• ಹೋಂ
 • »
 • ನ್ಯೂಸ್
 • »
 • ದೇಶ-ವಿದೇಶ
 • »
 • Godhra Riots: ಗೋದ್ರಾ ಪ್ರಕರಣದ ಕೈದಿಗಳ ಬಿಡುಗಡೆ: ಕಡತಗಳೊಂದಿಗೆ ಸಿದ್ಧರಾಗುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

Godhra Riots: ಗೋದ್ರಾ ಪ್ರಕರಣದ ಕೈದಿಗಳ ಬಿಡುಗಡೆ: ಕಡತಗಳೊಂದಿಗೆ ಸಿದ್ಧರಾಗುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

ಸುಪ್ರೀಂ ಕೋರ್ಟ್‌

ಸುಪ್ರೀಂ ಕೋರ್ಟ್‌

2002ರ ಗೋಧ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಅನೇಕ ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ 11 ಮಂದಿ ಆರೋಪಿಗಳನ್ನು ಪ್ರಕರಣದಿಂದ ಮುಕ್ತಗೊಳಿಸಲಾಗಿತ್ತು. ಇದರ ವಿರುದ್ಧ ಸಂತ್ರಸ್ತ ಮಹಿಳೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಮುಂದೆ ಓದಿ ...
 • Share this:

ನವದೆಹಲಿ: 2002ರಲ್ಲಿ ನಡೆದ ಗೋಧ್ರಾ ಹತ್ಯಾಕಾಂಡದ (Godhra Riots) ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಸರ್ಕಾರಕ್ಕೆ (Gujarat State Govt) ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ.


ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್ ಬಾನೊ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಗುಜರಾತ್ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದ್ದು, ನ್ಯಾಯಾಲಯಗಳ ಮುಂದೆ ಅನೇಕ ಕೊಲೆ ಪ್ರಕರಣಗಳಿದ್ದು, ಅಪರಾಧಿಗಳು ಕ್ಷಮಾಪಣೆ ಇಲ್ಲದೆ ಅನೇಕ ವರ್ಷಗಳಿಂದ ಜೈಲುಗಳಲ್ಲಿಯೇ ಕೊಳೆಯುತ್ತಿದ್ದಾರೆ. ಇತರ ಪ್ರಕರಣಗಳಂತೆ ಇಲ್ಲಿಯೂ ಏಕರೂಪ ಮಾನದಂಡಗಳನ್ನು ಅನ್ವಯಿಸಲಾಗಿದೆಯೇ ಎಂದು ನ್ಯಾಯಮೂರ್ತಿ ಜೋಸೆಫ್ ಪ್ರಶ್ನಿದ್ದಾರೆ.


ಇದನ್ನೂ ಓದಿ: Bilawal Bhutto: ಗುಜರಾತ್​ನ ಕಟುಕ ಇನ್ನೂ ಜೀವಂತವಾಗಿದ್ದಾನೆ: ಮೋದಿ ವಿರುದ್ಧ ಪಾಕ್​ ಸಚಿವನ ಅಸಭ್ಯ ಹೇಳಿಕೆ!


2002ರ ಗೋಧ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಅನೇಕ ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ 11 ಮಂದಿ ಆರೋಪಿಗಳನ್ನು ಪ್ರಕರಣದಿಂದ ಮುಕ್ತಗೊಳಿಸಲಾಗಿತ್ತು. ಇದರ ವಿರುದ್ಧ ಸಂತ್ರಸ್ತ ಮಹಿಳೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ  ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ, ಇದರಲ್ಲಿ ಸಮಸ್ಯೆಗಳ ಸರಮಾಲೆಯೇ ಇದ್ದು, ವಿವರವಾಗಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೇಳಿ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.


ಇದನ್ನೂ ಓದಿ: Bilkis Bano: 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಏಕೆ? ಸುಪ್ರೀಂ ಕದ ತಟ್ಟಿದ ಸಂತ್ರಸ್ತೆ ಬಿಲ್ಕಿಸ್ ಬಾನೋ


ಮುಂದುವರಿದು, ಪ್ರಕರಣದಲ್ಲಿ ಭಾವನೆಗಳಿಂದ ಮುಳುಗುವುದಿಲ್ಲ ಮತ್ತು ಕಾನೂನಿನ ಮೂಲಕ ಮಾತ್ರ ಹೋಗುತ್ತದೆ. ಈ ಅಪರಾಧ ಭಯಾನಕವಾಗಿದೆ ಎಂದು ಮೌಖಿಕವಾಗಿ ಸೂಚಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಗುಜರಾತ್ ಸರ್ಕಾರ ಮತ್ತು ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಮುಂದಿನ ವಿಚಾರಣೆ ದಿನದಂದು ಕಕ್ಷಿದಾರರ ಕ್ಷಮಾದಾನಕ್ಕೆ ಸಂಬಂಧಿಸಿದಂತೆ ಕಡತಗಳೊಂದಿಗೆ ಸಿದ್ಧವಾಗುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ ನೀಡಿದೆ.


ಆಗಸ್ಟ್ 15ರಂದು ಅಪರಾಧಿಗಳ ಬಿಡುಗಡೆ


ಕಳೆದ ವರ್ಷ ನವೆಂಬರ್ 30 ರಂದು ಗುಜರಾತ್ ಸರ್ಕಾರ 11 ಜೀವಾವಧಿ ಕೈದಿಗಳ ತಾತ್ಕಾಲಿಕ ಬಿಡುಗಡೆ ಪ್ರಶ್ನಿಸಿ ಬಾನೊ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ನಂತರ ಕಳೆದ ಡಿಸೆಂಬರ್‌ನಲ್ಲಿ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಂಡಿತ್ತು. ಎಲ್ಲಾ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ವಿನಾಯಿತಿ ನೀಡಿದ್ದರಿಂದ ಕಳೆದ ವರ್ಷ ಆಗಸ್ಟ್ 15 ರಂದು ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.


top videos  ಗುಜರಾತ್ ಸರ್ಕಾರವು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಕಳೆದ ನವೆಂಬರ್ 30 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗಳ ಬಿಡುಗಡೆಯು ಸಮಾಜದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಎಂದು ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 4 ರಂದು, ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು, ಬಿಲ್ಕಿಸ್ ಬಾನು ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಕೈಗೆತ್ತಿಕೊಂಡಿತ್ತು. ಆದರೆ ನ್ಯಾ. ಬೇಲಾ ಎಂ ತ್ರಿವೇದಿ ಅವರು ಯಾವುದೇ ಕಾರಣ ನೀಡದೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.

  First published: