Lakhimpur Kheri violence; ಮೂರು ದೇಹಗಳ ಅಂತ್ಯಸಂಸ್ಕಾರಕ್ಕೆ ರೈತರ ಒಪ್ಪಿಗೆ; ನ್ಯಾಯಾಂಗ ತನಿಖೆಗೆ ಆಗ್ರಹ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರಾದ ಸುಶ್ಮಿತಾ ದೇವ್ ಮತ್ತು ಕಾಕೋಲಿ ಘೋಷ ದಾಸ್ತಿದಾರ್ ಅವರು ಮಂಗಳವಾರ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೊಲ್ಲಲ್ಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಹಿಂಸಾಚಾರ ನಡೆದ ಸ್ಥಳ

ಲಖಿಂಪುರ್ ಖೇರಿಯಲ್ಲಿ ಹಿಂಸಾಚಾರ ನಡೆದ ಸ್ಥಳ

 • Share this:
  ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಅಕ್ಟೋಬರ್ 3 ರಂದು ಉತ್ತರಪ್ರದೇಶದ ಲಖಿಂಪುರ್ ಖೇರಿ (Uttar Pradesh  Lakhimpur Kheri  Violence) ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಶಿಕ್ಷಿಸಲು ಗೃಹ ಸಚಿವಾಲಯ (Union Home Ministry) ಮತ್ತು ಉತ್ತರ ಪ್ರದೇಶ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಲಾಗಿದೆ. ಇಬ್ಬರು ವಕೀಲರು ಸಲ್ಲಿಸಿದ ಅರ್ಜಿಯಲ್ಲಿ, ನಿಗದಿತ ಸಮಯದಲ್ಲಿ ಸಿಬಿಐ ಒಳಗೊಂಡ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆ (Judicial Probe) ನಡೆಸುವಂತೆಯೂ ಕೋರಲಾಗಿದೆ.

  ಏತನ್ಮಧ್ಯೆ, ಸೀತಾಪುರದ ಅತಿಥಿಗೃಹದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಸೆಕ್ಷನ್ 144 ಉಲ್ಲಂಘಿಸಿ ಮತ್ತು ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಐಪಿಸಿಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಮೂಲಗಳ ಪ್ರಕಾರ ಪ್ರಿಯಾಂಕಾ ಗಾಂಧಿ ಅವರನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. ಆದರೆ, ಗಾಂಧಿ ಕಚೇರಿಯು ಇದನ್ನು ನಿರಾಕರಿಸಿದೆ.

  ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಭೇಟಿಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟವರ ಶವ ಸಂಸ್ಕಾರ ಮಾಡಲು ಪ್ರತಿಭಟನಾನಿರತ ರೈತರು ಒಪ್ಪಿಕೊಂಡಿದ್ದಾರೆ. ನಾಲ್ಕನೇ ಮೃತ ದೇಹವನ್ನು ದೆಹಲಿಯಿಂದ ಆಗಮಿಸುವ ವೈದ್ಯರ ತಂಡವು ಬಹ್ರೈಚ್‌ನಲ್ಲಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಕಳುಹಿಸುತ್ತದೆ.

  ಏತನ್ಮಧ್ಯೆ, ಶಿವಸೇನಾ ನಾಯಕ ಸಂಜಯ್ ರಾವತ್ ಅವರು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದರು. ವಿರೋಧ ಪಕ್ಷದ ನಿಯೋಗ ಉತ್ತರ ಪ್ರದೇಶದ ಲಖಿಂಪುರ್ ಖೇರಿಗೆ ಭೇಟಿ ನೀಡುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಆ ಬಗ್ಗೆ ಚರ್ಚಿಸಲಾಗಿದೆ ಎಂದಷ್ಟೇ ಅವರು ಮಾಧ್ಯಮಗಳಿಗೆ ಹೇಳಿದರು.

  ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ (Uttar Pradesh  Lakhimpur Kheri Incident) ಭಾನುವಾರ ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ ನಾಲ್ವರು ರೈತರಿಗೆ ಸಾಂತ್ವನ ಹೇಳಲು ಲಕ್ನೋಗೆ ಬಂದ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Chhattisgarh Chief Minister Bhupesh Baghel) ಅವರನ್ನು ಲಕ್ನೋ ವಿಮಾನ ನಿಲ್ದಾಣದಲ್ಲೇ ತಡೆದ ಘಟನೆ ನಡೆದಿದೆ. ಲಕ್ನೋ ವಿಮಾನ ನಿಲ್ದಾಣದಲ್ಲಿ (Lucknow Airport) ತಮ್ಮನ್ನು ತಡೆದ ಪೊಲೀಸ್ ಅಧಿಕಾರಿಗಳ ನಡೆ ವಿರೋಧಿಸಿ ಮುಖ್ಯಮಂತ್ರಿ ಬಘೇಲ್ ಅವರು ಸ್ಥಳದಲ್ಲಿಯೇ ಕುಳಿತ ಪ್ರತಿಭಟನೆ ಸಹ ನಡೆಸಿದರು.

  ಲಖಿಂಪುರ್ ಖೇರಿಗೆ ಬರುವುದಾಗಿ ಘೋಷಣೆ ಮಾಡಿದ್ದ ಛತ್ತೀಸ್‌ಗಢದ ಮುಖ್ಯಮಂತ್ರಿ ಬಘೇಲ್ ಮತ್ತು ಪಂಜಾಬ್‌ನ ಉಪಮುಖ್ಯಮಂತ್ರಿ ಸುಖಜಿಂದರ್ ಎಸ್ ರಾಂಧವಾ ಅವರ ಆಗಮನಕ್ಕೆ ಅವಕಾಶ ನೀಡದಂತೆ ಉತ್ತರ ಪ್ರದೇಶ ಸರ್ಕಾರವು ಲಕ್ನೋ ವಿಮಾನ ನಿಲ್ದಾಣದ ಪ್ರಾಧಿಕಾರವನ್ನು ವಿನಂತಿಸಿತ್ತು. ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಹಿರಿಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿರುವ ಬಘೇಲ್ ಅವರು, ಲಖಿಂಪುರ್ ಘಟನೆಯು ಬಿಜೆಪಿ ವಿರುದ್ಧ ಧ್ವನಿ ಎತ್ತುವವರನ್ನು ತುಳಿಯಲಾಗುತ್ತದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

  ಇನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರಾದ ಸುಶ್ಮಿತಾ ದೇವ್ ಮತ್ತು ಕಾಕೋಲಿ ಘೋಷ ದಾಸ್ತಿದಾರ್ ಅವರು ಮಂಗಳವಾರ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೊಲ್ಲಲ್ಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

  ಇದನ್ನು ಓದಿ: Baghel Sits on Dharna: ಸಿಎಂ ಬಘೇಲ್​ರನ್ನು ಲಕ್ನೋ ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು; ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮಾಡಿದ ಮುಖ್ಯಮಂತ್ರಿ

  ಸಹಜ ಸ್ಥಿತಿಯತ್ತ ಲಿಖಿಂಪುರ್ ಖೇರಿ

  ಎರಡು ದಿನಗಳ ಹಿಂದೆ ನಡೆದ ರೈತರ ಪ್ರತಿಭಟನೆಯಲ್ಲಿ ಹಿಂಸಾಚಾರದಿಂದ ತತ್ತರಿಸಿದ ಲಖಿಂಪುರ್ ಖೇರಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳಿದೆ.  ರಸ್ತೆಗಳು ಮತ್ತು ಅಂಗಡಿಗಳಲ್ಲಿ ಇಂದು ತೆರೆಯುವ ಮೂಲಕ ಎಂದಿನಂತೆ ವ್ಯಾಪಾರ ವಹಿವಾಟು ನಡೆದವು. ನಿಯಮಿತ ಸಂಚಾರ ಕಂಡುಬಂತು.
  Published by:HR Ramesh
  First published: