂಡಲೇ ಬಹುಮತ ಸಾಬೀತಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ಮುಂದೂಡಿದೆ. ಅಲ್ಲದೆ, ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಕೊಂಡಂತಾಗಿದೆ.
ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಪರಿಣಾಮ ಅಲ್ಲಿನ ಕಾಂಗ್ರೆಸ್ ಸರ್ಕಾರದ ಮೇಲೆ ತಮಗೆ ವಿಶ್ವಾಸ ಇಲ್ಲ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 22 ಶಾಸಕರು ಕರ್ನಾಟಕಕ್ಕೆ ಆಗಮಿಸಿ ಆಶ್ರಯಪಡೆದರು. ಪರಿಣಾಮ ಕಮಲನಾಥ್ ಸರ್ಕಾರ ಅಲ್ಪ ಮತಕ್ಕೆ ಕುಸಿಯಿತು.
ಆದರೆ, ವಿಧಾನ ಮಂಡಲ ಅಧಿವೇಶನವನ್ನೇ 10 ದಿನಗಳ ಕಾಲ ಮುಂದೂಡಿದರು. ಅಲ್ಲದೆ, ಅತೃಪ್ತ ಶಾಸಕರ ರಾಜೀನಾ
ರಾಜ್ಯಪಾಲರ ನಿರ್ದೇಶನದ ಮೇರೆಗೆ ವಿಶ್ವಾಸಮತ ಯಾಚನೆಗೆ ತಾಕೀತು ಮಾಡಬೇಕಿದ್ದ ಸ್ಪೀಕರ್ ಕೊರೋನಾ ಭೀತಿಯಿಂದಮೆ ಅರ್ಜಿಯನ್ನೂ ಈವರೆಗೆ ಅಂಗೀಕಾರ ಮಾಡಿಲ್ಲ. ಹೀಗಾಗಿ ಮಧ್ಯಪ್ರದೇಶದಲ್ಲೂ ಕರ್ನಾಟಕದ ಮಾದರಿಯಲ್ಲೇ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು ಇದನ್ನು ಪ್ರಶ್ನಿಸಿ ಎಲ್ಲಾ ಶಾಸಕರು ಸುಪ್ರೀಂ ಮೆಟ್ಟಿಲೇರಿದ್ದರು.
ಈ ಕುರಿತ ಪ್ರಕರಣದ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, "ಶಾಸಕರ ರಾಜೀನಾಮೆಯನ್ನು ಅಂಗೀಕಾರ ಮಾಡುವುದು ಅಥವಾ ಬಿಡುವುದು ಸ್ಪೀಕರ್ ವಿವೇಚನಾ ಅಧಿಕಾರಕ್ಕೆ ಬಿಟ್ಟ ವಿಚಾರ. ಸ್ಪೀಕರ್ ಅಧಿಕಾರದಲ್ಲಿ ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ" ಎಂದು ತೀರ್ಪು ನೀಡಿದೆ. ಹೀಗಾಗಿ ಕಮಲನಾಥ್ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡರೆ ಕರ್ನಾಟಕದಲ್ಲಿರುವ ಅತೃಪ್ತ ಶಾಸಕರು ಒತ್ತಡಕ್ಕೆ ಸಿಲುಕಿದಂತಾಗಿದೆ. ಅಲ್ಲದೆ, ಖುದ್ದಾಗಿ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಬೇಕಾದ ಸಂಕಷ್ಟಕ್ಕೆ ಒಳಗಾದಂತಾಗಿದೆ.
ಇದನ್ನೂ ಓದಿ : ರಾಜ್ಯ ಕಾಂಗ್ರೆಸ್ ನಾಯಕರ ಹೆಗಲಿಗೆ ಮನವೊಲೈಕೆ ಟಾಸ್ಕ್; ರೆಸಾರ್ಟ್ ಮುಂದೆ ಪ್ರತಿಭಟನೆಗೆ ಸಿದ್ದರಾಮಯ್ಯ, ಡಿಕೆಶಿ ತಂಡ ಸಿದ್ಧತೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ