news18-kannada Updated:April 19, 2020, 8:30 AM IST
ಪ್ರಾತಿನಿಧಿಕ ಚಿತ್ರ
ನವದೆಹಲಿ(ಏ.19): ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಮೂವರು ಸಿಆರ್ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಇನ್ನೂ ಹಲವು ಯೋಧರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕರು ಸಿಆರ್ಪಿಎಫ್ನ 179ನೇ ಬೆಟಾಲಿಯನ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಚೆಕ್ಪೋಸ್ಟ್ ಬಳಿ ಗುಂಡಿನ ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಶ್ರೀನಗರದಿಂದ 50 ಕಿ.ಮೀ.ದೂರ ಇರುವ ಸೋಪೋರ್ನ ಅಹಬ್ ಸಹಬ್ ಬೈಪಾಸ್ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ವಿಶ್ವಾದ್ಯಂತ 23 ಲಕ್ಷ ಜನರಿಗೆ ಕೊರೋನಾ; ಅಮೆರಿಕದಲ್ಲಿ 40 ಸಾವಿರದ ಗಡಿ ಸಮೀಪಿಸಿದ ಸಾವಿನ ಸಂಖ್ಯೆ
ಉಗ್ರರನ್ನು ಸೆದೆ ಬಡಿಯಲು ದಾಳಿ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಕಳೆದ ಒಂದು ವಾರದಿಂದ ಕಾಶ್ಮೀರ ಕಣಿವೆಯಲ್ಲಿ ಪ್ಯಾರಾ ಮಿಲಿಟರಿ ಮೇಲೆ ನಡೆದ ಮೂರನೇ ದಾಳಿಯಾಗಿದೆ.
ಶುಕ್ರವಾರ ನಡೆದಿದ್ದ ಉಗ್ರರ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದರು. ಉಗ್ರರು ಪುಲ್ವಾಮಾ ಚೆಕ್ಪೋಸ್ಟ್ ಬಳಿ ಗುಂಡಿನ ದಾಳಿ ನಡೆಸಿದ್ದರು.
First published:
April 19, 2020, 8:30 AM IST